ಕೊಪ್ಪಳ: ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ಇರುವ ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ ಜೋರಾಗಿದೆ. ಈ ಹಿಂದೆ 3 ಯತಿಗಳ ಆರಾಧನೆಗೆ ಧಾರವಾಡ ಹೈಕೋರ್ಟ್ ಪೂಜೆಗೆ ಅವಕಾಶ ನೀಡಿ ಆದೇಶ ನೀಡಿತ್ತು. ಆದರೆ ಈಗ ಜಯತೀರ್ಥರ ಆರಾಧನೆಗೆ ತಡೆ ನೀಡಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ.

ಕೊಪ್ಪಳ: ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ
ನವವೃಂದಾವನ ಗಡ್ಡೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on:Jul 25, 2024 | 8:26 AM

ಕೊಪ್ಪಳ, ಜುಲೈ.25: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ಇರುವ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ (Nava Brindavana pooja controversy) ಸಂಬಂಧಿಸಿದಂತೆ ಜಯತೀರ್ಥರ ಆರಾಧನೆಗೆ ತಡೆ ನೀಡಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ನವವೃಂದಾವನ ಗಡ್ಡೆಯಲ್ಲಿ ರಾಯರ ಮಠದವರು ಜಯತೀರ್ಥರ ಆರಾಧನೆ ಮಾಡುವಂತಿಲ್ಲ ಎಂದು ಧಾರವಾಡ ಹೈಕೋರ್ಟ್ ಹೇಳಿದೆ.

ನವವೃಂದಾವನದಲ್ಲಿಯೇ ಜಯತೀರ್ಥರ ವೃಂದಾವನವಿದೆ ಎಂದು ರಾಯರ ಮಠದವರು ವಾದ ಮಂಡಿಸಿದ್ದರು. ಇದು ರಘುವರ್ಯರ ವೃಂದಾವನ ಎಂದು ಉತ್ತರಾಧಿಮಠದವರು ವಾದಿಸಿದ್ದು ಜಯತೀರ್ಥರ ವೃಂದಾವನವು, ಕಲಬುರಗಿ ಜಿಲ್ಲೆಯ ಮಳಖೇಡದಲ್ಲಿದೆ ಎಂದು ವಾದಿಸಿದ್ದಾರೆ. ಸದ್ಯ ನವವೃಂದಾವನ ಗಡ್ಡೆಯಲ್ಲಿ ಆರಾಧನೆಗೆ ಅವಕಾಶ ನೀಡದ ಹಿನ್ನೆಲೆ ಆನೆಗೊಂದಿಯ ರಾಯರ ಮಠದಲ್ಲಿ ಆಚರಿಸಲು ಮಂತ್ರಾಲಯ ಮಠದವರು ಪ್ರಕಟಣೆ ಹೊರಡಿಸಿದ್ದಾರೆ. ಇದು ತಾತ್ಕಾಲಿಕ ಪ್ರಕಟಣೆಯಾಗಿದ್ದು ಮುಂದಿನ ದಿನದಲ್ಲಿ ರಾಯರ ಕೃಪೆಯಿಂದ ನಮ್ಮ ಪರವಾಗಿ ತೀರ್ಪು ಬರಲಿದೆ ಎಂಬ ವಿಶ್ವಾಸವನ್ನು ರಾಯರ ಮಠ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನವವೃಂದಾವನ ಗಡ್ಡೆ ಪೂಜಾ ವಿವಾದ: ಪೂಜೆ ಸಲ್ಲಿಸಲು ಮಂತ್ರಾಲಯ ಮಠದ ಪರ ಹೈಕೋರ್ಟ್ ತೀರ್ಪು

ಆನೆಗುಂದಿಯ ನವಬೃಂದಾವನದಲ್ಲಿ ಶ್ರೀ ರಾಘವೇಂದ್ರಸ್ವಾಮಿ ಮಠದವರಿಗೆ ಅಷ್ಟೋತ್ತರ ಪೂಜಾ ಕಾರ್ಯಕ್ಕೆ ನಿರ್ಬಂಧ ವಿಧಿಸುವಂತೆ ಉತ್ತಾರಾಧಿಮಠ ಧಾರವಾಡ ಹೈಕೋರ್ಟ್​ ಮೆಟ್ಟಿಲೇರಿತ್ತು. ಉತ್ತಾರಾಧಿಮಠ ಅರ್ಜಿ ವಿಚಾರಣೆ ನಡೆಸಿದ್ದ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ, ಉತ್ತಾರಾಧಿಮಠ ಅರ್ಜಿಯನ್ನು ಪುರಸ್ಕರಿಸಿ ಅಷ್ಟೋತ್ತರ ಪೂಜಾ ಕಾರ್ಯಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು. ಬಳಿಕ ಶ್ರೀ ರಾಘವೇಂದ್ರಸ್ವಾಮಿ ಮಠವು ಧಾರವಾಡ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಬಳಿಕ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಂತ್ರಾಲಯ ಮಠದ ಪರ ತೀರ್ಪು ನೀಡಿತ್ತು.  9 ಯತಿಗಳ ಪೈಕಿ ಮೂರು ಯತಿಗಳ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಆದರೆ ಈಗ ಜಯತೀರ್ಥರ ಆರಾಧನೆಗೆ ತಡೆ ನೀಡಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ಜಯತೀರ್ಥರ ಆರಾಧನೆ ಮಾಡುವಂತಿಲ್ಲ ಎಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:23 am, Thu, 25 July 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ