ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ: ಚೆಕ್​ ಬೌನ್ಸ್​ ಕೇಸ್​ಗೆ ಮರುಜೀವ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 10, 2021 | 3:09 PM

ಈ ಮೊದಲು ಈ ಪ್ರಕರಣವನ್ನು ಚಿಕ್ಕೋಡಿ ನ್ಯಾಯಾಲಯ ವಜಾಗೊಳಿಸಿತ್ತು. ಚಿಕ್ಕೋಡಿ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದೆ.

ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ: ಚೆಕ್​ ಬೌನ್ಸ್​ ಕೇಸ್​ಗೆ ಮರುಜೀವ
ರಮೇಶ್ ಜಾರಕಿಹೊಳಿ
Follow us on

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಹಕಾರ ಬ್ಯಾಂಕ್​ಗೆ ₹ 5.2 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್​ ಮರುಜೀವ ನೀಡಿದೆ. ಈ ಮೊದಲು ಈ ಪ್ರಕರಣವನ್ನು ಚಿಕ್ಕೋಡಿ ನ್ಯಾಯಾಲಯ ವಜಾಗೊಳಿಸಿತ್ತು. ಚಿಕ್ಕೋಡಿ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದ್ದು, ಖಾಸಗಿ ದೂರು ದಾಖಲಿಸಿದ ದಿನಾಂಕದಿಂದ ಮರು ವಿಚಾರಣೆ ನಡೆಸಲು ಮತ್ತು ಸೂಕ್ತ ಆದೇಶ ನೀಡಲು ಸೂಚಿಸಿದೆ.

ಬೀರೇಶ್ವರ ಕ್ರೆಡಿಟ್ ಕೋಆಪರೇಟಿವ್​ ಸೊಸೈಟಿ ಸಲ್ಲಿಸಿದ್ದ ಖಾಸಗಿ ದೂರಿನ ಬಗ್ಗೆ ನ್ಯಾಯಮೂರ್ತಿ ಸುನೀಲ್‌ದತ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ₹ 5.2 ಕೋಟಿ ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಬೀರೇಶ್ವರ ಸೊಸೈಟಿ ದೂರು ನೀಡಿತ್ತು. ಚಿಕ್ಕೋಡಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಹಿನ್ನೆಲೆಯಲ್ಲಿ ಪ್ರಕರಣ ವಜಾಗೊಂಡಿತ್ತು. ಚಿಕ್ಕೋಡಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬೀರೇಶ್ವರ ಸೊಸೈಟಿ ಹೈಕೋರ್ಟ್​ಗೆ ದೂರು ಸಲ್ಲಿಸಿತ್ತು.

ಈ ಪ್ರಕರಣದಲ್ಲಿ ಚಿಕ್ಕೋಡಿ ನ್ಯಾಯಾಲಯವು ನಡೆಸಿರುವ ವಿಚಾರಣೆ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿಲ್ಲ. ವಿಚಾರಣೆಗೆ ಪರಿಗಣಿಸುವ ಮುನ್ನ ರಮೇಶ್‌ಗೆ ನೋಟಿಸ್ ನೀಡಿ, ಮರು ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಲು ಹೈಕೋರ್ಟ್ ಸೂಚನೆ ನೀಡಿತು.

(High Court Orders to Reopen Cheque Bounce Case against Ramesh Jarkiholi)

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಪಿಐಎಲ್​ಗಳ ವಿಚಾರಣೆ

ಇದನ್ನೂ ಓದಿ: ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ; ಸ್ವಪಕ್ಷೀಯರ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ

Published On - 2:58 pm, Tue, 10 August 21