ಹೆಚ್ಎಸ್ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಡೆಡ್​ಲೈನ್​ ನೀಡಿದ ಸಾರಿಗೆ ಇಲಾಖೆ

ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಸಾರಿಗೆ ಇಲಾಖೆ ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುತ್ತಿದೆ. ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ ಕೊನೆ ದಿನಾಂಕ ಘೋಷಿಸಿದೆ.

ಹೆಚ್ಎಸ್ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಡೆಡ್​ಲೈನ್​ ನೀಡಿದ ಸಾರಿಗೆ ಇಲಾಖೆ
ಸಾಂದರ್ಭಿಕ ಚಿತ್ರ
Follow us
Kiran HV
| Updated By: ವಿವೇಕ ಬಿರಾದಾರ

Updated on: Sep 16, 2023 | 9:35 AM

ಬೆಂಗಳೂರು ಸೆ.16: ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ಇನ್ನು ಹೆಚ್​ಎಸ್​ಆರ್​​ಪಿ ನಂಬರ್ ಪ್ಲೇಟ್ (Number Plate) ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ (Transport Department) ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  1. https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಇದನ್ನೂ ಓದಿ: ಜಯನಗರ RTO: ಫ್ಯಾನ್ಸಿ ನಂಬರುಗಳು ಲಕ್ಷ ಲಕ್ಷಕ್ಕೆ ಬಿಕರಿಯಾದವು -ವಾಹನ ಮಾಲೀಕರಿಗೂ ಖುಷಿ, ಸಾರಿಗೆ ಇಲಾಖೆಗೂ ಫುಲ್ ಖುಷ್​!

HSRP ಅಳವಡಿಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು

  1. https://transport.karnataka.gov.in www.siam.in ಮೂಲಕ ಮಾತ್ರ HSRP ಅಳವಡಿಕೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP ಒಂದೇ ರೀತಿಯ ಪ್ರೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ, ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು/ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಆಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ, HSRP ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?

ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್