ಶಾಸಕ ಪ್ರದೀಪ್ ಈಶ್ವರ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್​: ಪ್ರತಾಪ್ ಸಿಂಹಗೆ ಹಿನ್ನಡೆ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 03, 2024 | 6:53 PM

ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್​ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದರು. ಹೀಗಾಗಿ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇಂದು ವಿಚಾರಣೆ ಮಾಡಿದ ಹೈಕೋರ್ಟ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿದೆ. ಆ ಮೂಲಕ ಪ್ರತಾಪ್ ಸಿಂಹಗೆ ಹಿನ್ನಡೆಯಾಗಿದ್ದು, ಪ್ರದೀಪ್ ಈಶ್ವರ್​ಗೆ ಬಿಗ್ ರಿಲೀಫ್ ಸಿಕ್ಕಿದೆ.

ಶಾಸಕ ಪ್ರದೀಪ್ ಈಶ್ವರ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್​: ಪ್ರತಾಪ್ ಸಿಂಹಗೆ ಹಿನ್ನಡೆ
ಶಾಸಕ ಪ್ರದೀಪ್ ಈಶ್ವರ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್​: ಪ್ರತಾಪ್ ಸಿಂಹಗೆ ನಿರಾಸೆ
Follow us on

ಬೆಂಗಳೂರು, ಅಕ್ಟೋಬರ್​ 03: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲಿ ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ ಎಂದು ನಿಂದಿಸಿದ್ದ ಹಿನ್ನಲೆ ಪ್ರದೀಪ್ ಈಶ್ವರ್​ ವಿರುದ್ಧ ಮಾಜಿ ಸಂಸದ ಮೊಕದ್ದಮೆ ದಾಖಲಿಸಿದ್ದರು.

ಇತ್ತೀಚೆಗೆ ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾಮ ಪಂಚಾಯತ್​ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್​, ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಮ್ಮನಿದ್ದರೆ ಸರಿ, ಇಲ್ಲವೆಂದರೆ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು ಏಕವಚನದಲ್ಲಿ ಮಾತನಾಡಿದ್ದರು.

ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ್ದರು.

ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿಕೊಟ್ಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ. ಹಾಗೂ ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

ಸದ್ಯ ಇಂದು ವಿಚಾರಣೆ ಮಾಡಿರುವ ಹೈಕೋರ್ಟ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿದ್ದು, ಆ ಮೂಲಕ ಬಿಗ್ ರಿಲೀಫ್ ನೀಡಿದೆ. ಆದರೆ ಪ್ರಕರಣದಲ್ಲಿ ಪ್ರತಾಪ್ ಸಿಂಹಗೆ ಹಿನ್ನಡೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Thu, 3 October 24