AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್​ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್​ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಬೆನ್ನೆಲ್ಲೇ ಹೈಕೋರ್ಟ್ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. 

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಹೈಕೋರ್ಟ್​​
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 02, 2024 | 11:10 PM

Share

ಬೆಂಗಳೂರು, ಆಗಸ್ಟ್​ 02: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ (muda) ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ (High Court) ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬಿಜೆಪಿ ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಆ. 3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಅನುಮತಿ ನೀಡಲು ನಿರ್ದೇಶಿಸುವಂತೆ ಹೈಕೋರ್ಟ್​​ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ ಅನುಮತಿ ನೀಡಿದೆ. ಇದೀಗ ಕೋರ್ಟ್, ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ರಾಮನಗರ, ಮಂಡ್ಯ ಎಸ್ಪಿ ಹಾಗೂ ಮೈಸೂರು ಪೊಲೀಸ್​ರಿಗೆ ಸೂಚಿಸಿದೆ.

ನಾಳೆ ಪಾದಯಾತ್ರೆ ಆರಂಭಗೊಳ್ಳುತ್ತಿದ್ದು, ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. 8 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಮುಂದಿನ ಶನಿವಾರ ಮೈಸೂರು ತಲುಪಲಿದೆ.

ಇದನ್ನೂ ಓದಿ: ಮುಡಾ ಹಗರಣದ ದೂರಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಟಿಜೆ ಅಬ್ರಹಾಂ ಮತ್ತೊಂದು ಖಡಕ್ ಎಚ್ಚರಿಕೆ

ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್​ ಪಕ್ಷದಿಂದ ಹಾಲಿ, ಮಾಜಿ ಶಾಸಕರು, ಕಾರ್ಯಕರ್ತರಿಗೆ ಕರೆ ನೀಡಲಾಗಿದೆ. ಈ ಮೊದಲು ಪಾದಯಾತ್ರೆಗೆ ಬೆಂಬಲ ಕೊಡಲ್ಲ ಅಂದಿದ್ದ ಕುಮಾರಸ್ವಾಮಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದರ ಮನವೊಲಿಸಲು ಯಶಸ್ವಿಯಾಗಿದ್ದರು. ಇವತ್ತು ಈ ಬಗ್ಗೆ ಮಾತನಾಡಿದ ವಿಜಯೇಂದ್ರ 2 ಪಕ್ಷಗಳು ಒಂದಾಗಿ ಪಾದಯಾತ್ರೆ ನಡೆಯುತ್ತೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮೀ ಹಣ, ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್​ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಮೊದಲು ಪಾದಯಾತ್ರೆಗೆ ಅವಕಾಶ ಕೊಡಬಾರದು ಅಂದುಕೊಂಡಿದ್ವಿ, ಶಾಂತಿಯುತವಾಗಿ ಮಾಡ್ತೀವಿ ಅಂದಿದ್ದಕ್ಕೆ ಅವಕಾಶ ಕೊಡ್ತೀವಿ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಇದಕ್ಕೂ ಮೊದಲು ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಯಾವುದೇ ಅವಕಾಶವಿಲ್ಲ ಅಂತ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ