ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್

ಸದ್ಯ ಶೇ 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ ಎಂದು ಹೈಕೋರ್ಟ್​ ತಿಳಿಸಿದೆ

ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್
Follow us
sandhya thejappa
|

Updated on:Apr 20, 2021 | 5:11 PM

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮಷ್ಕರ ನಡೆಯುತ್ತಿದೆ. ಕೊರೊನಾ ನಡುವೆ ಈ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಆದರೆ ಹೈಕೋರ್ಟ್ ವಿಭಾಗೀಯ ಪೀಠ ಇಂದು ಕೊರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಸಾರಿಗೆ ನೌಕರರ ಸಂಘಕ್ಕೆ ಸೂಚನೆ ನೀಡಿದೆ.

ಬಸ್ ಸೇವೆಗಳ ವ್ಯತ್ಯಯದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸದ್ಯ ಶೇ. 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ. ಜನಸಾಮಾನ್ಯರ ಮೂಲಭೂತ ಹಕ್ಕಿಗೆ ಧಕ್ಕೆಯಾಗಲಿದೆ ಎಂದು ಹೈಕೋರ್ಟ್ ಸಿಜೆ ಎ.ಎಸ್. ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ರವರ ಪೀಠ ಅಭಿಪ್ರಾಯಪಟ್ಟಿದ್ದು, ಸಾರಿಗೆ ನೌಕರರೊಂದಿಗೆ ಮಧ್ಯಸ್ಥಿಕೆಗೂ ಹೈಕೋರ್ಟ್ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಲೇಬರ್ ಕೋರ್ಟ್​ಗೂ ಅರ್ಜಿ ಸಲ್ಲಿಸಿದೆ. ಸಾರಿಗೆ ಮುಷ್ಕರ ಕಾನೂನುಬಾಹಿರವೆಂದು ಘೋಷಿಸಲಾಗಿದೆ. ಕೆಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣನೆ ಸಾಧ್ಯವಿಲ್ಲ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ ಕೆ.ನಾವದಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಯಲಹಂಕ ವಿದ್ಯುತ್ ಚಿತಾಗಾರದಲ್ಲಿ 22 ಆಂಬುಲೆನ್ಸ್​ ಕ್ಯೂ: ಎಂಟ್ರಿ ಗೇಟ್ ಕ್ಲೋಸ್ ಮಾಡಿದ ಚಿತಾಗಾರದ ಸಿಬ್ಬಂದಿ!

ಕೊರೊನಾ ಡೆತ್​ ಬಗ್ಗೆ ಅಡಿಟಿಂಗ್​ ಆಗಲಿ, ಆಸ್ಪತ್ರೆಗಳ ಬೆಡ್​ ರಿಯಾಲಿಟಿ ಚೆಕ್​ಗೆ ನಾನೇ ಬರುತ್ತೇನೆ: ಡಿ.ಕೆ.ಶಿವಕುಮಾರ್​

(High Court has instructed the Transport Workers Union to start the service immediately)

Published On - 3:56 pm, Tue, 20 April 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ