ಸಮವಸ್ತ್ರ ಸಂಘರ್ಷ ಮಧ್ಯೆಯೇ ಶಿಕ್ಷಣ ಇಲಾಖೆ ಕೆಲಸ ಮಾಡಬೇಕಾಗಿದೆ – ಶಾಸಕ ಸುರೇಶ್‌ ಕುಮಾರ್ ಪತ್ರ ಸಲಹೆ

S Sureshkumar: ಹಿಂದಿನ ಶಿಕ್ಷಣ ಸಚಿವ, ರಾಜಾಜಿನಗರದ ಬಿಜೆಪಿ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಕೊಟ್ಟಿರುವ ಪತ್ರ ಸಲಹೆ ಹೀಗಿದೆ: ಖ್ಯಾತ ಹಿನ್ನೆಲೆ ಗಾಯಕರಿಂದ, ಗೀತ ಸಾಹಿತಿಗಳ‌ ನೆರವನ್ನೂ ಪಡೆದು ವಿಶಿಷ್ಟ ಹಾಡುಗಳನ್ನು ರಚಿಸಿ ಚಿತ್ರೀಕರಿಸಬಹುದು. ನನ್ನ ಶಾಲೆ, ನನ್ನ ಕಾಲೇಜು, ನನ್ನ ಹೆಮ್ಮೆ, ನನ್ನ‌ ಶಿಕ್ಷಣ, ನನ್ನ ಸಮವಸ್ತ್ರ‌ ಮತ್ತು‌ ನನ್ನದೇ ಭವಿಷ್ಯವೆನ್ನುವ ಭಾವನೆ‌ ಪ್ರತಿ ವಿದ್ಯಾರ್ಥಿಯಲ್ಲಿಯೂ ಮೂಡುವ ಪ್ರಯತ್ನಮಾಡಬೇಕು

ಸಮವಸ್ತ್ರ ಸಂಘರ್ಷ ಮಧ್ಯೆಯೇ ಶಿಕ್ಷಣ ಇಲಾಖೆ ಕೆಲಸ ಮಾಡಬೇಕಾಗಿದೆ - ಶಾಸಕ ಸುರೇಶ್‌ ಕುಮಾರ್ ಪತ್ರ ಸಲಹೆ
ಎಸ್. ಸುರೇಶ್ ಕುಮಾರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 18, 2022 | 12:03 PM

ಬೆಂಗಳೂರು: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್​ ಧಾರಣೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಶಿಕ್ಷಣ ಸಚಿವ ಬಿಸಿ ನಾಗೇಶ್​ (BC Nagesh) ಅವರುಗಳಿಗೆ ಶಾಸಕ ಸುರೇಶ್‌ ಕುಮಾರ್ (S Sureshkumar) ಪತ್ರ ಬರೆದಿದ್ದಾರೆ. ಸಮವಸ್ತ್ರ ಸಂಘರ್ಷದ ನಡುವೆ ಕೆಲಸ ಮಾಡಬೇಕಾಗಿದೆ. ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಸಮವಸ್ತ್ರದ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸಬೇಕು. ನನ್ನ ಶಾಲೆ-ಕಾಲೇಜು, ನನ್ನ ಹೆಮ್ಮೆ, ನನ್ನ  ಶಿಕ್ಷಣ, ನನ್ನ ಸಮವಸ್ತ್ರ, ನನ್ನದೇ ಭವಿಷ್ಯವೆನ್ನುವ ಭಾವನೆ ನಮ್ಮ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕಾದರೆ ಶಿಕ್ಷಣ ಇಲಾಖೆಯ ಕೆಲಸ ಗಮನಾರ್ಹ ಎಂದು ಪತ್ರದಲ್ಲಿ ಶಾಸಕ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ನ್ಯಾಯಾಲಯವು ಸಾಂವಿಧಾನಿಕ‌ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ‌ ಕದಡುವ ಪ್ರಯತ್ನಗಳಾಗುತ್ತಿವೆ ಎಬುದನ್ನು ನೋಡಿದಾಗ ಇದರ‌ ಹಿಂದಿನ‌ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ ಎಂದು ಅವರು ವಿಷಾದದ ದನಿಯಲ್ಲಿ ಹೇಳಿದ್ದಾರೆ (Hijab Row).

ಶಿಕ್ಷಣ‌ ಇಲಾಖೆ ಕೂಡಲೇ‌ ಕೆಲವು ಕ್ರಮಗಳಿಗೆ ಮುಂದಾಗಬೇಕೆಂದು ಈ ಹಿಂದಿನ ಶಿಕ್ಷಣ ಸಚಿವ, ರಾಜಾಜಿನಗರದ ಬಿಜೆಪಿ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಕೊಟ್ಟಿರುವ ಪತ್ರ ಸಲಹೆ ಹೀಗಿದೆ:

  1. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ನಡುವೆ ಸೋದರತ್ವ, ಸೌಹಾರ್ದತೆಯನ್ನು ಕಾಪಾಡುವ, ಶೈಕ್ಷಣಿಕ‌ ವಾತಾವರಣವನ್ನು ಸಂರಕ್ಷಿಸುವ ನಿಟ್ಟಿನಲ್ಲಿ‌ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಗಳಿಗೆ ಹೆಚ್ಚಿನ‌ ಜವಾಬ್ದಾರಿಯನ್ನು ನಿಗದಿ‌ ಪಡಿಸಬೇಕು.
  2. ತರಗತಿವಾರು ಮಕ್ಕಳ ಸಭೆಗಳನ್ನು ನಿಗದಿಪಡಿಸಿ ಕೋಮುಸಾಮರಸ್ಯದ ಸಾಂಸ್ಕೃತಿಕ‌ ಕಾರ್ಯಕ್ರಮಗಳು, ಸಮವಸ್ತ್ರದ ಆಶಯ, ಅದನ್ನು ಧರಿಸಿದಾಗ ಮೂಡಬೇಕಾದ ಸಮಸಮಾಜದ ಹೆಮ್ಮೆಯ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಬೇಕು.
  3. ಶಾಲಾಭಿವೃದ್ಧಿ ಸಮಿತಿಗಳು, ಶಾಲಾ,ಕಾಲೇಜು ಸಲಹಾ ಸಮಿತಿಗಳು, ಪೋಷಕರ ಸಭೆಗಳನ್ನು ವಾರಕ್ಕೊಮ್ಮೆ ಕರೆದು ಈ ಪರಿಸ್ಥಿತಿ ತಿಳಿಯಾಗುವವರೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸಾಧ್ಯವಾಗಬೇಕು. ಮಕ್ಕಳ ಭವಿಷ್ಯ ಕಟ್ಟುವ ಅನಿವಾರ್ಯತೆಯ ಕುರಿತಂತೆ ಮನನ ಮಾಡಿಸಿ ಸೌಹಾರ್ದ ವಾತಾವರಣ ಸೃಷ್ಟಿಸಬೇಕು.
  4. ಶಾಲಾ ಮಟ್ಟದಲ್ಲಿ ಸ್ಥಳೀಯ ಕಲಾವಿದರ, ಸ್ಥಳೀಯ ಸಾಹಿತಿಗಳ, ಸಾಧಕರನ್ನು‌ ಆಹ್ವಾನಿಸಿ ಮಕ್ಕಳ ಆರೋಗ್ಯಕರ ಚರ್ಚೆಗೆ ವೇದಿಕೆ ಸೃಷ್ಟಿಸಬೇಕು. ವಿದ್ಯಾರ್ಥಿಗೆ ಅವರಿಂದ‌ ಒಳಿತಿನ‌ ಪಾಠ ಮಾಡಿಸಬೇಕು, ಪ್ರಭಾವಿತರನ್ನಾಗಿಸುವ ಪ್ರಯತ್ನ ಆಗಬೇಕು
  5. ಸ್ಥಳೀಯವಾಗಿ ಇಂತಹ ವಿಭಿನ್ನ ಪ್ರಯತ್ನಗಳನ್ನು‌ ಕೈಗೊಂಡ ಶಾಲೆಗಳನ್ನ ಗುರುತಿಸಿ, ಅಭಿನಂದಿಸುವ, ಪ್ರಯತ್ನಗಳನ್ನು ದಾಖಲಿಸುವ ವ್ಯವಸ್ಥೆ ಆಗಬೇಕು
  6. ರಾಜ್ಯಮಟ್ಟದ ಪ್ರಖ್ಯಾತ ಚಲನಚಿತ್ರ‌ಕಲಾವಿದರು, ವಿವಿಧ ಸಾಧಕರುಗಳನ್ನು ಪ್ರೇರೇಪಿಸಿ ಮಕ್ಕಳನ್ನು ಉದ್ದೇಶಿಸಿ ಸಮವಸ್ತ್ರದ ಪ್ರಾಮುಖ್ಯತೆಯನ್ನು ಅರ್ಥೈಸುವ ಕಿರುಚಿತ್ರಗಳನ್ನು ದೃಶ್ಯೀಕರಿಸಿ ವೈರಲ್ ಮಾಡಬಹುದು
  7. ಖ್ಯಾತ ಹಿನ್ನೆಲೆ ಗಾಯಕರಿಂದ, ಗೀತ ಸಾಹಿತಿಗಳ‌ ನೆರವನ್ನೂ ಪಡೆದು ವಿಶಿಷ್ಟ ಹಾಡುಗಳನ್ನು ರಚಿಸಿ ಚಿತ್ರೀಕರಿಸಬಹುದು. ನನ್ನ ಶಾಲೆ, ನನ್ನ ಕಾಲೇಜು, ನನ್ನ ಹೆಮ್ಮೆ, ನನ್ನ‌ ಶಿಕ್ಷಣ, ನನ್ನ ಸಮವಸ್ತ್ರ‌ ಮತ್ತು‌ ನನ್ನದೇ ಭವಿಷ್ಯವೆನ್ನುವ ಭಾವನೆ‌ ಪ್ರತಿ ವಿದ್ಯಾರ್ಥಿಯಲ್ಲಿಯೂ ಮೂಡುವ ಪ್ರಯತ್ನಮಾಡಬೇಕು

ಇದನ್ನೂ ಓದಿ: ಪ್ರಧಾನಿ ಮೋದಿ- ಅಬು ಧಾಬಿ ದೊರೆ ನಡುವೆ ದ್ವಿಪಕ್ಷೀಯ ಸಂಬಂಧ ಶೃಂಗಸಭೆ ಇಂದು

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್​ಗೆ ತಳ್ಳಿದ್ದರು!

Published On - 12:03 pm, Fri, 18 February 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ