ಬೆಂಗಳೂರು: ಕೊವಿಡ್ ಲಸಿಕೆಯ 1ನೇ ಡೋಸ್ ಕೊಟ್ಟು 2ನೇ ಡೋಸ್ನ್ನು ವಿತರಣೆ ಮಾಡದೇ ಇರುವುದು ಸಂವಿಧಾನದ ಆರ್ಟಿಕಲ್ 21ರ ಅಡಿ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ರಾಜ್ಯ ಸರ್ಕಾರ ಜನತೆಯ ಮುಂದೆ ಲಸಿಕೆಯ ದಾಸ್ತಾನಿನ ಕುರಿತು ಖಚಿತ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಸಹ ಕೋರ್ಟ್ ಸೂಚಿಸಿದೆ.
ಕೊವಿಡ್ ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠ, ಇಂದು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆಯನ್ನೇ ನೀಡಿದೆ. ‘ನೀವು ಮತ್ತು ನಿಮ್ಮ ಸರ್ಕಾರದ ಸಚಿವರುಗಳು ಜನರಿಗೆ ಕೊವಿಡ್ ಲಸಿಕೆಯ ಲಭ್ಯತೆಯ ಬಗ್ಗೆ ಖಚಿತ ಮಾಹಿತಿ ಒದಗಿಸಬೇಕು. ಎಲ್ಲರಿಗೂ ಎಲ್ಲಾ ಹಂತದ ಲಸಿಕೆ ದೊರೆಯುವ ಭರವಸೆ ಒದಗಿಸಬೇಕು. ಮತ್ತು ಲಸಿಕೆಯನ್ನು ಸರಿಯಾದ ಸಮಯಕ್ಕೆ ಒದಗಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಸರ್ಕಾರ ಕಿವಿ ಹಿಂಡಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರವನ್ನು ಲಸಿಕೆ ಪೂರೈಕೆಯ ಕುರಿತು ಹೈಕೋರ್ಟ್ ಪ್ರಶ್ನಿಸಿದೆ. ಎರಡು ಡೋಸ್ ಲಸಿಕೆಗಳ ಪೂರೈಕೆ ಕುರಿತ ಕಂದಕವನ್ನು ತುಂಬುವಂತೆ ಸೂಚನೆ ನೀಡಿದೆ. ಸದ್ಯ ರಾಜ್ಯದಲ್ಲಿ 8.73 ಲಕ್ಷ ಜನರಿಗೆ ಕೊವಿಡ್ 2ನೇ ಡೋಸ್ ಲಸಿಕೆಯ ಕೊರತೆ ಇದೆ ಎಂಬುದು ಹೈಕೋರ್ಟ್ನ ಗಮನಕ್ಕೆ ಬಂದಿದೆ ಎಂದು ಕೋರ್ಟ್ ತಿಳಿಸಿದೆ.
ಚಾಮರಾಜನಗರ ದುರಂತ; ಕೋರ್ಟ್ಗೆ ವರದಿ ಸಲ್ಲಿಕೆ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್ಗೆ ವರದಿ ಸಲ್ಲಿಸಿದೆ. ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್ಗೆ ವರದಿ ಸಲ್ಲಿಸಿದೆ.
ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವು ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಿರ್ಧರಿಸಿ ಮತ್ತು
ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಳ್ಳಬಟ್ಟಿ ದುರಂತಕ್ಕೂ ಪರಿಹಾರ ಕೊಟ್ಟಿದ್ದೀರಿ. ಹೀಗಾಗಿ ಈ ಪ್ರಕರಣದಲ್ಲಿ ಪರಿಹಾರ ನೀಡಲು ಹಿಂಜರಿಕೆ ಸರಿಯಲ್ಲ ಎಂದ
ಹೈಕೋರ್ಟ್ ವಿಭಾಗೀಯ ಪೀಠ, ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಸೂಚನೆ ಸರ್ಕಾರಕ್ಕೆ ತಿಳಿಸಿದೆ.
ಇದನ್ನೂ ಓದಿ: ಹೈಕೋರ್ಟ್ ಚಾಟಿ: ನಾವು ನೇಣು ಹಾಕಿಕೊಳ್ಳಬೇಕಾ ಎಂದು ಕೇಳಿದ ಸದಾನಂದ ಗೌಡ, ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಸಿ.ಟಿ.ರವಿ
ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಮತ್ತು ಲಸಿಕೆ ಬಳಕೆ ಬಗ್ಗೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯ ಪ್ರಮುಖಾಂಶಗಳು
(High Court slams Karnataka Govt on distribution of 2nd dose of Vaccine)
Published On - 10:15 pm, Thu, 13 May 21