AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಫೈಟ್, ಮೈತ್ರಿ ಪಾಳಯದಲ್ಲಿ ಹೆಚ್ಚಿದ ಪೈಪೋಟಿ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿ ಮತ್ತು ಜೆಡಿಎಸ್ ನಡುವೆ ಟಿಕೆಟ್ ಪೈಪೋಟಿ ಶುರುವಾಗಿದೆ. 40 ಸಾವಿರ ಸಾಂಪ್ರದಾಯಿಕ ಮತಗಳ ಬಲದೊಂದಿಗೆ ಜೆಡಿಎಸ್ ಕ್ಷೇತ್ರ ಕೇಳುತ್ತಿದ್ದರೆ, 2018ರ ಗೆಲುವು ಮತ್ತು 60 ಸಾವಿರ ಮತಗಳ ಬೆಂಬಲ ಮುಂದಿಟ್ಟು ಬಿಜೆಪಿ ಕೂಡ ಹಕ್ಕು ಮಂಡಿಸುತ್ತಿದೆ.

ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಫೈಟ್, ಮೈತ್ರಿ ಪಾಳಯದಲ್ಲಿ ಹೆಚ್ಚಿದ ಪೈಪೋಟಿ
ಆರ್ ಅಶೋಕ ಮತ್ತು ಕುಮಾರಸ್ವಾಮಿ
ಸುನಿಲ್​ ಎಮ್​ ಹೆಚ್​
| Edited By: |

Updated on: Nov 17, 2026 | 8:41 AM

Share

ಮುಖ್ಯಾಂಶಗಳು

  • ಹಿರಿಯೂರು ಟಿಕೆಟ್‌ಗಾಗಿ ಬಿಜೆಪಿ ಜೆಡಿಎಸ್ ನಡುವೆ ಪೈಪೋಟಿ
  • 40 ಸಾವಿರ ಮತಗಳ ಬಲ ಮುಂದಿಟ್ಟ ಜೆಡಿಎಸ್
  • 2018ರ ಗೆಲುವು ಉಲ್ಲೇಖಿಸಿ ಟಿಕೆಟ್ ಕೇಳಿದ ಬಿಜೆಪಿ

ಬೆಂಗಳೂರು, ನವೆಂಬರ್ 17: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ವಿರುದ್ಧ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಬೇಕಿದ್ದ ಬಿಜೆಪಿ ಮತ್ತು ಜೆಡಿಎಸ್ ನಡುವೆಯೇ ಇದೀಗ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದೆ. ಹಿರಿಯೂರು ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ವಾದವನ್ನು ಎರಡೂ ಪಕ್ಷಗಳ ನಾಯಕರು ಮುಂದಿಡುತ್ತಿದ್ದಾರೆ.

ಉಡುಪಿಯ ಕೊಲ್ಲೂರಿನಲ್ಲಿ ಸೋಮವಾರ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಉತ್ತಮ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್‌ಗೆ ಸುಮಾರು 40 ಸಾವಿರ ಸಾಂಪ್ರದಾಯಿಕ ಮತಗಳ ಬಲವಿದೆ. 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ 1,200 ಮತಗಳ ಅಂತರದಿಂದ ಸೋಲು ಕಂಡಿದ್ದರು. ಹೀಗಾಗಿ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಬೇಕು ಎಂಬುದು ಅವರ ವಾದವಾಗಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿಯೂ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಟಿಕೆಟ್ ಕೇಳುವ ಅಧಿಕಾರ ಬಿಜೆಪಿಗೂ ಇದೆ: ಅಶೋಕ್

ಇದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಹಿರಿಯೂರು ಕ್ಷೇತ್ರದ ಟಿಕೆಟ್ ಕೇಳುವ ಅಧಿಕಾರ ಬಿಜೆಪಿಗೂ ಇದೆ ಎಂದು ಹೇಳಿದ್ದಾರೆ. ಕಳೆದ 15 ವರ್ಷಗಳ ಚುನಾವಣಾ ಫಲಿತಾಂಶ ಮತ್ತು ಮತಗಳ ಅಂಕಿ-ಅಂಶಗಳನ್ನು ಪರಿಶೀಲಿಸುವಂತೆ ಅವರು ತಿಳಿಸಿದ್ದಾರೆ. 2018ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಪಕ್ಷಕ್ಕೆ ಸುಮಾರು 60 ಸಾವಿರ ಮತಗಳ ಬೆಂಬಲವಿದೆ ಎಂಬುದು ಬಿಜೆಪಿ ನಾಯಕರ ವಾದವಾಗಿದೆ.

ಬಿಜೆಪಿ, ಜೆಡಿಎಸ್ ನಾಯಕರ ಮಾತಿನ ವಿಡಿಯೋ

ಹಿರಿಯೂರು ಕ್ಷೇತ್ರದಲ್ಲಿ ಹಿಂದೆ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಈ ಬಾರಿ ಕ್ಷೇತ್ರ ಬಿಜೆಪಿಗೆ ಸಿಗಬೇಕು ಎಂದು ರಾಜ್ಯ ನಾಯಕರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ, ಜೆಡಿಎಸ್ ನಾಯಕರ ಮನವೊಲಿಸುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ.

ಟಿಕೆಟ್ ವಿಚಾರದಲ್ಲಿ ತೆರೆಮರೆಯ ಕಸರತ್ತು

ಮೇಲ್ನೋಟಕ್ಕೆ ಮೈತ್ರಿ ಪಕ್ಷಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಹೇಳುತ್ತಿದ್ದರೂ, ಟಿಕೆಟ್ ವಿಚಾರದಲ್ಲಿ ತೆರೆಮರೆಯ ಕಸರತ್ತು ಮುಂದುವರಿದಿದೆ. ಎನ್‌ಡಿಎ ಸಮನ್ವಯ ಸಮಿತಿ ರಚನೆಯಾದ ಬಳಿಕ ಈ ವಿಚಾರ ಚರ್ಚೆಗೆ ಬರುವ ಸಾಧ್ಯತೆಯಿದ್ದು, ಅಂತಿಮವಾಗಿ ದೆಹಲಿಯ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುನಿಲ್​ ಎಮ್​ ಹೆಚ್​
ಸುನಿಲ್​ ಎಮ್​ ಹೆಚ್​
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ