Hijab row: ಹಿಜಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಧ್ಯಂತರ ಆದೇಶ ಪ್ರಕಟ, ಏನಿದೆ ಲಿಖಿತ ತೀರ್ಪಿನಲ್ಲಿ?

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟಿಸಿದೆ. ಹಿಜಾಬ್​ ವಿವಾದದ ಕುರಿತು ತನ್ನ ಮಧ್ಯಂತರ ಆದೇಶದಲ್ಲಿ ಕರ್ನಾಟಕ ಹೈಕೋರ್ಟ್ ಹೀಗೆ ಹೇಳಿದೆ:

Hijab row: ಹಿಜಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಧ್ಯಂತರ ಆದೇಶ ಪ್ರಕಟ, ಏನಿದೆ ಲಿಖಿತ ತೀರ್ಪಿನಲ್ಲಿ?
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 11, 2022 | 12:59 PM

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠದಿಂದ ಮಧ್ಯಂತರ ಆದೇಶ ಲಿಖಿತ ರೂಪದಲ್ಲಿಯೂ ಪ್ರಕಟವಾಗಿದೆ. ಟಿವಿ9 ಗೆ ಆದೇಶದ ಪ್ರತಿ ಲಭ್ಯವಾಗಿದೆ. ಹಿಜಾಬ್​ ವಿವಾದದ ಕುರಿತು ತನ್ನ ಮಧ್ಯಂತರ ಆದೇಶದಲ್ಲಿ ಕರ್ನಾಟಕ ಹೈಕೋರ್ಟ್ ಹೀಗೆ ಹೇಳಿದೆ: ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯೆಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ತಡೆಯಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು. ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಪ್ರಸಕ್ತ ಶೈಕ್ಷ ಕ್ಷಣಿಕ ವರ್ಷ ಇನ್ನೇನು ಅಂತ್ಯವಾಗುತ್ತಿದೆ. ಸಂಬಂಧಪಟ್ಟವರೆಲ್ಲಾ ಶಾಂತಿ ಸಾಮರಸ್ಯ ಕಾಯ್ದುಕೊಳ್ಳಬೇಕಿದೆ. ಹೀಗಾಗಿ ಶಿಕ್ಷಣ ಸಂಸ್ಥೆ ತೆರೆದು ವಿದ್ಯಾರ್ಥಿಗಳು ಮರಳಲು ಅವಕಾಶ ನೀಡಿ ಸರ್ಕಾರ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿ ಮಾಡುತ್ತೇವೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ.

ಪ್ರತಿಭಟನೆಗಳಿಂದ ಶಾಲೆ-ಕಾಲೇಜು ಮುಚ್ಚಿದ್ದು ನೋವಿನ ಸಂಗತಿ. ಸಂವಿಧಾನ ಮತ್ತು ವೈಯಕ್ತಿಕ ಕಾನೂನಿನ ಗಂಭೀರ ವಿಚಾರಣೆ ನಡೀತಿದೆ. ನಮ್ಮದು ವೈವಿಧ್ಯಮಯ ಸಂಸ್ಕೃತಿ, ಭಾಷೆ, ಧರ್ಮಗಳ ದೇಶ. ಸರ್ಕಾರಕ್ಕೆ ತನ್ನದೇ ಆದ ಧರ್ಮ ಎಂಬುದಿಲ್ಲ ಎಂದಿರುವ ಹೈಕೋರ್ಟ್‌, ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಆಚರಣೆಯ ಹಕ್ಕಿದೆ. ಆದರೆ ಈ ಹಕ್ಕು ಪರಿಪೂರ್ಣ ಹಕ್ಕಲ್ಲ, ನಿರ್ಬಂಧಗಳಿವೆ. ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೇ? ಎಂಬ ಪ್ರಶ್ನೆಯಿದೆ. ಈ ಬಗ್ಗೆ ಆಳವಾದ ವಿಚಾರಣೆ ನಡೆಸುವ ಅಗತ್ಯವಿದೆ. ನಮ್ಮದು ನಾಗರಿಕ ಸಮಾಜ ಎಂದಿರುವ ಹೈಕೋರ್ಟ್‌ನ ಪೂರ್ಣ ಪೀಠವು ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ ಎಂದಿದೆ.

ಆದಷ್ಟು ಬೇಗ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ. ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ತಮ್ಮ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಸ್ಕಾರ್ಫ್ ಅನ್ನಾಗಲೀ. ಹಿಜಾಬ್, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರುವಂತಿಲ್ಲ. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ ಎಂದು ಕೋರ್ಟ್​ ಸ್ಪಷ್ಟಪಡಿಸಿದೆ.

Hijab row karnataka high court gives written interim judgement

ಕರ್ನಾಟಕ ಹೈಕೋರ್ಟ್‌ನಿಂದ ಲಿಖಿತ ರೂಪದಲ್ಲಿ ಮಧ್ಯಂತರ ಆದೇಶ ಪ್ರಕಟ

ತುರ್ತು ವಿಚಾರಣೆಗೆ ನಕಾರ, ವಿಷಯ ದೊಡ್ಡದು ಮಾಡದಂತೆ ಸುಪ್ರೀಂಕೋರ್ಟ್ ಕಿವಿಮಾತು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವು ಸದ್ಯ ದೇಶ ವ್ಯಾಪಿಯಾಗಿದೆ. ನಿನ್ನೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಮಧ್ಯಂತರ ಮೌಖಿಕ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಮುಂದಿನ ಆದೇಶದವರೆಗೂ ವಿದ್ಯಾರ್ಥಿಗಳು ಧಾರ್ಮಿಕ ಡ್ರೆಸ್ ಧರಿಸದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 25ನೇ ವಿಧಿಯಡಿ ನೀಡಿರುವ ಹಕ್ಕು ಸಿಗಲ್ಲ ಎಂದು ಹಿಜಾಬ್ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ಸುಪ್ರೀಂಕೋರ್ಟ್​ ಮೊರೆಹೋಗಿದ್ದಾರೆ.

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವಾಗಿ ಹೈಕೋರ್ಟ್ ಮಧ್ಯಂತರ ಮೌಖಿಕ ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಆದರೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದನ್ನು ವೀಕ್ಷಿಸುತ್ತಿದ್ದೇವೆ. ಮೊದಲು ಕರ್ನಾಟಕ ಹೈಕೋರ್ಟ್ ತನ್ನ ಆದೇಶವನ್ನು ನೀಡಲಿ. ಸೂಕ್ತ ಸಂದರ್ಭದಲ್ಲಿ ನಾವು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತೇವೆ. ನಮಗೆ ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕಿದೆ. ನಾವು ಖಂಡಿತವಾಗಿಯೂ ಇದನ್ನು ಪರಿಗಣಿಸುತ್ತೇವೆ. ಯಾವುದಾದರೂ ಪರೀಕ್ಷೆಗೆ ತೊಂದರೆ ಆಗುವುದಾದರೆ ಸೂಕ್ತ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತೇವೆ. ಪ್ರಕರಣದ ಬಗ್ಗೆ ಆಲೋಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಇದನ್ನೂ ಓದಿ: Karnataka News Live: ಕರ್ನಾಟಕ ಹೈಕೋರ್ಟ್​​ನ ಮೌಖಿಕ ಸೂಚನೆ ವಿರುದ್ಧ ಮೇಲ್ಮನವಿ -ವಿಷಯ ದೊಡ್ಡದು ಮಾಡದಂತೆ ‘ಸುಪ್ರೀಂ’ ಕಿವಿಮಾತು

Published On - 11:25 am, Fri, 11 February 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ