ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪರ್ಹ ಹೇಳಿಕೆ: ಸಂಸದ ಅನಂತಕುಮಾರ ಹೆಗಡೆಗೆ ಹೈಕೋರ್ಟ್ ಚಾಟಿ

ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ತಮ್ಮ ವಿರುದ್ಧ ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಿದ್ದು ಅನಂತಕುಮಾರ ಹೆಗಡೆ ವಿರುದ್ದ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪರ್ಹ ಹೇಳಿಕೆ: ಸಂಸದ ಅನಂತಕುಮಾರ ಹೆಗಡೆಗೆ ಹೈಕೋರ್ಟ್ ಚಾಟಿ
ಅನಂತಕುಮಾರ ಹೆಗಡೆ, ಸಿದ್ದರಾಮಯ್ಯ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Feb 16, 2024 | 8:19 PM

ಬೆಂಗಳೂರು, ಫೆಬ್ರವರಿ 16: ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ ಹೆಗಡೆ (Ananth Kumar Hegde) ತಮ್ಮ ವಿರುದ್ಧ ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. ಮುಖ್ಯಮಂತ್ರಿ ವಿರುದ್ಧ ಈ ರೀತಿಯ ಪದ ಬಳಕೆ ಮಾಡಬಹುದೇ? ಅಭಿಪ್ರಾಯ ಭೇದವಿರಬಹುದು,‌ ನೀವು ಮತ ನೀಡದೇ ಇರಬಹುದು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಗೌರವಿಸದಿದ್ದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಚುನಾವಣೆಯಲ್ಲಿ ಒಂದು ಪಕ್ಷ ಬರುತ್ತದೆ, ಹೋಗುತ್ತದೆ. ಪ್ರಜಾಪ್ರಭುತ್ವ ಕೆಲಸ ಮಾಡುವುದೇ ಹೀಗೆ. ಚುನಾವಣೆಯಲ್ಲಿ ಸೋಲಿಸಬಹುದು ಅದು ಬೇರೆ ವಿಚಾರ. ಭಾಷೆಯ ಬಳಕೆ ಗೌರವಯುತವಾಗಿರಬೇಕು. ಭಾಷೆ ಪ್ರಯೋಗ ಹಿಡಿತದಲ್ಲಿಡಲು ಅರ್ಜಿದಾರರಿಗೆ ಸೂಚನೆ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ರಾಮಮಂದಿರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ‌ ಎಫ್​ಐಆರ್​ ದಾಖಲಾಗಿತ್ತು.

ಇದನ್ನೂ ಓದಿ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದ ಪರಮೇಶ್ವರ್

ರಾಮಮಂದಿರ ವಿಚಾರವನ್ನೇ ಕೈಗೆತ್ತಿಕೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮುಗಿಬೀಳುತ್ತಿದ್ದಾರೆ. ತಾವು ರಾಮನ ಭಕ್ತ, ಬಿಜೆಪಿಯವರು ರಾಮನ ವಿರೋಧಿಗಳು ಎಂದಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯರನ್ನ ಟೀಕಿಸುವ ಭರದಲ್ಲಿ ಸಂಸದ ಅನಂತಕುಮಾರ್ ಹೆಗಡೆ ನಾಲಗೆ ಹರಿಬಿಟ್ಟಿದ್ದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿ ಹೆಗಡೆ 

ಅಯೋಧ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು.

ಇದನ್ನೂ ಓದಿ: ಹಿರಿತನ ಮತ್ತು ಸ್ಥಾನಕ್ಕೆ ಗೌರವ ಕೊಡಲೇಬೇಕು, ಅನಂತಕುಮಾರ್ ಹೆಗಡೆ ಮಾತುಗಳನ್ನು ಸಮರ್ಥಿಸಲ್ಲ: ಸಿಟಿ ರವಿ

ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡುತ್ತಾ ಮಗನೇ ಎಂದಿರೋದು ಕಾಂಗ್ರೆಸ್ ನಾಯಕರನ್ನು ಕೆರಳಿಸಿತ್ತು. ಇತ್ತ ಅನಂತ್ ಕುಮಾರ್ ಹೆಗಡೆ ಮಾತಿನಿಂದ ಬಿಜೆಪಿ ನಾಯಕರು ಅಂತರ ಕಾಯ್ದುಕೊಂಡಿದ್ದರು. ಆದರೂ ಬಿಜೆಪಿ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆ ಖಾರವಾದ ಮಾತುಗಳಿಂದಲೇ ಕೈ ನಾಯಕರ ವಾಗ್ಬಾಣಗಳನ್ನು ಏಕಾಂಗಿಯಾಗಿ ಎದುರಿಸಿದ್ದರು.

ಸಾಲು ಸಾಲು ವಿವಾದದ ಕಿಡಿ ಹೊತ್ತಿಸಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ರಾಜ್ಯದ ಹಲವುಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಕಾರವಾರ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬಾಗಲಕೋಟೆ ಸೇರಿ ಕಾಂಗ್ರೆಸ್ ಕಿಚ್ಚು ಜೋರಾಗಿತ್ತು. ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.