ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್ ಹಾಲ್ ಬಳಿ ಬಿಗಿಭದ್ರತೆ
ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್ಐಆರ್ ದಾಖಲಿಸಿದ್ದರು. ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್ ಹಾಲ್ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್ ಹಾಲ್ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್ಐಆರ್ ದಾಖಲಿಸಿದ್ದರು.
ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್ ಹಾಲ್ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್ ಹಾಲ್ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
Published On - 7:31 am, Fri, 20 December 19