ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​: ಪ್ರಕರಣವೇನು?

ಕರ್ನಾಟಕ ಹೈಕೋರ್ಟ್ ತೇಜಸ್ವಿ ಸೂರ್ಯ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿದೆ. ಹಾವೇರಿಯ ರೈತನ ಆತ್ಮಹತ್ಯೆ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿತ್ತು. ಹೈಕೋರ್ಟ್ ತೀರ್ಪಿನಿಂದ ತೇಜಸ್ವಿ ಸೂರ್ಯ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಜೊತೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣವನ್ನೂ ಹೈಕೋರ್ಟ್ ರದ್ದುಗೊಳಿಸಿದೆ.

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​: ಪ್ರಕರಣವೇನು?
ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​: ಪ್ರಕರಣವೇನು?
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Dec 12, 2024 | 3:51 PM

ಬೆಂಗಳೂರು, ಡಿಸೆಂಬರ್​​ 12: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್ ಸಿಕ್ಕಿದೆ. ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.

ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಪ್ರಕರಣ ರದ್ದುಪಡಿಸುವಂತೆ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದಾರೆ.

ಇದನ್ನೂ ಓದಿ: ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಬಳಿಕ ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದು

ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?

ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ದಾಖಲಿಸಿದ್ದರು. ನವೆಂಬರ್​​ 28ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್​ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Thu, 12 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ