AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಪಿಐಎಲ್, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಭಾರತದ ಮೊದಲ ತೃತೀಯ ಲಿಂಗಿ ವೈದ್ಯರಲ್ಲೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಪಿಐಎಲ್, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Updated By: ಆಯೇಷಾ ಬಾನು|

Updated on:Mar 24, 2022 | 4:42 PM

Share

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ(Transgender Students) ಹಾಸ್ಟೆಲ್ ಕೋರಿ ಡಾ.ತ್ರಿನೇತ್ರ ಹಲ್ದಾರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆದಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ( State Government) ಹೈಕೋರ್ಟ್(Karnataka High Court) ವಿಭಾಗೀಯ ಪೀಠ ನೋಟಿಸ್ ನೀಡಿದೆ. ಸಾಮಾನ್ಯ ಹಾಸ್ಟೆಲ್ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಶೌಚಾಲಯ ಸೇರಿದಂತೆ ಹಲವು ಸಮಸ್ಯೆ ಎದುರಿಸುತ್ತಾರೆ. ಇದರಿಂದಾಗಿಯೇ ಉನ್ನತ ಶಿಕ್ಷಣದಿಂದ‌ ವಂಚಿತರಾಗುತ್ತಾರೆ. ಹೀಗಾಗಿ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಲಾಗಿತ್ತು. ಸದ್ಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ(ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು)ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಭಾರತದ ಮೊದಲ ತೃತೀಯ ಲಿಂಗಿ ವೈದ್ಯರಲ್ಲೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠವು ನೋಟಿಸ್ ಜಾರಿಗೊಳಿಸಿ ಜೂನ್ 6 ರಂದು ವಿಚಾರಣೆಯನ್ನು ಮುಂದೂಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ (ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು) ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್‌ ಅಗತ್ಯವಿದೆ. ಸೆ.25, 2020 ರಂದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕಿನ ರಕ್ಷಣೆ ನಿಯಮಗಳನ್ನು ಅನುಷ್ಟಾನ ಗೊಳಿಸಲಾಗಿದೆ. ತಾತ್ಕಾಲಿಕ ವಸತಿ‌, ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್, ಶೌಚಾಲಯ ಸೇರಿದಂತೆ ಸಾಂಸ್ಥಿಕ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಅಧಿಕಾರವಿದೆ. ಆದರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್, ವಸತಿ ಸೌಲಭ್ಯ ಒದಗಿಸಲು ನಿರ್ದೇಶನ ನೀಡಬೇಕಿದೆ. ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ಟಾಟಾ ಸಾಮಾಜಿಕ ವಿಜ್ಞಾನ ಸಂಸ್ಥೆಯಲ್ಲೂ ಪ್ರತ್ಯೇಕ ವಸತಿ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್ ಕೂಡಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಆಯ್ಕೆಯ ಲಿಂಗದ ಆಧಾರದಲ್ಲಿ ಹಾಸ್ಟೆಲ್ ಒದಗಿಸಲು ಸೂಚಿಸಿದೆ. ಹೀಗಾಗಿ ರಾಜ್ಯದಲ್ಲೂ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ಪ್ರವೇಶದ ಅರ್ಜಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶವಿರುವಂತೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸದ್ಯ ರಾಜ್ಯಸರ್ಕಾರ, ಉನ್ನತ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಈ ಸಂಬಂಧ ನೋಟಿಸ್ ಜಾರಿಗೆ ಆದೇಶಿಸಿದೆ.

ಇದನ್ನೂ ಓದಿ: ಕಿರಿಕಿರಿ ಆಗುತ್ತಿದೆ ಎಂದು ಮೋಹಿನಿಯಾಟ್ಟಂ ನೃತ್ಯ ಅರ್ಧಕ್ಕೆ ನಿಲ್ಲಿಸಿದ ನ್ಯಾಯಾಧೀಶ ಕಲಂ ಪಾಷಾ; ಅವಮಾನದಿಂದ ಕಣ್ಣೀರು ಹಾಕಿದ ಕಲಾವಿದೆ

ಗಳಿಕೆ ವಿಚಾರದಲ್ಲಿ ‘ಬಾಹುಬಲಿ 2’ ದಾಖಲೆ ಮುರಿಯಲಿದೆ ‘RRR​’? 8,000 ಥಿಯೇಟರ್​ನಲ್ಲಿ ರಾಜಮೌಳಿ ಸಿನಿಮಾ 

Published On - 4:05 pm, Thu, 24 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?