ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳ ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಪ್ರಾತಿನಿಧಿಕ ಚಿತ್ರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Mar 09, 2021 | 4:52 PM

ಬೆಂಗಳೂರು: ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ನಿಯಮಬಾಹಿರವಾಗಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿದೆ. ಥಣಿಸಂದ್ರ, ನಾಗವಾರ, HBR ಲೇಔಟ್‌ನ 16 ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನ ನಿಯಮಬಾಹಿರವಾಗಿ ಬಳಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೀಗಾಗಿ, ಶಬ್ದ ಮಾಲಿನ್ಯ ತಡೆಗೆ ನಿರ್ದೇಶನ ನೀಡಲು ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸದ್ಯ, PIL ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ PIL ಇತ್ತ, ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದ PILನ ವಿಚಾರಣೆ ಇಂದು ನಡೆಯಿತು. ಕಾಸರಗೋಡಿನ ಸುಬ್ಬಯ್ಯ ಶೆಟ್ಟಿ ಎಂಬುವವರಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ, ರಾಜ್ಯದ ಆದೇಶ ಕೇಂದ್ರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಅಭಿಪ್ರಾಯ ವ್ಯಕ್ತವಾಗಿದೆ. ಕಾಸರಗೋಡು ಭಾಗದಲ್ಲಿ ನಿರ್ಬಂಧ ವಿಧಿಸಲಾಗಿದೆ. 25 ರಸ್ತೆಗಳ ಪೈಕಿ 4 ರಸ್ತೆಗಳಲ್ಲಿ ಮಾತ್ರ ಪ್ರವೇಶ ನೀಡಿದ್ದಾರೆ. ಯಾವ ಕಾನೂನಿನಡಿ ಈ ರೀತಿಯ ನಿರ್ಬಂಧ ವಿಧಿಸಿದ್ದೀರಿ? ಬೇರೆ ಜಿಲ್ಲೆಗಳ ಮೂಲಕ ಪ್ರವೇಶಕ್ಕೆ ಅವಕಾಶ ನೀಡಿದ್ದೀರಿ. ಕಾಸರಗೋಡು ಜಿಲ್ಲೆಯಿಂದ ಪ್ರವೇಶಕ್ಕೆ ಏಕೆ ನಿರ್ಬಂಧ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಹಾಕಿತು.

ಇದೀಗ, ದಕ್ಷಿಣ ಕನ್ನಡ ಡಿಸಿಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸದ್ಯ, ವಿಚಾರಣೆಯನ್ನು ಮಾರ್ಚ್​ 18ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್