AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನಗೆ ಬಿಗ್ ಶಾಕ್: ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್​ಗೆ ಕಾನೂನು ಸಚಿವ ಪತ್ರ

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಜಾತಿ ನಿಂದನೆ, ಬೆದರಿಕೆ ಆರೋಪದ ಮೇಲೆ ಜೈಲು ಸೇರಿದ್ದ ಮುನಿರತ್ನ ಜಾಮೀನುನ ಮೇಲೆ ಬಿಡುಗಡೆಯಾಗಿದ್ದರು. ಆದ್ರೆ, ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ್ದು, ಈಗ ಸದನದ ಸದಸ್ಯತ್ವದಿಂದ ಮುನಿರತ್ನ ಅವರನ್ನ ಅಮಾನತು ಮಾಡುವಂತೆ ಸ್ಪೀಕರ್​ಗೆ ಪತ್ರ ಬರೆಯಲಾಗಿದೆ.

ಮುನಿರತ್ನಗೆ ಬಿಗ್ ಶಾಕ್: ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್​ಗೆ ಕಾನೂನು ಸಚಿವ ಪತ್ರ
ಮುನಿರತ್ನ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 23, 2024 | 8:59 PM

Share

ಬೆಂಗಳೂರು, (ಸೆಪ್ಟೆಂಬರ್ 23):ಶಾಸಕ ಮುನಿರತ್ನ ಮಾಡಿರುವ ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ ಮತ್ತಷ್ಠು ಗಂಭೀರ ಸ್ವರೂಪದ ಹನಿಟ್ರ್ಯಾಪ್ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಇನ್ನು ಮುನಿರತ್ನ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ವಹಿಸಿದೆ. ಮತ್ತೊಂದೆಡೆ ಮುನಿರತ್ನ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ಮಧ್ಯ ವಿಧಾನಸಭೆ ಸದಸ್ಯತ್ವದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕೆಂದು ಸ್ವತಃ ಕಾನೂನು ಸಚಿವ ಎಚ್​ಕೆ ಪಾಟೀಲ್ ಅವರು ಸ್ಪೀಕರ್​ ಯುಟಿ ಖಾದರ್​​ಗೆ ಪತ್ರ ಬರೆದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಅವರು ಸಭಾಧ್ಯಕ್ಷ ಯುಟಿ ಖಾದರ್​ ಅವರಿಗೆ ಪತ್ರ ಬರೆದಿದ್ದು, ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ರವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ನೀತಿ-ನಿರೂಪಣಾ ಸಮಿತಿ ರಚನೆ ಮಾಡಿ, ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು ಎಂದಿದ್ದಾರೆ.

ಇದನ್ನೂ ಓದಿ: ಮುನಿರತ್ನ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು

ಎಚ್​ಕೆ ಪಾಟೀಲ್ ಬರೆದ ಪತ್ರದಲ್ಲೇನಿದೆ?

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ . ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ನೀತಿ-ನಿರೂಪಣಾ ಸಮಿತಿ” (Ethics Committee of State Legislature) ರಚನೆ ಮಾಡಿ. ಆ ಸಮಿತಿಯ ಮೂಲಕ ಅಸಭ್ಯವಾಗಿ ವರ್ತಿಸುವ ಸದಸ್ಯರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು ಎಂದು ಸ್ಪೀಕರ್​ ಯುಟಿ ಖಾದರ್​​ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ