ಗೋಹತ್ಯೆ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ಗೆ PIL ಸಲ್ಲಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ರಾಜ್ಯದಲ್ಲಿ ಜಾರಿಯಾದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಇದೀಗ, PIL ವಿಚಾರಣೆ ನಡೆಸಿದ ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಜಾರಿಯಾದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಇದೀಗ, PIL ವಿಚಾರಣೆ ನಡೆಸಿದ ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿದೆ.
ಕಸಾಯಿಖಾನೆ ಮಾಲೀಕರಿಂದ ಹೈಕೋರ್ಟ್‌ಗೆ PIL ಸಲ್ಲಿಕೆಯಾಗಿದೆ. ಕಾಯ್ದೆಯಿಂದ ಸಂವಿಧಾನದತ್ತ ಹಕ್ಕಿನ ಉಲ್ಲಂಘನೆ ಎಂಬ ವಾದವನ್ನು ಅರ್ಜಿದಾರರ ಪರ ವಕೀಲರು ಮಂಡಿಸಿದ್ದಾರೆ. ಅರ್ಜಿದಾರರ ಪರ ವಕೀಲರಾದ ರವಿವರ್ಮಕುಮಾರ್ ಅವರಿಂದ ವಾದ ಮಂಡನೆಯಾಗಿದೆ.