ಹಿಜಾಬ್​: ಹೈಕೋರ್ಟ್​ ಆದೇಶ ಒಪ್ಪಲೇಬೇಕು, ರಾಜಕೀಯ ಲಾಭ-ನಷ್ಟದ ಬಗ್ಗೆ ಯೋಚನೆ ಮಾಡಲ್ಲ -ಜೆಡಿಎಸ್ ವರಿಷ್ಠ ದೇವೇಗೌಡ

ರಾಜಕೀಯ ಲಾಭ-ನಷ್ಟದ ಬಗ್ಗೆ ನಾವು ಯೋಚನೆ ಮಾಡಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ರಾಜ್ಯದಲ್ಲಿ ಶಾಂತಿ ಇರಬೇಕು, ಕಲಿಕೆಗೆ ತೊಂದ್ರೆ ಆಗಬಾರದು. ಹಿಜಾಬ್​ ವಿಚಾರದಲ್ಲಿ ಸರ್ಕಾರ ವಿಫಲವಾಯ್ತು ಅನಿಸುತ್ತದೆ. ಈ ವಿಚಾರ ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು -ಮಾಜಿ ಪ್ರಧಾನಿ ದೇವೇಗೌಡ

ಹಿಜಾಬ್​: ಹೈಕೋರ್ಟ್​ ಆದೇಶ ಒಪ್ಪಲೇಬೇಕು, ರಾಜಕೀಯ ಲಾಭ-ನಷ್ಟದ ಬಗ್ಗೆ ಯೋಚನೆ ಮಾಡಲ್ಲ -ಜೆಡಿಎಸ್ ವರಿಷ್ಠ ದೇವೇಗೌಡ
ಹಿಜಾಬ್​ ಆದೇಶ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಏನಂದರು?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 15, 2022 | 8:39 PM

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ದಿಢೀರನೆ ಎದುರಾಗಿದ್ದ ಹಿಜಾಬ್​ ವಿವಾದದ ಕುರಿತು ರಾಜ್ಯ ಹೈಕೋರ್ಟ್​ ಇಂದು ಸ್ಪಷ್ಟ ಆದೇಶ ನೀಡಿದ್ದು, ಶಾಲಾ ಕಾಲೇಜುಗಳಲ್ಲಿ ಆಡಳಿತ ಮಂಡಳಿಗಳು ನಿಗದಿಪಡಿಸುವ ಸಮವಸ್ತ್ರವನ್ನು ಕಡ್ಡಾಯವಾಗಿ ಪಾಲಿಸಬೇಕು. ಹಿಜಾಬ್​ಗೆ ಅವಕಾಶ ಇಲ್ಲ ಎಂದು ತೀರ್ಪು ನೀಡಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​.ಡಿ. ದೇವೇಗೌಡ ಅವರು (HD Deve gowda) ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಹೈಕೋರ್ಟ್​ ಆದೇಶ ಏನಿದೆ ಅದನ್ನು ಒಪ್ಪಿಕೊಳ್ಳಲೇಬೇಕು. ನಮ್ಮ ಪಕ್ಷದ ನಿಲುವು ಹೈಕೋರ್ಟ್​ ಆದೇಶದ ಪರವಾಗಿದೆ ಎಂದು ಹೇಳಿದ್ದಾರೆ (Hijab Row Karnataka High Court Verdict).

ವಿಚಾರ ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು- ರಾಜ್ಯ ಸರ್ಕಾರದ ಕಿವಿ ಹಿಂಡಿದ ಮಾಜಿ ಪ್ರಧಾನಿ ರಾಜಕೀಯ ಲಾಭ-ನಷ್ಟದ ಬಗ್ಗೆ ನಾವು ಯೋಚನೆ ಮಾಡಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ರಾಜ್ಯದಲ್ಲಿ ಶಾಂತಿ ಇರಬೇಕು, ಕಲಿಕೆಗೆ ತೊಂದ್ರೆ ಆಗಬಾರದು. ಹಿಜಾಬ್​ ವಿಚಾರದಲ್ಲಿ ಸರ್ಕಾರ ವಿಫಲವಾಯ್ತು ಅನಿಸುತ್ತದೆ. ಈ ವಿಚಾರ ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು ಎಂದೂ ರಾಜ್ಯ ಸರ್ಕಾರದ ಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ಹೈಕೋರ್ಟ್ ತೀರ್ಪಿನ ಬಗ್ಗೆ ಮಾಜಿ ಸಿಎಂ ಎಚ್​ಡಿಕೆ ಪ್ರತಿಕ್ರಿಯೆ

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಇವತ್ತು(ಮಾರ್ಚ್ 15) ಮಹತ್ವದ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದ್ರೆ ಈ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿ ನಿಬಾ ನಾಜ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿದ ತೀರ್ಪಿನ ವಿವರ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ಹೊರ ಬಿದ್ದಿದೆ. ಕುರಾನ್​​ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಪಡಿಸಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠದ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿದೆ. ಹೈಕೋರ್ಟ್ ತೀರ್ಪಿನಲ್ಲಿ ಕುರಾನ್​​ನ ಅಂಶಗಳ ಉಲ್ಲೇಖ ಮಾಡಿದೆ. ಹಿಜಾಬ್ ಬಗ್ಗೆ ಕುರಾನ್​​ನಲ್ಲಿ ಯಾವುದೇ ಪ್ರಸ್ತಾಪವಿಲ್ಲ. ಕುರಾನ್​​ನ 256ನೇ ವಚನ ಧರ್ಮದಲ್ಲಿ ಒತ್ತಾಯ ಬೇಡವೆಂದು ಹೇಳಿದೆ. ಧರ್ಮ ನಂಬಿಕೆ ಹಾಗೂ ಇಚ್ಛೆಯ ಮೇಲೆ ನಿಂತಿದೆ. ಬಲವಂತದಿಂದ ಹೇರಿದರೆ ಅರ್ಥಹೀನವೆಂದು ಹೇಳಿದೆ. ಕುರಾನ್​​ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವೆಂದು ಹೇಳಿಲ್ಲ. ಸುರಾದಲ್ಲಿ ಹಿಜಾಬ್ ಅಪೇಕ್ಷಿತ ಆದರೆ ಕಡ್ಡಾಯವಲ್ಲ ಎಂದಿದೆ. ಹೀಗಾಗಿಯೇ ಹಿಜಾಬ್ ಧರಿಸದಿರುವುದಕ್ಕೆ ದಂಡನೆ ವಿಧಿಸಿಲ್ಲ.

ಹಿಜಾಬ್ ಆಗಿನ ಕಾಲಘಟ್ಟದಲ್ಲಿ ಇಸ್ಲಾಂಗೆ ಸೀಮಿತವಾಗಿರಲಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಗಾಗಿ ಹಿಜಾಬ್ ಬಳಸಲಾಗಿತ್ತು. ಇದು ಧರ್ಮಕ್ಕಿಂತ ಆಗ ಸಂಸ್ಕೃತಿಯ ಭಾಗವಾಗಿತ್ತು. ಇಸ್ಲಾಂ ಪ್ರಾರಂಭದ ವೇಳೆ ಮಹಿಳೆಯ ಸ್ಥಿತಿ ಹೀನವಾಗಿತ್ತು. ಹೀಗಾಗಿ ಹಿಜಾಬ್ ಧರಿಸಲು ಆಗ ಸೂಚಿಸಲಾಗಿತ್ತು. ಈಗಲೂ ಅದೇ ಪರಿಸ್ಥಿತಿ ಇದೆಯೇ? ಹೀಗೆಂದು ನಮ್ಮನ್ನೇ ಪ್ರಶ್ನಿಸಿಕೊಳ್ಳಬೇಕು. ಹೀಗೆಂದು ಮುಸ್ಲಿಂ ವಿದ್ವಾಂಸ ಯೂಸುಫ್ ಅಲಿ ವಿಶ್ಲೇಷಿಸಿದ್ದಾರೆ. ಧರ್ಮದಲ್ಲಿ ಹೇಳಿರುವುದೆಲ್ಲಾ ಕಡ್ಡಾಯವೆಂದು ಭಾವಿಸಬೇಕಿಲ್ಲ. 1400 ವರ್ಷ ಹಳೆಯ ತ್ರಿವಳಿ ತಲಾಖ್ ರದ್ದುಪಡಿಸಲಾಗಿದೆ. ಸುರಾದಲ್ಲಿರುವುದನ್ನು ವಿಶ್ಲೇಷಿಸಿ ಪ್ರಮಾಣಪತ್ರ ಸಲ್ಲಿಸಿಲ್ಲ. ಯಾವುದೇ ಮೌಲ್ವಿಯ ಪ್ರಮಾಣಪತ್ರ ಸಲ್ಲಿಸಿಲ್ಲ. ಹೀಗಾಗಿ ಹಿಜಾಬ್ ಇಸ್ಲಾಂನಲ್ಲಿ ಅತ್ಯಗತ್ಯ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲಿಸಬೇಕು. ಯಾವುದೇ ಧರ್ಮದವರಾಗಿರಲಿ ಎಲ್ಲರೂ ಪಾಲಿಸಬೇಕು ಎಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 6:15 pm, Tue, 15 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ