AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಕೋರ್ಟ್​ಗಳಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರೆ ಜನಸಾಮಾನ್ಯರಿಗೆ ಖಾತೆ, ಮ್ಯುಟೇಷನ್ ವಿವಾದಗಳಲ್ಲಿ ಅನುಕೂಲವಾಗಲಿದೆ. ಅಲ್ಲದೇ ಕೇವಲ ಕೊರೊನಾ ಸಂದರ್ಭಗಳಲ್ಲಿ ಮಾತ್ರವಲ್ಲದೇ ಭವಿಷ್ಯದಲ್ಲೂ ತಂತ್ರಜ್ಞಾನ ಬಳಕೆಯಿಂದ ಜನರಿಗೆ ಸಹಾಯವಾಗಲಿದೆ.

ಕಂದಾಯ ಕೋರ್ಟ್​ಗಳಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
TV9 Web
| Updated By: sandhya thejappa|

Updated on: Jul 13, 2021 | 4:16 PM

Share

ಬೆಂಗಳೂರು: ಕಂದಾಯ ನ್ಯಾಯಾಲಯ ಸೇರಿದಂತೆ ಅರೆ ನ್ಯಾಯಿಕ ಕೋರ್ಟ್ಗಳಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಲಾಕ್​ಡೌನ್​ ನಂತರ ತಹಸೀಲ್ದಾರ್, ಸಹಾಯಕ ಆಯುಕ್ತ ಹಾಗೂ ಜಿಲ್ಲಾಧಿಕಾರಿ ಕೋರ್ಟ್ ಸೇರಿದಂತೆ ಅರೆ ನ್ಯಾಯಿಕ ಕೋರ್ಟ್​ಗಳಲ್ಲಿ ಪ್ರಕರಣಗಳ ವಿಚಾರಣೆಯಾಗದೇ ಬಾಕಿ ಉಳಿದಿವೆ. ಕಂದಾಯ ನ್ಯಾಯಾಲಯಗಳಲ್ಲಿ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಇದರಿಂದ ಜನಸಾಮಾನ್ಯರ ಭೂಮಿ ವಿವಾದ, ಪಹಣಿ, ಖಾತಾ, ಮ್ಯುಟೇಷನ್ ವಿವಾದಗಳು ಇತ್ಯರ್ಥವಾಗದೇ ಉಳಿದಿದ್ದವು. ಹೀಗಾಗಿ ಇಂತಹ ಕೋರ್ಟ್ ಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರೆ ಜನಸಾಮಾನ್ಯರಿಗೆ ಖಾತೆ, ಮ್ಯುಟೇಷನ್ ವಿವಾದಗಳಲ್ಲಿ ಅನುಕೂಲವಾಗಲಿದೆ. ಅಲ್ಲದೇ ಕೇವಲ ಕೊರೊನಾ ಸಂದರ್ಭಗಳಲ್ಲಿ ಮಾತ್ರವಲ್ಲದೇ ಭವಿಷ್ಯದಲ್ಲೂ ತಂತ್ರಜ್ಞಾನ ಬಳಕೆಯಿಂದ ಜನರಿಗೆ ಸಹಾಯವಾಗಲಿದೆ. ಲಾಕ್​ಡೌನ್​ ನಂತರ ರಾಜ್ಯಾದ್ಯಂತ ತಹಶೀಲ್ದಾರ್, ಎಸಿ, ಡಿಸಿ ಕೋರ್ಟ್​ಗಳಲ್ಲಿ ವಿಚಾರಣೆ ಸ್ಥಗಿತವಾಗಿದೆ. ಈ ಬಗ್ಗೆ ಸಾಫ್ಟ್​ವೇರ್​ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕು. ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಗೆ ಕಂದಾಯ ಇಲಾಖೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಬೇಕು. ಪ್ರಸ್ತಾವನೆ ಬಗ್ಗೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಎಂ.ನಾಗರಾಜ್ ಎಂಬುವರ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಕೊರೊನಾ 3 ನೇ ಅಲೆ ಆರಂಭವಾಗುವ ಸಾಧ್ಯತೆಯಿದ್ದು, ಸಿದ್ಧತೆಯ ಭಾಗವಾಗಿ ವಿಡಿಯೋ ಕಾನ್ಫರೆನ್ಸ್ ಕಲ್ಪಿಸುವುದು ಅಗತ್ಯವೆಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯಪಟ್ಟಿದ್ದಾರೆ. ಸಿಲಿಕಾನ್ ಸಿಟಿ ಎಂದು ಕರೆಯಲಾಗುವ ಬೆಂಗಳೂರಿನಲ್ಲಿ ಕೋರ್ಟ್ಗಳೂ ತಂತ್ರಜ್ಞಾನದ ಲಾಭ ಪಡೆಯಬೇಕು. ಈಗಾಗಲೇ ಹೈಕೋರ್ಟ್​ನ ಎಲ್ಲಾ ಪೀಠಗಳಲ್ಲಿ ವಕೀಲರ ವಾದಮಂಡನೆಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಸಿವಿಲ್ ಕೋರ್ಟ್, ಮ್ಯಾಜಿಸ್ಟ್ರೇಟ್ ಕೋರ್ಟ್ ಸೇರಿದಂತೆ ವಿಚಾರಣಾ ನ್ಯಾಯಾಲಯಗಳಲ್ಲೂ ಭಾಗಶಃ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಶ್ವತವಾಗಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ಮೂಲಸೌಕರ್ಯ ಕಲ್ಪಿಸುವಂತೆ ಈಗಾಗಲೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ

ದರ್ಶನ್ ಹಾಗೂ ಉಮಾಪತಿ ಶ್ರೀನಿವಾಸ್​ಗೌಡ ಪ್ರಕರಣ ಸುಖಾಂತ್ಯದತ್ತ?

ಮೇಕೆದಾಟು ಯೋಜನೆ ಕಾಮಗಾರಿಯನ್ನು ಮಾಡೇ ಮಾಡುತ್ತೇವೆ, ತಮಿಳುನಾಡಿನ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ -ಬಿ.ಎಸ್. ಯಡಿಯೂರಪ್ಪ

(high court has instructed the state government to arrange a video conference in the revenue courts)