NEP: ಅಧಿಕಾರ ಸ್ವೀಕರಿಸಿದ ದಿನವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅಂಕಿತ ಹಾಕಿದ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ; ಇಲ್ಲಿದೆ ವಿವರ

ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಡಿಸಿದ ಉನ್ನತ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ವಿವರ ಇಲ್ಲಿದೆ.

NEP: ಅಧಿಕಾರ ಸ್ವೀಕರಿಸಿದ ದಿನವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅಂಕಿತ ಹಾಕಿದ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ; ಇಲ್ಲಿದೆ ವಿವರ
ಡಾ. ಅಶ್ವತ್ಥ ನಾರಾಯಣ
Follow us
TV9 Web
| Updated By: guruganesh bhat

Updated on:Aug 07, 2021 | 9:39 PM

ಬೆಂಗಳೂರು: ತಾವು ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ದಿನವೇ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿ ಆದೇಶಕ್ಕೆ ಸಹಿ ಡಾ.ಅಶ್ವತ್ಥ್‌ ನಾರಾಯಣ (Dr Ashwath Narayan) ಸಹಿ ಹಾಕಿದ್ದಾರೆ. ಈಮೂಲಕ 2021-22ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವುದು ಅಧಿಕೃತವಾದಂತಾಗಿದೆ. ಜತೆಗೆ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಡಿಸಿದ ಉನ್ನತ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಪ್ರಸಕ್ತ ವರ್ಷಕ್ಕೆ ಕಾಲೇಜುಗಳಲ್ಲಿ BA ಅಥವಾ BSC ಪದವಿ ಅಧ್ಯಯನಕ್ಕೆ ಆಯಾ ಕಾಲೇಜುಗಳಲ್ಲಿ ಲಭ್ಯವಿರುವ 2 ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ 3ನೇ ವರ್ಷದ ಆರಂಭದಲ್ಲಿ ಒಂದು ವಿಷಯವನ್ನು ಮೇಜರ್‌ ಆಗಿ, ಇನ್ನೊಂದು ವಿಷಯವನ್ನು ಮೈನರ್‌ ವಿಷಯವನ್ನಾಗಿಯೂ ಅಥವಾ ಎರಡೂ ವಿಷಯಗಳನ್ನು ಮೇಜರ್‌ ಆಗಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬಹುದು. ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ 2 ವಿಷಯಗಳ ಜತೆಗೆ ಕನ್ನಡ ಮತ್ತು ಇನ್ನೊಂದು ಭಾಷಾ ವಿಷಯವನ್ನು ಪ್ರೋಗ್ರಾಂ ವಿನ್ಯಾಸಕ್ಕೆ ಅನುಗುಣವಾಗಿ ಮುಕ್ತ ಆಯ್ಕೆಗಳು ಮತ್ತು ಬಹುಶಿಸ್ತೀಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು.

ಪಿಯುಸಿ ಅಥವಾ 10+2 ಹಂತದಲ್ಲಿ ಕನ್ನಡ ಕಲಿಯದವರಿಗೆ ಅಥವಾ ಕನ್ನಡ ಮಾತೃ ಭಾಷೆಯಲ್ಲದವರಿಗೆ ಕನ್ನಡದ ಬೇರೆ ಪಠ್ಯಕ್ರಮ ರೂಪಿಸಿ ಬೋಧಿಸಲು ಅವಕಾಶ ಒದಗಿಸಲಾಗಿದೆ. ಮಾತೃಭಾಷೆ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ. ವಿಷಯಾಧಾರಿತ ಪದವಿ ಅಧ್ಯಯನಗಳಿಗೆ (B.Com, BCA, BBA, BVA, BPAಯಂತಹ ಕೋರ್ಸ್​ಗಳು) ಸಂಬಂಧಪಟ್ಟ ಹಾಗೆ ವಿಷಯಗಳನ್ನು ಬಹುಶಿಸ್ತೀಯ ಆಯ್ಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಅವರು ಕನ್ನಡ ಹಾಗೂ ಮತ್ತೊಂದು ಭಾಷೆ ಮತ್ತು ಪಠ್ಯಕ್ರಮಕ್ಕೆ ಅನುಗುಣವಾಗಿ ಮುಕ್ತ ಆಯ್ಕೆಗಳನ್ನು ಮತ್ತು  ಬಹುಶಿಸ್ತೀಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು.

ವಿದ್ಯಾರ್ಥಿಯು ಪ್ರಥಮ ವರ್ಷದಲ್ಲಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 5ನೇ ಹಂತದ ನಿಗದಿತ ಪಠ್ಯವನ್ನು ಅಧ್ಯಯನ ಮಾಡಿ, ಅವಶ್ಯಕ ಅಂಕಗಳನ್ನು ಗಳಿಸಿ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಿದರೆ ಪ್ರಮಾಣ ಪತ್ರವನ್ನು ನೀಡಬೇಕು. ವಿದ್ಯಾರ್ಥಿಯು ಎರಡನೇ ವರ್ಷದ ಅಧ್ಯಯನವನ್ನು ಮುಂದುವರೆಸಿ. ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 6ನೇ ಹಂತದ ನಿಗದಿತ ಪಠ್ಯವನ್ನು ಅಧ್ಯಯನ ಮಾಡಿ ಅವಶ್ಯಕ ಅಂಕಗಳನ್ನು ಗಳಿಸಿ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಿದರೆ ಡಿಪ್ಲೋಮಾ ನೀಡಬೇಕು. ವಿದ್ಯಾರ್ಥಿಯು ಮೂರನೇ ವರ್ಷದ ಅಧ್ಯಯನವನ್ನು ಮುಂದುವರೆಸಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 3ನೇ ಹಂತದ ನಿಗದಿತ ಪಠ್ಯವನ್ನು ಅಧ್ಯಯನ ಮಾಡಿ ಅವಶ್ಯಕ ಅಂಕಗಳನ್ನು ಗಳಿಸಿದರೆ ಪದವಿ ನೀಡುವುದು ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡುತ್ತಿರುವ ಮಹಾವಿದ್ಯಾಲಯದಲ್ಲಿ ನಾಲ್ಕನೇ ವರ್ಷದ ಅಧ್ಯಯನ ಲಭ್ಯವಿದ್ದಲ್ಲಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 8ನೇ ಹಂತದ ಅವರು ಆಯ್ಕೆ ಮಾಡಿದ ಐಚ್ಛಿಕ ವಿಷಯಗಳ ಅಧ್ಯಯನ ಮುಂದುವರೆಸಿ ಅಧ್ಯಯನ ಪೂರ್ಣಗೊಳಿಸಿದರೆ ಸ್ನಾತಕ ಹಾನರ್ಸ್‍ ಪದವಿ ನೀಡಲಾಗುವುದು ನಾಲ್ಕನೇ ವರ್ಷದಲ್ಲಿ ಸಂಶೋಧನೆಯು ಅಧ್ಯಯನದ ಭಾಗವಾದರೆ ಅಂತಹ ಸ್ನಾತಕ ಆನರ್ಸ್‍ ಪದವೀಧರರು ನೇರವಾಗಿ Ph.D ಪದವಿ ಅಧ್ಯಯನಕ್ಕೆ ಸೇರಲು ಅರ್ಹರು. ಒಂದು ವೇಳೆ ವಿದ್ಯಾರ್ಥಿಯು ಅಧ್ಯಯನ ಮಾಡುತ್ತಿರುವ ವಿದ್ಯಾಲಯದಲ್ಲಿ ಸ್ನಾತಕ ಆನರ್ಸ್‌ ಪದವಿ ತರಗತಿ ಲಭ್ಯವಿಲ್ಲದಿದ್ದರೆ ವಿದ್ಯಾರ್ಥಿಯು ನಾಲ್ಕನೇ ವರ್ಷದ ಸ್ನಾತಕ ಹಾನರ್ಸ್‌ ಪದವಿಗೆ ಬೇರೊಂದು ಮಹಾವಿದ್ಯಾಲಯ ಸೆರುವ ಅವಕಾಶ ಒದಗಿಸಲಾಗಿದೆ.

ಇದನ್ನೂ ಓದಿ: 

PM Modi Speech Today: 11 ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣ: ನರೇಂದ್ರ ಮೋದಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಎಡವಿದ್ದೆಲ್ಲಿ?

(Higher Education Minister Dr Ashwath Narayan signed to adopt new National Education Policy on first day of his ministry in charge)

Published On - 9:24 pm, Sat, 7 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್