ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿದೆ.
ಇದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ:
ಡಿನೋಟಿಫಿಕೇಷನ್ ಕೇಸ್ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ
(High court rejects to entertain pil in corruption case against bs yediyurappa filed by tj abraham)
Published On - 12:29 pm, Sat, 31 July 21