AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿ ರೇವಣ್ಣ, ಬಿಎಸ್​ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಪ್ರಜ್ವಲ್ ಜಾಮೀನು ಅರ್ಜಿ ವಾಪಸ್

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್​​ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯೂ ಮುಂದೂಡಲಾಗಿದೆ. ಜೊತೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆಯಲಾಗಿದೆ.

ಹೆಚ್​​ಡಿ ರೇವಣ್ಣ, ಬಿಎಸ್​ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಪ್ರಜ್ವಲ್ ಜಾಮೀನು ಅರ್ಜಿ ವಾಪಸ್
ಎಚ್​​ಡಿ ರೇವಣ್ಣ, ಬಿಎಸ್​ವೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಪ್ರಜ್ವಲ್ ಜಾಮೀನು ಅರ್ಜಿ ವಾಪಸ್
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 12, 2024 | 3:55 PM

Share

ಬೆಂಗಳೂರು, ಜುಲೈ 12: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆಯಲಾಗಿದೆ. ಸೆಷನ್ಸ್ ಕೋರ್ಟ್​ನಲ್ಲೇ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿತ್ತು. ಇದು ಮಗನ ಪರಿಸ್ಥಿತಿ ಹೀಗಾದರೆ, ಅತ್ತ ಮೈಸೂರು ಜಿಲ್ಲೆ ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ (HD Revanna) ಅರ್ಜಿ ಮುಂದೂಡಲಾಗಿದೆ. ಇನ್ನು ಹೆಚ್.ಡಿ.ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು 3 ವಾರ ಮುಂದೂಡಿಕೆ ಮಾಡಲಾಗಿದೆ.

ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ಕೋರ್ಟ್​ ಮುಂದೂಡಿತ್ತು. ತ್ವರಿತ ವಿಚಾರಣೆ ಅಗತ್ಯವಿಲ್ಲವೆಂದು  ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರ ಮುಂದೂಡಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್, ಮಾಜಿ ಸಂಸದಗೆ ಮತ್ತಷ್ಟು ದಿನ ಜೈಲೇ ಗತಿ

ಒಂದಾಯ್ತು ಅನ್ನೋವಷ್ಟೇರಲ್ಲೇ ಮತ್ತೊಂದು ಕೇಸ್‌ ರೇವಣ್ಣ ಫ್ಯಾಮ್ಲಿಗೆ ಸಂಕಷ್ಟ ತಂದೊಡುತ್ತಿವೆ. ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ 10 ದಿನ ಜೈಲು ಅನುಭವಿಸಿ ಬೇಲ್ ಮೇಲೆ ಆಚೆ ಬಂದಿದ್ದಾರೆ. ಅದೇ ಕೇಸ್‌ನಲ್ಲಿ ಪತ್ನಿ ಭವಾನಿ ಷರತ್ತು ಬದ್ದ ಜಾಮೀನಿನ ಮೇಲೆ ಹೊರಗಿದ್ದಾರೆ. ಕಿರಿಯ ಮಗ ಈಗಾಗಲೇ ಅತ್ಯಾಚಾರ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್​: ಜುಲೈ 26ಕ್ಕೆ ವಿಚಾರಣೆ ನಿಗದಿ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಅಲ್ಲಿಯವರೆಗೆ ಖುದ್ದು ಹಾಜರಾತಿಯಿಂದ ಬಿ.ಎಸ್​ ಯಡಿಯೂರಪ್ಪಗೆ ವಿನಾಯಿತಿ ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು

ಇತರೆ ಆರೋಪಿಗಳಿಗೂ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದ್ದು, ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.