Hijab: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ, ಮಂಗಳೂರು, ಹಾಸನ, ಹರಿಹರದಲ್ಲಿ ಪ್ರತಿಭಟನೆ

Uniform Controversy: ಬುರ್ಖಾ ಧರಿಸಿ ಕೆಲ ವಿದ್ಯಾರ್ಥಿನಿಯರು ಬರುವುದನ್ನು ಪ್ರತಿಭಟಿಸಿ ಕೇಸರಿ ಶಾಲು ಧರಿಸಿ ಕೆಲ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಕಾಣಿಸಿಕೊಂಡರು.

Hijab: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ, ಮಂಗಳೂರು, ಹಾಸನ, ಹರಿಹರದಲ್ಲಿ ಪ್ರತಿಭಟನೆ
ಹಿಜಾಬ್ ಮತ್ತು ಕೇಸರಿ ಶಾಲು (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 08, 2022 | 3:38 PM

ಬೆಂಗಳೂರು: ಕರ್ನಾಟಕದ ವಿವಿಧೆಡೆ ಹಿಜಾಬ್ (Hijab) ಮತ್ತು ಕೇಸರಿ ಶಾಲು (Saffron Shawl) ಶಾಲು ವಿವಾದ ಮುಂದುವರಿದಿದೆ. ಬುರ್ಖಾ ಧರಿಸಿ ಕೆಲ ವಿದ್ಯಾರ್ಥಿನಿಯರು ಬರುವುದನ್ನು ಪ್ರತಿಭಟಿಸಿ ಕೇಸರಿ ಶಾಲು ಧರಿಸಿ ಕೆಲ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಕಾಣಿಸಿಕೊಂಡರು. ಈ ನಡುವೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಯ ವಿಚಾರಣೆ ಆರಂಭವಾಗಿದೆ. ಹೈಕೋರ್ಟ್ ತೀರ್ಪು ನೀಡುವವರೆಗೆ ರಾಜ್ಯದಲ್ಲಿ ಸಮವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವುದಾಗಿ ಕರ್ನಾಟಕ ಸರ್ಕಾರ ಈ ಹಿಂದೆ ಸ್ಪಷ್ಟಪಡಿಸಿತ್ತು.

ಬಂಟ್ವಾಳದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್​ ವಿರೋಧಿಸಿದ ಕೆಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ಮಾಡಿತು.

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಹಿಜಾಬ್-ಕೇಸರಿಶಾಲು ವಿವಾದವನ್ನೇ ನೆಪವಾಗಿ ಇರಿಸಿಕೊಂಡು ಶಿವಮೊಗ್ಗದ ಹಲವೆಡೆ ಪುಂಡರು ಕಲ್ಲುತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸಿಆರ್​ಪಿಸಿ 144ರ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಮಾಡಿದ್ದಾರೆ. ನಗರದ ಹಲವೆಡೆ ಕಲ್ಲುತೂರಾಟ ನಡೆದಿದೆಯಾದರೂ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ನಗರದಲ್ಲಿ ಪರಿಸ್ಥಿತಿ ಸದ್ಯ ಹತೋಟಿಯಲ್ಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಸಮವಸ್ತ್ರ ಕಡ್ಡಾಯಕ್ಕೆ ಆಗ್ರಹ ಹಾಸನದಲ್ಲಿ ಹಿಜಾಬ್-ಕೇಸರಿ ಹೋರಾಟ ತಾರಕಕ್ಕೇರಿದೆ. ಹಿಜಾಬ್ ಪರ ಕೋರ್ಟ್​ ತೀರ್ಪು ಬಂದರೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಕೆಲ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಸಮವಸ್ತ್ರ ಒಂದೇ ಇರಬೇಕು. ಯೂನಿಫಾರ್ಮ್ ಮಾತ್ರ ಕಡ್ಡಾಯ ಆಗಬೇಕು, ಅವರು ಹಿಜಾಬ್ ದರಿಸಿದ್ರೆ ನಾವು ಸೀರೆ ಹಾಕಿ ಬರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿದರು. ಈವರೆಗೆ ಹಿಜಾಬ್ ಹಾಕದಿದ್ದವರೂ ಇದೀಗ ಹಿಜಾಬ್ ಹಾಕಲು ಆರಂಭಿಸಿದ್ದಾರೆ. ಹೊರಗೆ ಅವರಿಗೆ ಬೇಕಾದಂತೆ ಇರಲಿ, ಆದರೆ ಕಾಲೇಜಿನಲ್ಲಿ ಮಾತ್ರ ಸಮವಸ್ತ್ರವನ್ನಷ್ಟೇ ಧರಿಸಬೇಕೆಂದು ಒತ್ತಾಯಿಸಿದರು.

ದಾವಣಗೆರೆಯಲ್ಲಿ ಗದ್ದಲ: ಕಾಲೇಜಿಗೆ ರಜೆ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಹಿಜಾಬ್-ಕೇಸರಿ ಶಾಲು ಗದ್ದಲ ತಾರಕಕ್ಕೇರಿದೆ. ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾಲೇಜಿಗೆ ಒಂದು ದಿನದ ರಜೆ ಘೋಷಿಸಲಾಯಿತು. ಈ ವಿಷಯವನ್ನು ಪೊಲೀಸರೇ ಮೈಕ್​ಗಳಲ್ಲಿ ತಿಳಿಸಿದರು. ಪಾಲಕರ ಸಲಹೆ ಪಡೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹೇಳಿದರು.

ಹರಿಹರ ಕಾಲೇಜಿನಲ್ಲಿ ವಾಗ್ವಾದ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ, ಹಿಜಾಬ್ ಧರಿಸಿದವರು ವಿ ವಾಂಟ್ ಜಸ್ಟೀಸ್, ಇಸ್ಲಾಂ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳ ಜೊತೆ ಕಾಲೇಜಿಗೆ ಸಂಬಂಧಿಸದ ಸಾರ್ವಜನಿಕರು ಕೂಡ ಘೋಷಣೆಗಳನ್ನು ಕೂಗಲು ಆರಂಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ತೋರಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಹಿಂದೂ ಧಾರ್ಮಿಕ ಆಚರಣೆ; ಹಿಜಾಬ್ ಗಲಾಟೆ ನಡುವೆ ಮಾದರಿಯಾದ ಅಂತ್ಯ ಸಂಸ್ಕಾರ

ಇದನ್ನೂ ಓದಿ: ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವ ಮೊದಲು ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಸಚಿವ ಈಶ್ವರಪ್ಪ ಸವಾಲ್​

Published On - 3:08 pm, Tue, 8 February 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್