ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದ್ರಾ? ಯಾರಿವರು? ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿದ್ದಿಷ್ಟು

Urigowda Nanjegowda: ಟಿಪ್ಪು ಸುಲ್ತಾನ್​ನನ್ನು ಮಂಡ್ಯದ ಉರಿಗೌಡ ಮತ್ತು ನಂಜೇಗೌಡ ಕೊಂದಿದ್ದಾರೆ ಎಂದು ಬಿಜೆಪಿಯ ಕೆಲ ನಾಯಕರು ಹೇಳುತ್ತಿದ್ದಾರೆ. ಹಾಗಾದ್ರೆ, ನಿಜಕ್ಕೂ ಟಿಪ್ಪುನನ್ನು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡನಾ? ಈ ಬಗ್ಗೆ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿದ್ದೇನು? ಈ ಕೆಳಗಿನಂತಿದೆ ನೋಡಿ.

ಟಿಪ್ಪುವನ್ನು ಉರಿಗೌಡ ನಂಜೇಗೌಡ ಕೊಂದ್ರಾ? ಯಾರಿವರು? ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿದ್ದಿಷ್ಟು
ಇತಿಹಾಸ ತಜ್ಞ ಪ್ರೋ.ನಂಜರಾಜೇ ಅರಸ್
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Mar 16, 2023 | 9:36 AM

ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಉರಿಗೌಡ ಮತ್ತು ನಂಜೇಗೌಡ (urigowda and nanjegowda) ಹೆಸರುಗಳು ಭಾರೀ ಸದ್ದು ಮಾಡುತ್ತಿವೆ. ಹೌದು..ಟಿಪ್ಪು ಸುಲ್ತಾನ್‌ನನ್ನು(Tipu Sultan) ಕೊಂದಿದ್ದು ಮಂಡ್ಯ ಜಿಲ್ಲೆಯ ಉರಿಗೌಡ ಮತ್ತು ನಂಜೇಗೌಡ ಎಂದು ಬಿಜೆಪಿಯ ಕೆಲ ನಾಯಕರು ಹೇಳುತ್ತಿದ್ದಾರೆ. ಆದ್ರೆ, ಈ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲ. ಆದರೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರೇ ಮೊದಲು ಈ ಉರಿಗೌಡ ಮತ್ತು ನಂಜೇಗೌಡ ಹೆಸರುಗಳನ್ನು ತೇಲಿಬಿಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಟಿವಿ9ಗೆ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ (Historian Prof. P.V. Nanjaraj Urs) ಪ್ರತಿಕ್ರಿಯಿಸಿದ್ದು, ಉರಿಗೌಡ ನಂಜೇಗೌಡ ಕೇವಲ ಕಾಲ್ಪನಿಕ ವ್ಯಕ್ತಿಗಳು. ರಾಣಿ ಲಕ್ಷಮ್ಮಣ್ಣಿಗೆ ತಿರುಮಲ್ ರಾವ್ -ನಾರಾಯಣ್ ರಾವ್ ಜೊತೆ ಇದ್ದಿದ್ದು. ಆದ್ರೆ‌ ಸಿ.ಟಿ.ರವಿ ಉರಿಗೌಡ ನಂಜೆಗೌಡ ಅಂತ ಸುಳ್ಳು ಹೇಳಿದ್ದಾರೆ. ಬ್ರಿಟಿಷ್- ಪರ್ಷಿಯನ್ ದಾಖಲೆಗಳಲ್ಲೂ ಇವರ ಪರಿಚಯ ಇಲ್ಲ‌. ಇವರು ಕೇವಲ‌ ಕಾಲ್ಪನಿಕ. ಎಂದು ಸ್ಪಷ್ಟಪಡಿಸಿದರು.

ಆಶ್ವಥ್ ನಾರಾಯಣ್, ಸಿ.ಟಿ.ರವಿ ಬಿಜೆಪಿಗೆ ಅವಮಾನ‌ ಮಾಡಲು ಹೊರಟ್ಟಿದ್ಧಾರೆ. ಇವರು ಸುಳ್ಳನ್ನು ಸತ್ಯ ಮಾಡಲು ಹೊರಟ್ಟಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಒಬ್ಬ ಮೂರ್ಖ. ಬೆಂಗಳೂರಿನಲ್ಲಿ ಕೆಂಪೇಗೌಡರ ಇದ್ದರು. ಇದೀಗ ಮಂಡ್ಯ ಮೈಸೂರು ಭಾಗದಲ್ಲಿ‌ ಮುಸ್ಲಿಂ ವಿರೋಧ ಮಾಡಿಕೊಂಡು ಟಿಪ್ಪು ಕೊಂದವರು ಉರಿಗೌಡ-ನಂಜೇಗೌಡ ಎಂದು ಹೀರೋಗಳನ್ನ ಹುಡುಕುತ್ತಿದ್ದಾರೆ. ಈ ಬಗ್ಗೆ ಯಾವುದೇ ದಾಖಲೆಗಳು ಇತಿಹಾಸದಲ್ಲಿ‌ ಇಲ್ಲ‌. ಇವರಿಬ್ಬರದ್ದು ಕೇವಲ ಕಾಲ್ಪನಿಕ ‌ಪಾತ್ರಗಳಷ್ಟೆ ಎಂದು ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿದರು.

ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ನಿಜ ಎಂದು ಬಿಜೆಪಿಯವರು ಬಣ್ಣಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಸುಲ್ತಾನ್‌ನನ್ನು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಈ ಹಿಂದಿನಿಂದಲೂ ವಿರೋಧ ಕೇಳಿ ಬಂದಿತ್ತು. ಮೊನ್ನೇ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಮಂಡ್ಯದಲ್ಲಿ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕಟೌಟ್​ನಿಂದ ಮಹಾದ್ವಾರವನ್ನು ನಿರ್ಮಿಸಲಾಗಿತ್ತು. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿತ್ತು. ಈ ಹಿನ್ನೆಲೆ ಇದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದವು. ಕೊನೆಗೆ ಎಚ್ಚೆತ್ತಕೊಂಡ ಬಿಜೆಪಿ, ಉರಿಗೌಡ ಮತ್ತು ದೊಡ್ಡ ನಂಜೇಗೌಡ ಬ್ಯಾನರ್​ ತೆರವುಗೊಳಿಸಿತ್ತು. ಈ ಮೂಲಕ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿತ್ತು.

Published On - 11:56 am, Wed, 15 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ