ACB ಬೇಡವೆಂಬ ಹೈಕೋರ್ಟ್ ಆದೇಶದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಏನು ಹೇಳಿದರು?

Justice Santosh Hegde: ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಸೌಲಭ್ಯ ಕಲ್ಪಿಸಬೇಕು. ಲೋಕಾಯುಕ್ತರು ಕೊಟ್ಟ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ ಎಂದು ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

ACB ಬೇಡವೆಂಬ ಹೈಕೋರ್ಟ್ ಆದೇಶದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಏನು ಹೇಳಿದರು?
ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 11, 2022 | 6:10 PM

ಬೆಂಗಳೂರು: ಎಸಿಬಿ (ACB) ಬದಲು ಲೋಕಾಯುಕ್ತವೇ (Lokayukta) ಸೂಕ್ತವೆಂದು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ನನಗೆ ಬಹಳ ಸಂತಸ ತಂದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ (Justice Santosh Hegde) ಟಿವಿ9ಗೆ ತಿಳಿಸಿದ್ದಾರೆ.

ಎಸಿಬಿ ವಿಚಾರದಲ್ಲಿ ಹೈಕೋರ್ಟ್​ ಉತ್ತಮ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಬೇಕು. ಲೋಕಾಯುಕ್ತ ಸಂಸ್ಥೆಗೆ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕು. ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಬಾರದು. ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಸೌಲಭ್ಯ ಕಲ್ಪಿಸಬೇಕು. ಲೋಕಾಯುಕ್ತರು ಕೊಟ್ಟ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ ಎಂದು ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.