AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ಆಕ್ಷೇಪ, ತಡೆಹಿಡಿದ ಸರ್ಕಾರ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಎರಡು ವರ್ಷದ ಹಿಂದಿನ ಹಿಜಾಬ್ ವಿವಾದದ ಎಫೆಕ್ಟ್ ಈಗ ತಟ್ಟಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು​ ಗೇಟ್ ಬಳಿ ತಡೆದಿದ್ದರು. ಹಾಗಾಗಿ ಹಿಜಾಬ್ ಪರ ಹೋರಾಟಗಾರರ ಒತ್ತಡಕ್ಕೆ ಮಣಿದು ಸರ್ಕಾರ ಪ್ರಶಸ್ತಿ ತಡೆಹಿಡಿದಿದೆ.

ಉತ್ತಮ ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ಆಕ್ಷೇಪ, ತಡೆಹಿಡಿದ ಸರ್ಕಾರ
ಉತ್ತಮ ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ಆಕ್ಷೇಪ, ತಡೆಹಿಡಿದ ಸರ್ಕಾರ
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 05, 2024 | 7:14 AM

Share

ಉಡುಪಿ, ಸೆಪ್ಟೆಂಬರ್​​ 05: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೂ (Best Teacher Award) ಹಿಜಾಬ್ ವಿವಾದ ತಟ್ಟಿದೆ. ಹಿಜಾಬ್ ಪರ ಹೋರಾಟಗಾರರಿಂದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಪ್ರಶಸ್ತಿ ಘೋಷಣೆ ಆಗಿತ್ತು. ಆದರೆ ಇವರ ಆಯ್ಕೆ ಕುರಿತು ಹಿಜಾಬ್ ಪರರ ವಿರೋಧ ವ್ಯಕ್ತಪಡಿಸಲಾಗಿದೆ.

ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಎರಡು ವರ್ಷದ ಹಿಂದಿನ ಹಿಜಾಬ್ ವಿವಾದದ ಎಫೆಕ್ಟ್ ಈಗ ತಟ್ಟಿದೆ. ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಬಿಜಿ ಅವರ ಹೆಸರು ಕೇಳಿಬಂದಿತ್ತು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು​ ಗೇಟ್ ಬಳಿ ತಡೆದಿದ್ದರು.

ಇದನ್ನೂ ಓದಿ: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ: 20 ಪ್ರಾಥಮಿಕ, 11 ಪ್ರೌಢಶಾಲೆ ಶಿಕ್ಷಕರ ಆಯ್ಕೆ

ವಿದ್ಯಾರ್ಥಿಯನ್ನು ಗೇಟ್ ಬಳಿ ಪ್ರಾಂಶುಪಾಲರು ತಡೆದಿದ್ದ ಫೋಟೋ ವೈರಲ್ ಆಗಿತ್ತು. ಹೀಗಾಗಿ ಪ್ರಶಸ್ತಿ ಹಿಂಪಡೆಯುವಂತೆ ಹಿಜಾಬ್ ಪರ ಹೋರಾಟಗಾರರು ಒತ್ತಡ ಹಾಕಿದ್ದು, ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಪ್ರಶಸ್ತಿ ತಡೆ ಹಿಡಿದಿದ್ದಾರೆ. ರಾಮಕೃಷ್ಣ ಬಿಜಿ ಅವರಿಗೆ ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕೂಡ ವಿರೋಧ ಕೇಳಿಬಂದಿತ್ತು.

ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರನಿಲ್ಲಿಸಿದ್ದ ಪ್ರಾಂಶುಪಾಲರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಉಡುಪಿಯಲ್ಲಿ ಭುಗಿಲೆದಿದ್ದ ವಿವಾದ ರಾಜ್ಯಾದ್ಯಂತ ಹಬ್ಬಿತ್ತು. ಕೊನೆಗೆ ಅಂದಿನ ಬಿಜೆಪಿ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿತ್ತು.

ಇದನ್ನೂ ಓದಿ: ಕೇಂದ್ರ ಶಿಕ್ಷಣ ಇಲಾಖೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ; ರಾಜ್ಯದ ಒಬ್ಬರು ಆಯ್ಕೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಇತ್ತೀಚೆಗೆಗಷ್ಟೇ ಶಿಕ್ಷಣ ಇಲಾಖೆ ಪಟ್ಟಿ ಪ್ರಕಟಿಸಿತ್ತು. ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿತ್ತು. ಶಿಕ್ಷಕರ ದಿನಾಚರಣೆ ದಿನದಂದು ಸರ್ಕಾರ ಪ್ರಶಸ್ತಿ ಪ್ರದಾನ ನಡೆಯಲಿದೆ. ಜೊತೆಗೆ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮಹಿಳಾ ಶಿಕ್ಷಕಿಯರಿಗೆ ಅಂದೇ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಸಹ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.