ಕಾವೇರಿ ನದಿಯಲ್ಲಿ ಅಸ್ತಿ ವಿಸರ್ಜನೆಗೆ ತಡೆ ನೀಡಲು ಹೈಕೋರ್ಟ್ ನಕಾರ: ರಾಜ್ಯ ಸರ್ಕಾರಕ್ಕೆ ನೋಟಿಸ್
ವಕೀಲ ಕುಶಲ್ ಕುಮಾರ್ ಕೌಶಿಕ್ ಸೇರಿದಂತೆ ಆರು ಜನರು ಸೇರಿದಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗಿಯ ಪೀಠ ಖಾಸಗಿ ಸ್ಥಳಗಳಲ್ಲೂ ಅಸ್ಥಿ ವಿಸರ್ಜನೆ ನಡೆಯುತ್ತಿದೆ. ಕಾವೇರಿ ನದಿಯ ನೀರು ಕುಡಿಯಲು ಯೋಗ್ಯವಾಗಿಲ್ಲವೆಂದು ವರದಿ ಇದೆ.
ಬೆಂಗಳೂರು, ಜುಲೈ 29: ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ನಿಯಂತ್ರಣ ಕೋರಿ ಕುಶಲ್ ಕುಮಾರ್ ಕೌಶಿಕ್ ಮತ್ತಿತರರಿಂದ ಹೈಕೋರ್ಟ್ಗೆ (High Court) ಸಾರ್ವಜನಿಕ ಹಿತಾಸಕ್ತಿ (PIL) ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ಕೈಗೊಂಡ ಹೈಕೋರ್ಟ್ ಅರ್ಜಿದಾರರ ಕೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದು, ಅಸ್ಥಿ ವಿಸರ್ಜನೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಆ ಮೂಲಕ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ.
ಈ ಬಗ್ಗೆ ವಕೀಲ ಕುಶಲ್ ಕುಮಾರ್ ಕೌಶಿಕ್ ಸೇರಿದಂತೆ ಆರು ಜನರು ಸೇರಿದಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗಿಯ ಪೀಠ ಖಾಸಗಿ ಸ್ಥಳಗಳಲ್ಲೂ ಅಸ್ಥಿ ವಿಸರ್ಜನೆ ನಡೆಯುತ್ತಿದೆ. ಕಾವೇರಿ ನದಿಯ ನೀರು ಕುಡಿಯಲು ಯೋಗ್ಯವಾಗಿಲ್ಲವೆಂದು ವರದಿ ಇದೆ. ನದಿಯ ದಡಗಳಲ್ಲಿ ನಿಯಂತ್ರಣವಿಲ್ಲದೇ ಅಸ್ಥಿ ವಿಸರ್ಜನೆ ನಡೆಯುತ್ತಿದೆ. ಹೀಗಾಗಿ ಅಸ್ಥಿ ವಿಸರ್ಜನೆಗೆ ನಿಯಮ ರೂಪಿಸುವಂತೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲ: ನಿರ್ಮಲಾ ಸೀತಾರಾಮನ್ರನ್ನು ಸಂಪುಟದಿಂದ ಕೈಬಿಡುವಂತೆ ಸಿಎಂ ಒತ್ತಾಯ
ಖುದ್ದು ಅರ್ಜಿದಾರರೇ ವಾದ ಮಂಡಿಸಿದ್ದು, ಅಸ್ಥಿ ವಿಸರ್ಜನೆಗೆ ನಮ್ಮ ವಿರೋಧವಿಲ್ಲ. ಆದರೆ ಅದಕ್ಕೊಂದು ಸ್ಥಳ ನಿಗದಿಸಬೇಕು. ಜೊತೆಗೆ ಕೆಲವು ಮಾರ್ಗಸೂಚಿಗಳನ್ನು ನೀಡಬೇಕು. ಅವುಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಇದು ನಮ್ಮ ಕಾಳಜಿ ಎಂದು ಹೇಳಿದ್ದಾರೆ.
ಕಾವೇರಿ ನದಿ ತೀರದಲ್ಲಿ ವಿಪರೀತವಾಗಿ ಮಾಲಿನ್ಯ ಹೆಚ್ಚಳವಾಗಿದೆ. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ವರದಿಯಲ್ಲಿ ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಾಗುವುದಕ್ಕೆ ಕಾರಣಗಳನ್ನು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಅಧಿವೇಶದಲ್ಲಿ ದೇವೇಗೌಡ ಅಬ್ಬರ ಹೇಗಿದೆ ನೋಡಿ
ಉತ್ತರಾಖಂಡ ಹೈಕೋರ್ಟ್ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್ ಪರ್ಸನ್ ಎಂದು ಘೋಷಿಸಿದೆ. ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್ ಪರ್ಸನ್ ಎಂದು ಪರಿಗಣಿಸಿ ಸಮಿತಿಯೊಂದನ್ನು ರಚಿಸಬೇಕು.ನದಿಗೆ ಹಾನಿ ಮಾಡಿದರವ ವಿರುದ್ಧ ದಾವೆ ಹೂಡಲು ಅವಕಾಶ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.