ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ; ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 25, 2022 | 11:16 AM

ಇಬ್ಬರು ತಮಿಳುನಾಡು ತೌಹೀದ್ ಜಮಾತ್​ನ ಸದಸ್ಯರಾಗಿದ್ದರು. ತಂಜವೂರು ಪೊಲೀಸ್ರು ಈ ಹಿಂದೆ ಬಂಧಿಸಿದ್ದರು. ಅಲ್ಲದೆ ವೈರಲ್ ಆದ ವಿಡಿಯೋದಲ್ಲಿ ಜಾರ್ಖಂಡ್​ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿನ ಬಗ್ಗೆ ಉಲ್ಲೇಖ ಮಾಡಿದ್ದರು. 

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ; ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು
ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳು
Follow us on

ಬೆಂಗಳೂರು: ಹಿಜಾಬ್ ತೀರ್ಪು ನೀಡಿದ ನ್ಯಾಯಾಮೂರ್ತಿಗಳಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ವಿಧಾನಸೌಧ ಠಾಣೆ ಪೊಲೀಸ್ರು ಕಸ್ಟಡಿಗೆ ಪಡೆದಿದ್ದಾರೆ. ಜಮಾಲ್ ಮಹಮ್ಮದ್ ಉಸ್ಮಾನಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಎಂಟು ದಿನಗಳ ಕಸ್ಟಡಿಗೆ ಪಡೆದಿರುವ ಪೊಲೀಸರು, ಈ ಹಿಂದೆ ಕೋವೈ ರೆಹಮತ್ ಉಲ್ಲಾನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇಬ್ಬರು ತಮಿಳುನಾಡು ತೌಹೀದ್ ಜಮಾತ್​ನ ಸದಸ್ಯರಾಗಿದ್ದರು. ತಂಜವೂರು ಪೊಲೀಸ್ರು ಈ ಹಿಂದೆ ಬಂಧಿಸಿದ್ದರು. ಅಲ್ಲದೆ ವೈರಲ್ ಆದ ವಿಡಿಯೋದಲ್ಲಿ ಜಾರ್ಖಂಡ್​ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿನ ಬಗ್ಗೆ ಉಲ್ಲೇಖ ಮಾಡಿದ್ದರು.  ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಕುರಿತಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಎರಡನೇ ಆರೋಪಿಯನ್ನ ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆ ಒಳಪಡಿಸಲಾಗುವುದು. ಇದರಿಂದ ತನಿಖೆಗೆ ಸಹಕಾರಿಯಾಗಲಿದೆ. ಪ್ರಕರಣದ ಹಿಂದ ಯಾವ ಸಂಘಟನೆಗಳು ಇವೆ ತನಿಖೆ ನಡಿತಿದೆ. ಒಟ್ಟಾರೆ ಇಬ್ಬರೂ ಆರೋಪಿಗಳ ಬಂಧನವಾಗಿದೆ ಎಂದು ಹೇಳಿದರು.

ಹಿಜಾಬ್ ವಿಚಾರದಲ್ಲಿ ಇತ್ತೀಚೆಗೆ ಮಹತ್ವದ ತೀರ್ಪು (Hijab Verdict) ನೀಡಿದ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ (Karnataka High Court Justice) ಬೆದರಿಕೆ ಒಡ್ಡಲಾಗಿದೆ. ತಮಿಳುನಾಡಿನ ತೌಹೀದ್ ಜಮಾತ್ ನಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಇದೀಗ ತೌಹೀದ್ ಜಮಾತ್ ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿದೆ. ಗಿರೀಶ್ ಭಾರದ್ವಾಜ್ ಎಂಬುವರಿಂದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಲಾಗಿದೆ. ತಮಿಳುನಾಡು ತಾಬೇದ್ ಜಮಾತ್ ಸಂಘಟನೆಗೆ ಸೇರಿದ್ದ ಆರೋಪಿ ರೆಹಮತ್ ಉಲ್ಲಾ ತಮಿಳುನಾಡಿನ ತಿರುಪತ್ತೂರ್ ಜೈಲಿನಲ್ಲಿದ್ದ. ಕಳೆದ ಗುರುವಾರ ಮಧುರೈನಲ್ಲಿ ನಡೆದ ಭಾಷಣದಲ್ಲಿ ಹಿಜಾಬ್ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ. ಸದ್ಯ ಬಾಡಿ ವಾರಂಟ್ ಪಡೆದು ಬೆಂಗಳೂರು ಪೊಲೀಸರು ತಮಿಳುನಾಡಿಗೆ ಹೋಗಿ ಆರೋಪಿ ಕರೆತಂದಿದ್ದಾರೆ.

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ಹಿಜಾಬ್ ತೀರ್ಪು ನೀಡಿದೆ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ಹಿಜಾಬ್​ ಧಾರಣೆ ಕಡ್ಡಾಯವಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತನ್ನತೀರ್ಪಿನಲ್ಲಿ ತಿಳಿಸಿದೆ.

ಇದನ್ನೂ ಓದಿ:

‘RRR​’ ನೋಡಲು ಬಂದರು, ಪುನೀತ್​ಗೆ ಜೈಕಾರ ಹಾಕಿದರು; ಅಪ್ಪು ಮೇಲಿನ ಅಭಿಮಾನ ನಿರಂತರ

Interesting Fact: ಬಾವಲಿಗಳು ಯಾವಾಗಲೂ ಏಕೆ ತಲೆಕೆಳಗಾಗಿ ಮಲಗುತ್ತವೆ?! ಅದರ ಹಿಂದಿನ ಕಾರಣವೇನು?

Published On - 10:38 am, Fri, 25 March 22