ಬೆಳಗಾವಿಯಲ್ಲಿ ಶಾಲೆಗಳಿಗೆ ಪೊಲೀಸರ ನಿಯೋಜನೆ, ರಬಕವಿ ಬನಹಟ್ಟಿಯಲ್ಲಿ 13 ಆರೋಪಿಗಳ ಬಂಧನ

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಎದುರು ಪೊಲೀಸರನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ

ಬೆಳಗಾವಿಯಲ್ಲಿ ಶಾಲೆಗಳಿಗೆ ಪೊಲೀಸರ ನಿಯೋಜನೆ, ರಬಕವಿ ಬನಹಟ್ಟಿಯಲ್ಲಿ 13 ಆರೋಪಿಗಳ ಬಂಧನ
ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 09, 2022 | 5:08 PM

ಬೆಳಗಾವಿ: ಹಿಜಾಬ್ ಬಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳ ಬಂದೋಬಸ್ತ್​ಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಎದುರು ಪೊಲೀಸರನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಾಲೇಜುಗಳಿಗೆ ಸರ್ಕಾರ 3 ದಿನ ರಜೆ ಘೋಷಿಸಿದ್ದರೂ ಪೊಲೀಸರನ್ನು ನಿಯೋಜಿಸಿರುವುದು ಎಲ್ಲರ ಗಮನ ಸೆಳೆದಿದೆ.

ಹಿಜಾಬ್-ಕೇಸರಿ ಶಾಲು ಗಲಾಟೆ: ರಬಕವಿ-ಬನಹಟ್ಟಿಯಲ್ಲಿ 13 ಮಂದಿ ಬಂಧನ ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಹಿಜಾಬ್-ಕೇಸರಿ ಶಾಲು ಗಲಾಟೆ ವೇಳೆ ಕಲ್ಲುತೂರಾಟ ನಡೆಸಿದ 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬನಹಟ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್​ ಹೇಳಿದ್ದಾರೆ. ಶಿಕ್ಷಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಸ್ತುತ ರಬಕವಿ-ಬನಹಟ್ಟಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ನಿಯಮ ಮೀರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಹೊಡೆದವರು ವಿದ್ಯಾರ್ಥಿಗಳಲ್ಲ: ಹಲ್ಲೆಗೊಳಗಾದ ಶಿಕ್ಷಕನ ಹೇಳಿಕೆ ಹಿಜಾಬ್-ಕೇಸರಿ ಶಾಲು ವಿವಾದದಿಂದಾಗಿ ರಬಕವಿ-ಬನಹಟ್ಟಿ ನಗರದಲ್ಲಿ ನಡೆದ ಗಲಾಟೆ ವೇಳೆ ಹಲ್ಲೆಗೊಳಗಾಗಿದ್ದ ಶಿಕ್ಷಕ ಮಂಜುನಾಥ ನಾಯಕ್ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಇವರು ಹಳಿಂಗಳಿ ಗ್ರಾಮದ ಅಲ್ಲಮಪ್ರಭು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಶಾಲಾ ಸಮಿತಿಯಲ್ಲಿ ಒಬ್ಬರು ಮೃತಪಟ್ಟಿದ್ದರು. ಹೀಗಾಗಿ ಶಾಲೆಗೆ ರಜೆ ಕೊಟ್ಟಿದ್ದೆವು. ಮಕ್ಕಳನ್ನು ಮನೆಗೆ ಕಳಿಸಿ ಬನಹಟ್ಟಿಗೆ ಬರುತ್ತಿದ್ದೆ. ಸರ್ಕಾರಿ ಪಿಯು ಕಾಲೇಜು ಬಳಿ ಪ್ರತಿಭಟನೆ ನಡೆಯುತ್ತಿತ್ತು. ಅಲ್ಲಿಯೇ ನಿಂತು ಮೊಬೈಲ್​ನಿಂದ ಫೋಟೊ ನಾಲ್ಕು ಪೊಟೊ ಕ್ಲಿಕ್ಕಿಸಿದೆ. ಆ ಹೊತ್ತಿಗೆ ಪ್ರತಿಭಟನೆ ಮುಗಿಯುವ ಹಂತಕ್ಕೆ ಬಂದಿತ್ತು ಎಂದು ಹೇಳಿದರು.

ಈ ವೇಳೆ ಟೆಂಪೊ ಒಂದು ಜಾನುವಾರು ಸಾಗಿಸುತ್ತಿತ್ತು. ಕೆಲ ಮುಸ್ಲಿಂ ಯುವಕರು ಅದನ್ನು ತಡೆದರು. ಪ್ರತಿಭಟನೆ ಮುಗಿದಿದೆ ಬಿಡಿ ಎಂದರೂ ಅವರು ಕೇಳಲಿಲ್ಲ. ಕೊನೆಗೆ ಇರಲಿ ಬಿಡಪ್ಪಾ ಗಾಡಿ ವಾಪಸ್ ತೆಗೆದುಕೊಂಡು ಹೋಗು ಅಂತ ಹೇಳುತ್ತಿದ್ದೆ. ಅಷ್ಟರಲ್ಲೇ ಹಿಂದಿನಿಂದ ನನ್ನ ತಲೆಗೆ ಏಟು ಬಿತ್ತು. ಅದು ಕಲ್ಲು ಅಥವಾ ರಾಡ್ ಅಂತ ಗೊತ್ತಾಗಿಲ್ಲ. ನಂತರ ತಿರುಗಿ ನೋಡುವಷ್ಟರಲ್ಲಿ ಮುಖಕ್ಕೆ ಪಂಚ್ ಬಿತ್ತು. ಹಿಂದಿನಿಂದ ಒಬ್ಬರೂ ಸೊಂಟಕ್ಕೆ ಒದ್ದರು. ತಲೆಗೆ ಏಟು ಬಿದ್ದು ರಕ್ತ ಸೋರುವಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ನನ್ನನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ನೆನಪಿಸಿಕೊಂಡರು.

ನಾನೊಬ್ಬ ಆರ್​ಎಸ್​ಎಸ್​ ಕಾರ್ಯಕರ್ತನಾಗಿದ್ದೆ. ಆದರೆ ಒಂದು ವರ್ಷದಿಂದ ಸಕ್ರಿಯನಾಗಿಲ್ಲ. ನನಗೆ ಯಾರು, ಏಕೆ ಹೊಡೆದರು ಎನ್ನುವುದು ಗೊತ್ತಿಲ್ಲ. ಆದರೆ ಇಷ್ಟು ಮಾತ್ರ ನಿಜ, ಯಾವುದೇ ವಿದ್ಯಾರ್ಥಿ ನನ್ನ ಮೇಲೆ ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಮೂಲತಃ ಅಂಕೋಲ ತಾಲ್ಲೂಕು ಅಗಸೂರು ಗ್ರಾಮದ ಮಂಜುನಾಥ ನಾಯಕ್ ಕಳೆದ ಹನ್ನೊಂದು ವರ್ಷಗಳಿಂದ ಜಮಖಂಡಿ, ರಬಕವಿ-ಬನಹಟ್ಟಿಯಲ್ಲಿ ನೆಲೆಸಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ ಹಿಜಾಬ್ ವಿವಾದದ ಹಿಂದೆ ವಿದೇಶಿ ಕುಮ್ಮಕ್ಕು: ಉಡುಪಿ ಶಾಸಕ ರಘುಪತಿ ಭಟ್ ಆರೋಪ

ಇದನ್ನೂ ಓದಿ: ಹಿಜಾಬ್ ವಿವಾದ ಪ್ರಕರಣ ವರ್ಗಾವಣೆ: ಸರ್ಕಾರದ ಮಟ್ಟದಲ್ಲಿ ಸಭೆ ಬಳಿಕ ಮುಂದಿನ ನಿರ್ಧಾರ ಎಂದ ಆರಗ ಜ್ಞಾನೇಂದ್ರ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ