ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸತತವಾಗಿ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಿಸಲಾಗದು. ಹೀಗಾಗಿ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್‌ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.

  • TV9 Web Team
  • Published On - 22:07 PM, 5 Mar 2021
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ
ಕರ್ನಾಟಕ ಹೈಕೋರ್ಟ್​

ಬೆಂಗಳೂರು: ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಎರಡೂವರೆ ವರ್ಷಗಳ ಹಿಂದೆ ಆಡಳಿತಾಧಿಕಾರಿ ನೇಮಕ ಮಾಡಿತ್ತು. 6 ತಿಂಗಳಿಗೊಮ್ಮೆ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್ ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಎಂದು ಆದೇಶಿಸಿದೆ.

ಸತತವಾಗಿ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಿಸಲಾಗದು. ಹೀಗಾಗಿ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್‌ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಕುರಿತು, ಒಕ್ಕಲಿಗರ ಸಂಘದ ಸದಸ್ಯ ಮತ್ತು ಚಿತ್ರ ನಿರ್ಮಾಪಕ ಕೃಷ್ಣೇಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿರುವ ಹೈಕೋರ್ಟ್ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆಂಗಳೂರಿನ ಪ್ರಮುಖ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್​ ಆದೇಶ
ಬೆಂಗಳೂರಿನ ಕೆರೆಗಳ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೇಗೂರು ಕೆರೆ, ಸುಬ್ರಹ್ಮಣ್ಯಪುರ ಕೆರೆ, ಕಗ್ಗದಾಸಪುರ ಕೆರೆ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದ್ದು, ಡಿಪಿಎಆರ್​ನಂತೆ ಕಾಮಗಾರಿ ನಿರ್ವಹಿಸಲು ಬಿಬಿಎಂಪಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೆರೆ ಸುತ್ತಲಿನ ಪಾದಚಾರಿ ಮಾರ್ಗದ ಅಗಲ ಕಡಿತಗೊಳಿಸಲು ಸೂಚಿಸುವ ಜೊತೆಗೆ ಕೆರೆಗಳ ನೀರು ಶೇಖರಣೆ ಸಾಮರ್ಥ್ಯ ಹೆಚ್ಚಳ ಮಾಡಲು ಬೇಕಾದ ಕ್ರಮಕೈಗೊಳ್ಳಲು ಸೂಚನೆ ನೀಡಿದೆ.

ಬೇಗೂರು ಕೆರೆಯಲ್ಲಿ 6 ಎಕರೆ 30 ಗುಂಟೆ ಖಾಸಗಿಯವರ ಒತ್ತುವರಿ ಇರುವುದು ಸರ್ವೆಯಲ್ಲಿ ಪತ್ತೆಯಾಗಿದೆ. 3.26 ಎಕರೆ ಸರ್ಕಾರಿ ರಸ್ತೆಯೂ ನಿರ್ಮಾಣವಾಗಿದೆ. ಕಗ್ಗದಾಸಪುರ ಕೆರೆಯಲ್ಲಿ 23 ಒತ್ತುವರಿ ಇರುವುದು ಸರ್ವೆ ವೇಳೆ ಪತ್ತೆಯಾಗಿದ್ದು, ಒತ್ತುವರಿ ತೆರವಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ. ಸುಬ್ರಹ್ಮಣ್ಯಪುರ ಕೆರೆಯೂ ಸೇರಿದಂತೆ ಮೂರೂ ಕೆರೆಗಳನ್ನು ಹೊಸದಾಗಿ ಸರ್ವೆ ಮಾಡಲು ಬಿಬಿಎಂಪಿ ನಾಲ್ಕು ವಾರಗಳ ಕಾಲಾವಕಾಶ ಕೋರಿದೆ. ಬಿಬಿಎಂಪಿ ಮನವಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್ ಹೊಸ ಸರ್ವೆ ವರದಿ ಬರುವವರೆಗೂ ಬಿಬಿಎಂಪಿ ಕಾಯುವ ಅಗತ್ಯವಿಲ್ಲ. ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಬೇಕು. ಬಿಬಿಎಂಪಿ, ಸರ್ಕಾರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಪ್ರತಿಭಟನೆಗಳಿಂದ ಜನಸಾಮಾನ್ಯರಿಗೆ ತೊಂದರೆ; ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ