ರಾಜ್ಯದಲ್ಲಿ ಶುಕ್ರವಾರ 44.5 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು, 7 ವರ್ಷದಲ್ಲೇ ಗರಿಷ್ಠ

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಹಾಗೂ ಏಪ್ರಿಲ್​​ 09 ರಿಂದ 13 ಏಪ್ರಿಲ್​ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಶುಕ್ರವಾರ 44.5 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು, 7 ವರ್ಷದಲ್ಲೇ ಗರಿಷ್ಠ
ಹವಾಮಾನ ವರದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 06, 2024 | 7:25 AM

ರಾಜ್ಯದಲ್ಲಿ ಬಿಸಿಲಿನ ತಾಪಮಾನ (Temperature) ದಿನದಿಂದ ದಿನಕ್ಕೆ ಏರುತ್ತಿದೆ. ಕರಾವಳಿ, ಉತ್ತರ ಕರ್ನಾಟಕದಲ್ಲಿ (North Karnataka) ಇಂದು (ಏ.06) ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಹಾಗೂ ಏಪ್ರಿಲ್​​ 09 ರಿಂದ 13 ಏಪ್ರಿಲ್​ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರರ್ಗಾ, ನಿಂಬರ್ಗಾ ತಾಂಡಾ ಮತ್ತು ರಾಯಚೂರು ಜಿಲ್ಲೆಯ ಹೂಡಾ ಹೋಬಳಿಯಲ್ಲಿ ಶುಕ್ರವಾರ (ಏ.05) ರಂದು 44.5 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಏ.5 ರಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 42 ರಿಂದ 44.5 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ. ಏಪ್ರಿಲ್ 05 ರಂದು ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನ ಕಳೆದ 7 (2017-2024) ವರ್ಷಕ್ಕೆ ಹೋಲಿಸಿದರೆ ಅತಿ ಹೆಚ್ಚು ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ತಾಪಮಾನ ಹೆಚ್ಚಳ: 8 ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರಿನಲ್ಲಿ 3 ವರ್ಷಗಳಲ್ಲೇ ಅತ್ಯಧಿಕ ಬಿಸಿ

ರಣಬಿಸಿಲಿಗೆ ಉದ್ಯಾನವನ ನಗರ ಬೆಂಗಳೂರು ಬೆಂದಕಾಳೂರಾಗುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರ ನಗರದಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಮುಂದುವರಿದಿದೆ. ಇದು ಮುಂದಿನ ದಿನಗಳಲ್ಲಿ ಇದು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ತುಮಕೂರಿನಲ್ಲಿ ಬಿಸಿಲಿನ ತಾಪಕ್ಕೆ ಮೀನುಗಳ ಮಾರಣಹೋಮ!

ಹೆಚ್ಚುತ್ತಿರುವ ಬಿಸಿಲಿನ ಝಳಕ್ಕೆ ಮೀನುಗಳೂ ವಿಲವಿಲನೆ ಒದ್ದಾಡಿ ಪ್ರಾಣ ಬಿಡುತ್ತಿವೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕನ್ನಮೇಡಿ ಕೆರೆಯಲ್ಲಿ ರಾಶಿ ರಾಶಿ ಮೀನುಗಳು ಪ್ರಾಣತೆತ್ತಿವೆ. ಸುಮಾರು 108 ಎಕರೆ ಇರುವ ಕೆರೆಯ ನೀರು ಸಂಪೂರ್ಣವಾಗಿ ಬತ್ತಿದ್ದು, ಸಾವಿರಾರು ಮೀನುಗಳು ಸತ್ತಿವೆ.

ಕಲಬುರಗಿ ಕಾರ್ಮಿಕರಿಗೆ ವಿನಾಯಿತಿ

ಬಿಸಿಗಾಳಿ ಹೊಡೆತದಿಂದ ತಪ್ಪಿಸಲು ನರೇಗಾ ಕೂಲಿಕಾರ್ಮಿಕರ ಕೆಲಸದ ಸಮಯದಲ್ಲಿ ರಿಯಾಯಿತಿ ನೀಡಲಾಗಿದೆ. ನಿಗದಿಪಡಿಸಿದ ಕೆಲಸದ ಪ್ರಮಾಣದಲ್ಲಿ ಶೇ.30ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ, ಬೆಳಗಾವಿ ವಿಭಾಗದ 14 ಜಿಲ್ಲೆಗಳಿಗೆ ಈ ನಿಯಮ ಅನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:57 am, Sat, 6 April 24

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್