ಬೆಂಗಳೂರು: ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಚನೆ ನೀಡಲಾಗಿದೆ.
ಬೀದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ. ಜೊತೆಗೆ, ಬಂದ್, ಱಲಿ ವೇಳೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಹೈಕೋರ್ಟ್ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿಮಾಡಿರುವ ಹೈಕೋರ್ಟ್ ಡಿ.17ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಸಹ ಮಾಡಿದೆ.
ಇದಲ್ಲದೆ, ಮಾಸ್ಕ್, ದೈಹಿಕ ಅಂತರದ ಬಗ್ಗೆ ಪೊಲೀಸರು ನಿಗಾ ವಹಿಸುವಂತೆ ಸಹ ಕೋರ್ಟ್ ನಿರ್ದೇಶಿಸಿದೆ. ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ರಾಜ್ಯ ಸರ್ಕಾರ ಸಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಜೆ A.S.ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. PILಯೊಂದರ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ನಿರ್ದೇಶನ ನೀಡಿದೆ. ಲೆಟ್ಸ್ ಕಿಟ್ ಫೌಂಡೇಷನ್ ಹಾಗೂ ಸಾಯಿದತ್ತಾ ಸಲ್ಲಿಸಿದ್ದ PIL ವಿಚಾರಣೆ ಬಳಿಕ ಹೈಕೋರ್ಟ್ ನಿರ್ದೇಶನ ನೀಡಿದೆ.
ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್
Published On - 4:57 pm, Fri, 4 December 20