ಹಿಜಾಬ್ ವಿವಾದ; ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ

| Updated By: ಸುಷ್ಮಾ ಚಕ್ರೆ

Updated on: Feb 05, 2022 | 6:35 PM

Karnataka Hijab Row: ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನೇ ಧರಿಸಬೇಕು.

ಹಿಜಾಬ್ ವಿವಾದ; ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ
ಸಮವಸ್ತ್ರ ಧರಿಸಿದ ವಿದ್ಯಾರ್ಥಿನಿಯರು
Follow us on

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸಬೇಕು. ಹಿಜಾಬ್​ ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳು ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳ ನಿರ್ಧಾರವೇ ಅಂತಿಮವಾಗಿದೆ. ಹಿಜಾಬ್​, ಕೇಸರಿ ಶಾಲು ಜಟಾಪಟಿಗೆ ಬ್ರೇಕ್​ಗೆ ಪ್ರಯತ್ನ ಮಾಡಲಾಗಿದೆ.

ಕರ್ನಾಟಕದಲ್ಲಿ ಸರ್ಕಾರ ಏಕರೂಪದ ಸಮವಸ್ತ್ರವನ್ನು ಜಾರಿಗೊಳಿಸಿದೆ. ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಫಿಕ್ಸ್​ ಮಾಡಲಾಗಿದೆ. ಪಿಯು ಕಾಲೇಜುಗಳಲ್ಲಿ ನಿಗದಿಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವ ಯೂನಿಫಾರ್ಮ್​ ಧರಿಸುವುದು ಕಡ್ಡಾಯವಾಗಿದೆ. ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದರೆ ಸಮರ್ಪಕ ಉಡುಪು ಧರಿಸಬೇಕು. ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸುವುದು ಕಡ್ಡಾಯವಾಗಿದೆ.

ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರವನ್ನು ಸರ್ಕಾರ ನಿಗದಿಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ CDC ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಕಾಲೇಜುಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.

ಇದನ್ನೂ ಓದಿ: Hijab Row: ಹಿಜಾಬ್ ಹೆಸರಿನಲ್ಲಿ ಮಕ್ಕಳಲ್ಲಿ ಏಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ?; ಹೆಚ್​ಡಿ ಕುಮಾರಸ್ವಾಮಿ ಕಿಡಿ

6 ಜನರಿಂದ 700 ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ; ಹಿಜಾಬ್ ವಿವಾದದ ಕುರಿತು ಉಡುಪಿ ಜಿಲ್ಲಾಡಳಿತದ ಮೊರೆಹೋದ ವಿದ್ಯಾರ್ಥಿನಿಯರು

Published On - 6:34 pm, Sat, 5 February 22