ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು: ಸಿಎಂಗೆ ತಿರುಗೇಟು ಕೊಟ್ಟ ಶಾಸಕ ಯತ್ನಾಳ್​

| Updated By: ಗಂಗಾಧರ​ ಬ. ಸಾಬೋಜಿ

Updated on: Aug 08, 2024 | 3:22 PM

ಇಂದು ಕೇಂದ್ರ ಸರ್ಕಾರ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲಿ ಚರ್ಚೆ ಶುರುವಾಗಿವೆ. ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು ಎಂದು ಸಿಎಂ ಸಿದ್ದರಾಮಯ್ಯಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ತಿರುಗೇಟು ನೀಡಿದ್ದಾರೆ.

ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು: ಸಿಎಂಗೆ ತಿರುಗೇಟು ಕೊಟ್ಟ ಶಾಸಕ ಯತ್ನಾಳ್​
ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು: ಸಿಎಂಗೆ ತಿರುಗೇಟು ಕೊಟ್ಟ ಶಾಸಕ ಯತ್ನಾಳ್​
Follow us on

ವಿಜಯಪುರ, ಆಗಸ್ಟ್​ 08: ಕೇಂದ್ರ ಸರ್ಕಾರ ಬಹು ನಿರೀಕ್ಷಿತ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸಿದ್ದರಾಮಯ್ಯಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ತಿರುಗೇಟು ನೀಡಿದ್ದು, ಈ ಕಾಯ್ದೆಯಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಪಟ್ಟಿರುವುದು ಹಿಂದೂಗಳು. ಮೈನಾರಿಟಿ ವೋಟ್ ಬ್ಯಾಂಕ್​ಗೆ ಅಂಜಿಕೊಂಡು ವಕ್ಫ್ ಪರ ಹೇಳಿಕೆ ನೀಡುತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವಿಟ್​ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾನೂನು ತಜ್ಞರು ಹಾಗೂ ಸಂವಿಧಾನ ತಜ್ಞರಾದ ಶ್ರೀಯುತ ಸಿದ್ದರಾಮಯ್ಯನವರೇ ನಿಮಗೆ ಗೊತ್ತೇ? ವಕ್ಫ್ ಬೋರ್ಡ್ ಬಳಿ ಸುಮಾರು 8.66 ಲಕ್ಷ ರೂ. ಆಸ್ತಿಗಳಿವೆ. 8.02 ಲಕ್ಷ ಎಕರೆ ಒಡೆತನದ ಆಸ್ತಿ ವಕ್ಫ್ ಬಳಿ ಇದೆ (ಅಂದರೆ 30 ಚಂಡೀಗಢ ದಷ್ಟು). ವಕ್ಫ್ ಟ್ರಿಬ್ಯೂನಲ್​ನಲ್ಲಿ ನೀಡಿದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯದಲ್ಲೂ ಪ್ರಶ್ನಿಸುವಂತಿಲ್ಲ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್​


ಮುಸಲ್ಮಾನ ಬಹುಸಂಖ್ಯಾತ ರಾಷ್ಟ್ರಗಳಲ್ಲೇ ವಕ್ಫ್ ಎಂಬ ಪರಿಕಲ್ಪನೆ ಇಲ್ಲ. ರಕ್ಷಣಾ ಇಲಾಖೆ ಹಾಗೂ ಭಾರತೀಯ ರೈಲ್ವೆ ಬಿಟ್ಟರೆ ಭಾರತದಲ್ಲಿ ಅತಿ ಹೆಚ್ಚು ಭೂಮಿಯ ಒಡೆತನ ಇರುವುದು ವಕ್ಫ್​​ನಲ್ಲಿ.

ಇದನ್ನೂ ಓದಿ: ಅಮಿತ್ ಶಾ ಭೇಟಿಯಾಗಿದ್ದೇಕೆ ಹೆಚ್​ಡಿ ದೇವೇಗೌಡ? ಡಿಕೆ ಶಿವಕುಮಾರ್ ಕೊಟ್ಟರು ಕಾರಣ!

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ, ತಿರುಚೆಂಥುರೈ ಹಳ್ಳಿಯಲ್ಲಿರುವ 1,500 ವರ್ಷಗಳ ಇತಿಹಾಸವಿರುವ ಸುಂದರೇಶ್ವರ ಸ್ವಾಮಿ ದೇವಸ್ಥಾನದ ಮೇಲೂ ವಕ್ಫ್ ಮಂಡಳಿಯ ‘ಕಾಕ ದೃಷ್ಟಿ’ ಬಿದ್ದಿದ್ದು ದೇವಸ್ಥಾನದ 369 ಎಕರೆ ಸಂಪೂರ್ಣವಾಗಿ ವಕ್ಪ್​ಗೆ ಸೇರಿದ್ದು ಎಂದು ಹೇಳಿತ್ತು.

ಇದನ್ನೂ ಓದಿ: ಕ್ಷೇತ್ರದ ಜನ ಬೆಂಗಳೂರಿಗೆ ಬರೋದು ಬೇಡ, ಅಹವಾಲು ಆಲಿಸಲು ನಾನೇ ಕನಕಪುರಕ್ಕೆ ಬರುವೆ; ಸಮಯ ನಿಗದಿ ಮಾಡಿದ ಡಿಕೆ ಶಿವಕುಮಾರ್

ಈ ರೀತಿಯಾದ ಏಕಪಕ್ಷೀಯವಾದ ಕಾನೂನು ಸಂವಿಧಾನದ ಆಶಯಗಳಿಗೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತಿಲ್ಲವೇ? ಅಥವಾ, ಗೊತ್ತಿದ್ದರೂ ಮೈನಾರಿಟಿ ವೋಟ್ ಬ್ಯಾಂಕ್​ಗೆ ಅಂಜಿಕೊಂಡು ವಕ್ಫ್ ಪರ ಹೇಳಿಕೆ ನೀಡುತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು,
ಎನ್​ಡಿಎಗೆ ಅಲ್ಪ ಸಂಖ್ಯಾತರ ಮೇಲೆ ಕೋಪ ಇದೆ. ಬಿಜೆಪಿ ಎಂದಿಗೂ ಜ್ಯಾತ್ಯಾತೀತರ ಪರವಾಗಿಲ್ಲ. ಸಾಮಾಜಿಕ ನ್ಯಾಯದ ಪರವಾಗಿಲ್ಲ. ಬಿಜೆಪಿ ಕಮ್ಯೂನಲ್ ಪಾರ್ಟಿ. ಇದನ್ನು ಸಹ ಅದೇ ರೀತಿ ಮಾಡಲು ಹೊರಟಿದ್ದಾರೆ. ನಾನು ಅದನ್ನು ಸಂಪೂರ್ಣವಾಗಿ ವಿರೋಧ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.