AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ; ಕರ್ನಾಟಕದ ವಾಹನಗಳು ಜಖಂ

Srisailam: ಆಂಧ್ರಪ್ರದೇಶದ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಕನ್ನಡಿಗರ ನೂರಕ್ಕೂ ಹೆಚ್ಚು ಗಾಡಿಗಳು ಜಖಂಗೊಂಡಿರುವ ಮಾಹಿತಿ ಲಭ್ಯವಾಗಿದ್ದು, ಎರಡು ಗುಂಪುಗಳ ನಡುವಿನ ಗಲಾಟೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಆಂಧ್ರದ ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ; ಕರ್ನಾಟಕದ ವಾಹನಗಳು ಜಖಂ
ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ
TV9 Web
| Updated By: shivaprasad.hs|

Updated on:Mar 31, 2022 | 11:10 AM

Share

ಶ್ರೀಶೈಲ: ಮಧ್ಯರಾತ್ರಿ ಆಂಧ್ರಪ್ರದೇಶದ ಯಾತ್ರಾ ಕ್ಷೇತ್ರ ಶ್ರೀಶೈಲದಲ್ಲಿ (Srisailam) ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಗಾಡಿ ಜಖಂಗೊಂಡಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಶ್ರೀಶೈಲದಲ್ಲಿ ಇರುವ ಕರ್ನಾಟಕ ಭಕ್ತಾದಿಗಳಿಂದ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಸ್ಥಳೀಯರು ಹಾಗೂ ಕನ್ನಡಿಗರ ಎರಡು ಗುಂಪುಗಳ ನಡುವೆ ನಡುವೆ ಸಣ್ಣ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಹೋಟೆಲ್‌ನಲ್ಲಿ ನೀರು ಕೇಳುವ ವಿಚಾರವಾಗಿ ಜಗಳ ಪ್ರಾರಂಭವಾಗಿತ್ತು. ಈ ವೇಳೆ ತಕರಾರು ತೆಗೆದು ಹೋಟೆಲ್‌ನಲ್ಲಿ ಜಗಳವಾಗಿತ್ತು. ಸ್ಥಳದಲ್ಲಿ ಕನ್ನಡಿಗರು ಹಾಗೂ ಸ್ಥಳೀಯರ ನಡುವೆ ಘರ್ಷಣೆ ನಡೆದಿದೆ. ಕನ್ನಡಿಗರ ವಾಹನಗಳಿಗೆ ಕಲ್ಲು ತೂರಾಟ ಮಾಡಲಾಗಿದೆ. ಉದ್ವಿಗ್ನ ಸ್ಥಿತಿಯ ಕಾರಣ, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, 144 ಸೆಕ್ಷನ್ ಹಾಕಲಾಗಿದೆ.

Karnataka vehicle damaged in Srisailam Incident

ಘಟನೆಯಲ್ಲಿ ಜಖಂಗೊಂಡಿರುವ ಕರ್ನಾಟಕ ವಾಹನಗಳು

ಯುಗಾದಿ ಹಬ್ಬದ ಹೊಸವರ್ಷಾಚರಣೆಗೆ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಕರ್ನಾಟಕದಿಂದ ಲಕ್ಷಾಂತರ ಭಕ್ತರು ತೆರಳುತ್ತಾರೆ. ಈ ಬಾರಿಯೂ ದೊಡ್ಡ ಸಂಖ್ಯೆಯಲ್ಲಿ ಭಕ್ತರು ತೆರಳಿದ್ದರು.

ಶ್ರೀಶೈಲದ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸರು ಗಲಭೆ ಹತೋಟಿಗೆ ತರಲು ಹರಸಾಹಸ ಪಟ್ಟಿದ್ದಾರೆ. ಕರ್ನಾಟಕ ಭಕ್ತರು ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಕಂಟೇನರ್ ಹಾಗೂ ಲಾರಿ ನಡುವೆ ಡಿಕ್ಕಿ; ಅನಾನಸ್ ತುಂಬಿಕೊಂಡ ಲಾರಿ ಬೆಂಕಿಗಾಹುತಿ

ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆ; ಸಿದ್ಧಗಂಗಾ ಮಠಕ್ಕೆ ಇಂದು ರಾಹುಲ್, ನಾಳೆ ಅಮಿತ್ ಷಾ ಭೇಟಿ

Published On - 8:56 am, Thu, 31 March 22