ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯ ಪ್ರಾರ್ಥನಾ ಕೇಂದ್ರಗಳ ಬಳಕೆಗೆ ತಡೆ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ತಸ್ತೀಕ್ ಮತ್ತು ವರ್ಷಾಸನ ಅನುದಾನವನ್ನು ಹಿಂದೂಯೇತರ ಸಂಸ್ಥೆಗಳಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯವ್ಯಯದಲ್ಲಿಯೇ ಪ್ರತಿವರ್ಷ ಬಿಡುಗಡೆ ಮಾಡುತ್ತಿರುವುದಕ್ಕೆ ರಾಜ್ಯ ಮತ್ತು ಧಾರ್ಮಿಕ ಪರಿಷತ್ನ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿಂದೂಯೇತರ ಸಂಸ್ಥೆಗಳಿಗೆ ಅನುದಾನವನ್ನು ಸಂಬಂಧಿಸಿದ ಹಿಂದುಳಿದ ವರ್ಗಗಳ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮುಖಾಂತರವೇ ಮಂಜೂರು ಮಾಡಲು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಹೀಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮೂಲಕ ರಾಜ್ಯದ ಹಿಂದೂಯೇತರ ಸಂಸ್ಥೆಗಳಿಗೆ ಮಂಜೂರು ಮಾಡುತ್ತಿರುವ ತಸ್ತೀಕ್, ವರ್ಷಾಸನ ಹಾಗೂ ಇತರೇ ಅನುದಾನವನ್ನು ತಕ್ಷಣದಿಂದಲೇ ತಡೆ ಹಿಡಿಯುವಂತೆ ಆದೇಶಿಸಲಾಗಿದೆ.
(hindu religious endowment department and temple money did not use to other religious places orders karnataka government)
ಇದನ್ನೂ ಓದಿ:
ಬೆಂಗಳೂರಿನಿಂದ ಜೋಗ ಜಲಪಾತ ವೀಕ್ಷಿಸಲು ಬರುವವರಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದ ಕೆಎಸ್ಆರ್ಟಿಸಿ