ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ: ಬೊಮ್ಮಾಯಿ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್
ಮಾಜಿ ಸಚಿವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದೆ.
ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ((Karnataka High court)) ಚಾಟಿ ಬೀಸಿದೆ. 5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಪ್ರತಿಕ್ರಿಯೆ ತಿಳಿಸಲು ಖಡಕ್ ಸೂಚನೆ ಕೊಟ್ಟಿದೆ.
ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಬೊಮ್ಮಾಯಿ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ಅಕ್ರಮ ಗಣಿಗಾರಿಕೆ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಅವರ ಅಕ್ರಮ ಹಣದಿಂದ ಸಂಪಾದನೆ ಮಾಡಿದ ಎನ್ನಲಾದ ಆಸ್ತಿ ಜಪ್ತಿಗೆ ಅನುಮತಿ ಆಗಸ್ಟ್ನಲ್ಲೇ ಸಿಬಿಐ ಸರ್ಕಾರದ ಅನುಮತಿ ಕೋರಿತ್ತು. ಆದ್ರೆಮ ಸರ್ಕಾರ ಇದುವರೆಗೂ ಅನುಮತಿ ನೀಡಿಲ್ಲ. ಇದರಿಂದ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಮನವಿ ಹೈಕೋರ್ಟ್ಗೆ ಮನವಿ ಮಾಡಿತ್ತು.
ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಇಂದು(ಜನವರಿ 10) ಕರ್ನಾಟಕ ಹೈಕೋರ್ಟ್ ವಿಚಾರಣೆ ಮಾಡಿದ್ದು, ಸರ್ಕಾರದ ವಿಳಂಬಕ್ಕೆ ಆಕ್ರೊಶ ವ್ಯಕ್ತಪಡಿಸಿದ್ದು, ಆರೋಪಿ ಪ್ರಭಾವಿ ಎಂಬ ಮಾತ್ರಕ್ಕೆ ವಿಳಂಬ ಸರಿಯಲ್ಲ ಎಂದು ಹೇಳಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಈ ಬಗ್ಗೆ ಸರ್ಕಾರ ತನ್ನ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿದರು.
ಹೈಕೋರ್ಟ್ ಮೊರೆ ಹೋಗಿದ್ದ ಸಿಬಿಐ
ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನ ಹೊಸದಾಗಿ ಪತ್ತೆ ಮಾಡಿದ್ದೇವೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಆಸ್ತಿ ಪತ್ತೆ ಹಚ್ಚಿದ್ದು, ಅಕ್ರಮ ಹಣದ ಮೂಲದಿಂದ ಖರೀದಿಸಿದ ಆಸ್ತಿ ಎಂದು ತಿಳಿದುಬಂದಿದೆ. ಇದರಿಂದ ಆಸ್ತಿ ಜಪ್ತಿಗೆ ಅನುಮತಿ ಕೋರಿ ಕರ್ನಾಟಕ ಸರ್ಕಾರಕ್ಕೆ 2022ರ ಆ.30ರಂದೇ ಅರ್ಜಿ ಸಲ್ಲಿಸಲಾಗಿದೆ. ಆದರೂ ಸಹ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅನುಮತಿ ನೀಡಿಲ್ಲ. ಈ ವಿಚಾರ ತಿಳಿದು ಜನಾರ್ದನ ರೆಡ್ಡಿ ಆಸ್ತಿ ಮಾರಾಟ ಮಾಡುತ್ತಿದ್ದಾರೆ. ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿನ ಆಸ್ತಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ರೆಡ್ಡಿ ಆಸ್ತಿ ಜಪ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಿಬಿಐ ಕೋರ್ಟ್ಗೆ ಮನವಿ ಮಾಡಿತ್ತು.
ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ 2013 ರಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. ಸರ್ಕಾರದ ಬೊಕ್ಕಸಕ್ಕೆ 198 ಕೋಟಿ ನಷ್ಟ ಉಂಟು ಮಾಡಿದ್ದಾಗಿ ಆರೋಪಿಸಿತ್ತು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 3:01 pm, Tue, 10 January 23