Hijab Verdict: ಹಿಜಾಬ್ ಪ್ರಕರಣದ ಹೈಕೋರ್ಟ್ ಆದೇಶ ಯಾವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ?

| Updated By: ಗಂಗಾಧರ​ ಬ. ಸಾಬೋಜಿ

Updated on: Mar 18, 2022 | 11:34 AM

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಆದಾಗ್ಯೂ, ಸಂಪೂರ್ಣ ತೀರ್ಪು ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ/ಸಲ್ಲಿಸಲಾಗುವ ಮೇಲ್ಮನವಿಗಳಿಗೆ ಒಳಪಟ್ಟಿರುತ್ತದೆ.

Hijab Verdict: ಹಿಜಾಬ್ ಪ್ರಕರಣದ ಹೈಕೋರ್ಟ್ ಆದೇಶ ಯಾವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ?
ಪ್ರಾತಿನಿಧಿಕ ಚಿತ್ರ
Follow us on

ಹಿಜಾಬ್ (Hijab Row)  ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಲ್ಲ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿಲ್ಲ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. ಈ ನಿಟ್ಟಿನಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಯಾವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ ಮತ್ತು ಹೇಗೆ? ಎನ್ನುವುದನ್ನು ತಿಳಿಸಲಾಗಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಆದಾಗ್ಯೂ, ಸಂಪೂರ್ಣ ತೀರ್ಪು ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ/ಸಲ್ಲಿಸಲಾಗುವ ಮೇಲ್ಮನವಿಗಳಿಗೆ ಒಳಪಟ್ಟಿರುತ್ತದೆ. ಕರ್ನಾಟಕ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ / ಶಿರಸ್ತ್ರಾಣವನ್ನು (ಹಡ್ ಸ್ಕಾರ್ಫ್ ) ಧರಿಸುವುದರ ಮೇಲೆ ಸಂಪೂರ್ಣ ನಿಷೇಧವನ್ನು ವಿಧಿಸಿಲ್ಲ. 05.02.2022 ರ ಸರ್ಕಾರಿ ಆದೇಶವನ್ನು ಎತ್ತಿ ಹಿಡಿದಿದೆ. ಸರ್ಕಾರದ ಆ ಅದೇಶದಲ್ಲಿ ಹೀಗೆ ಹೇಳಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರವು ಸಮವಸ್ತ್ರವನ್ನು ನಿಗದಿಪಡಿಸಲಾಗುವುದು. ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿಯು ಸಮವಸ್ತ್ರವನ್ನು ನಿಗದಿಪಡಿಸಲಾಗುವುದು. ಪಿ.ಯು ಮಂಡಳಿಯ ಅಡಿಯಲ್ಲಿ ಬರುವ ಪಿ.ಯು ಕಾಲೇಜುಗಳಲ್ಲಿ ಕಾಲೇಜಿನಲ್ಲಿ, ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಕಾಲೇಜು ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯು ಸಮವಸ್ತ್ರವನ್ನು ನಿರ್ಧರಿಸುವುದು.

ನಿಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸಮವಸ್ತ್ರವನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಿಕೊಳ್ಳತಕ್ಕದ್ದು. ಮುಖ್ಯವಾಗಿ, ಗೌರವಾನ್ವಿತ ಕರ್ನಾಟಕದ ಉಚ್ಚ ನ್ಯಾಯಾಲಯದ ತೀರ್ಪು ಹಿಜಾಬ್​ನ್ನು ನಿಷೇಧಿಸಲು ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ನಿರ್ದೇಶನವನ್ನು ನೀಡಿಲ್ಲ.

ಮೇಲೆ ತಿಳಿಸಲಾದ ಅಧಿಕಾರಿಗಳು ಮಾತ್ರ ಸಮವಸ್ತ್ರವನ್ನು ನಿಗದಿಪಡಿಸಬಹುದು. ನ್ಯಾಯಾಲಯವು ಹಿಜಾಬ್​ನ್ನು ನಿಷೇಧಿಸುವಂತೆ ಸರ್ಕಾರಕ್ಕಾಗಲಿ, ಕಾಲೇಜು ಅಭಿವೃದ್ಧಿ ಸಮಿತಿಗಳಿಗಾಗಲಿ ಅಥವಾ ಖಾಸಗಿ ಸಂಸ್ಥೆಗಳಿಗಾಗಲಿ ಯಾವುದೇ ಆದೇಶ ನೀಡಿಲ್ಲ. ಸರ್ಕಾರಿ ಪಿಯು ಕಾಲೇಜುಗಳಲ್ಲಿ, ಕಾಲೇಜು ಅಭಿವೃದ್ಧಿ ಸಮಿತಿಯು ಸಮವಸ್ತ್ರವನ್ನು ನಿಗಡಪಡಿಸಿ, ಹಾಗು ಆ ಸಮವಸ್ತ್ರವು ನಿರ್ದಿಷ್ಟವಾಗಿ ಹಿಜಾಬ್​ನ್ನು ನಿಷೇಧಿಸಿದರೆ ಮಾತ್ರ ಆ ತರಗತಿಗಳಲ್ಲಿ ಹಿಜಾಬ್​ನ್ನು ಅನುಮತಿಸಲಾಗುವುದಿಲ್ಲ. ಹಾಗು ಈ ನಿರ್ಬಂಧನೆ ತರಗತಿ ಕೊಠಡಿಗಳಿಗೆ ಮಾತ್ರ ಅನ್ವಯಿಸುತ್ತವೆ. ಈ ಸಂದರ್ಭಗಳಲ್ಲಿ ಸಹ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ (ಕ್ಯಾಂಪಸ್‌ಗಳು) ಹಿಜಾಬ್‌ಗಳನ್ನು ಧರಿಸಬಹುದು. ಆದರೆ ತರಗತಿಗಳಲ್ಲಿ ಅಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪು ಖಾಸಗಿ ಕಾಲೇಜುಗಳು, ಪದವಿ ಕಾಲೇಜುಗಳು, ವೃತ್ತಿಪರ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕಿಯರು ಹಾಗು ಸಿಬ್ಬಂದಿಗೆ ತೀರ್ಪು ಅನ್ವಯಿಸುವುದಿಲ್ಲ.

ಇದನ್ನೂ ಓದಿ:

All England Championships: ಲಕ್ಷ್ಯ ಸೇನ್‍ಗೆ ಅಚ್ಚರಿಯ ಜಯ: ಟೂರ್ನಿಯಿಂದ ಹೊರಬಿದ್ದ ಸೈನಾ, ಸಿಂಧು