Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಭೂಮಿ ವಿವಾದ ಇತ್ಯರ್ಥಪಡಿಸಿದ ಹೈಕೋರ್ಟ್​: ಸಿನಿಮಾ ಶುರುವಾಗುತ್ತೆಂದ ರಮೇಶ್ ಕುಮಾರ್

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಮುಖ ತೀರ್ಪು ನೀಡಿದೆ. ಸರ್ವೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆ ಹಿನ್ನೆಲೆ ಜಮೀನಿನ ಸರ್ವೆ ಈಗಾಗಲೇ ಪೂರ್ಣಗೊಂಡಿರುವ ಹಿನ್ನೆಲೆ ವಕೀಲ ಶಿವಾರೆಡ್ಡಿ ಅರ್ಜಿ ಇತ್ಯರ್ಥ ಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಅರಣ್ಯ ಭೂಮಿ ವಿವಾದ ಇತ್ಯರ್ಥಪಡಿಸಿದ ಹೈಕೋರ್ಟ್​: ಸಿನಿಮಾ ಶುರುವಾಗುತ್ತೆಂದ ರಮೇಶ್ ಕುಮಾರ್
ಅರಣ್ಯ ಭೂಮಿ ವಿವಾದ ಇತ್ಯರ್ಥಪಡಿಸಿದ ಹೈಕೋರ್ಟ್​: ಸಿನಿಮಾ ಶುರುವಾಗುತ್ತೆಂದ ರಮೇಶ್ ಕುಮಾರ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Mar 05, 2025 | 7:11 PM

ಬೆಂಗಳೂರು, ಮಾರ್ಚ್​​ 05: ಮಾಜಿ ಸ್ಪೀಕರ್ ರಮೇಶ್ ಕುಮಾರ್​ರಿಂದ (Ramesh Kumar) ಅರಣ್ಯ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಶಿವಾರೆಡ್ಡಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿದೆ. ಈಗಾಗಲೇ ಸರ್ವೆ ವರದಿ ಸಲ್ಲಿಕೆಯಾಗಿರುವ ಹಿನ್ನೆಲೆ ರಿಟ್ ಅರ್ಜಿರನ್ನು ವಜಾ ಮಾಡಲಾಗಿದೆ. ವರದಿ ಪ್ರಶ್ನಿಸಲು ರಮೇಶ್ ಕುಮಾರ್​ರಿಗೆ ಹೈಕೋರ್ಟ್ ಅವಕಾಶ ನೀಡಿದೆ.

ಸರ್ವೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರಣ್ಯ ಸಂರಕ್ಷಣಾಧಿಕಾರಿಗೆ ಈಗಾಗಲೇ ಜಂಟಿ ಸರ್ವೆ ವರದಿ ಸಲ್ಲಿಕೆಯಾಗಿದೆ. ಕಾನೂನಿನಂತೆ ಅರಣ್ಯ ಸಂರಕ್ಷಣಾಧಿಕಾರಿ ಸೆ.64ರಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸದಾಶಿವರೆಡ್ಡಿ ವಾದ ಮಂಡಿಸಿದ್ದಾರೆ. ಅರ್ಜಿದಾರರ ರಿಟ್ ಊರ್ಜಿತವಲ್ಲವೆಂದು ರಮೇಶ್ ಕುಮಾರ್ ಪರ ವಕೀಲರ ವಾದ ಮಂಡಿಸಿದ್ದಾರೆ.

ಸೋಮವಾರದಿಂದ ಸಿನಿಮಾ ಶುರುವಾಗುತ್ತೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಇನ್ನು ಈ ವಿಚಾರವಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ್​ ಕುಮಾರ್, ಇಷ್ಟು ದಿವಸ ಬಂದಿದ್ದು ರೀಲ್ ಹಾಗೂ ಟ್ರಯಲ್ ಅಷ್ಟೇ. ಸೋಮವಾರದಿಂದ ಸಿನಿಮಾ ಶುರುವಾಗುತ್ತದೆ ಎಂದು  ಮಾರ್ಮಿಕವಾಗಿ ನುಡಿದ್ದಾರೆ.

ಇದನ್ನೂ ಓದಿ
Image
ಅಂತಿಮ ಹಂತ ತಲುಪಿದ ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ: ಭೂಮಿ ಉಳಿಯುತ್ತಾ?
Image
ರಮೇಶ್​ ಕುಮಾರ್ ಭೂಮಿ ವಿವಾದ: ಡಿಸಿಎಫ್, ಡಿಸಿ ಹೇಳಿದ್ದಿಷ್ಟು
Image
ರಮೇಶ್‌ ಕುಮಾರ್‌ಗೆ ಮತ್ತೆ ಭೂಸಂಕಷ್ಟ? ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್
Image
ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಇದನ್ನೂ ಓದಿ: ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಚೌಡೇಶ್ವರಮ್ಮ ಪಾದದ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ತಪ್ಪು ಮಾಡಿಲ್ಲ. ಒಂದೇ ಒಂದು ಗುಂಟೆ ಜಾಗ ಬೇಡ. ಸ್ವಾಮಿದು ಜಮೀನು, ತೋಟ ಹೋಗುತ್ತೆಂದು ಹೇಳ್ತಿದ್ದಾರೆ. ಎರಡು ಮೂರು ತಿಂಗಳಿಂದ ಹೇಳುತ್ತಿದ್ದಾರೆ, ಏನೂ ಹೋಗಲ್ಲ. ಇದನ್ನು 2002ರಲ್ಲೇ ನಾನೇ ಸರ್ಕಾರಕ್ಕೆ ಬರೆದುಕೊಟ್ಟಿದ್ದೇನೆ. ಆದರೆ ಇದೆಲ್ಲವನ್ನು ಮುಚ್ಚಿಟ್ಟಿದ್ದಾರೆ, ಈ ಬಗ್ಗೆ ನಾನು ಇದುವರೆಗೂ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂತಿಮ ಹಂತ ತಲುಪಿದ ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ: ಭೂಮಿ ಉಳಿಯುತ್ತಾ, ಉರುಳುತ್ತಾ?

4 ಸರ್ವೆ ಆಗಿದೆ, ಎಲ್ಲದರಲ್ಲೂ ನಿರ್ದೋಷಿ ಅಂತ ಬಂದಿದೆ. ಎಲ್ಲದರಲ್ಲೂ ರಮೇಶ್ ಕುಮಾರ್ ನಿರ್ದೋಷಿ ಅಂತ ಇದೆ. ನಾನು ಸರ್ಕಾರಿ ಭೂಮಿ, ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ಅರ್ಜಿದಾರರಿಗೆ ಆ ದೇವರು ಒಳ್ಳೇದು ಮಾಡಲಿ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ