AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HLL ಲೈಫ್‌ಕೇರ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲಿ ನೇರ ಸಂದರ್ಶನ

HLL ಲೈಫ್‌ಕೇರ್ ಬೆಂಗಳೂರಿನ ಬಿಬಿಎಂಪಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ವಿವಿಧ ತಾಂತ್ರಿಕ ಮತ್ತು ಅಕೌಂಟ್ಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆಸಕ್ತರು ಸೆಪ್ಟೆಂಬರ್ 12 ರಂದು ರೋಸ್‌ವುಡ್ ಇಂಟರ್ನ್ಯಾಷನಲ್ ಹೋಟೆಲ್‌ನಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಕನ್ಸಲ್ಟೆಂಟ್ ವೈದ್ಯರ ಹುದ್ದೆಗಳಿಗೆ ಸೆಪ್ಟೆಂಬರ್ 30 ರೊಳಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ಗೆ ಭೇಟಿ ನೀಡಿ.

HLL ಲೈಫ್‌ಕೇರ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲಿ ನೇರ ಸಂದರ್ಶನ
HLL ಲೈಫ್‌ಕೇರ್ ಸಂಸ್ಥೆ
ಅಕ್ಷತಾ ವರ್ಕಾಡಿ
|

Updated on: Sep 09, 2026 | 12:25 PM

Share

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿರುವ ‘ಮಿನಿ ರತ್ನ’ ಸಾರ್ವಜನಿಕ ವಲಯದ ಉದ್ಯಮವಾದ HLL ಲೈಫ್‌ಕೇರ್ ಲಿಮಿಟೆಡ್ ವಿವಿಧ ವೃತ್ತಿಪರ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯು ನಿಗದಿತ ಗುತ್ತಿಗೆ (FTC) ಆಧಾರದ ಮೇಲೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನ ವಿಜಯನಗರದ ಗೋವಿಂದರಾಜನಗರ ವಾರ್ಡ್‌ನಲ್ಲಿರುವ ‘ಬಿಬಿಎಂಪಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ’ಗೆ ನಿಯೋಜಿಸಲಾಗುವುದು.

ನೇರ ಸಂದರ್ಶನದ ವಿವರಗಳು:

ತಾಂತ್ರಿಕ ಹಾಗೂ ಅಕೌಂಟ್ಸ್ ವಿಭಾಗದ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ನೇರ ಸಂದರ್ಶನವು ಸೆಪ್ಟೆಂಬರ್ 12 ರಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ನಡೆಯಲಿದೆ. ಸಂದರ್ಶನ ನಡೆಯುವ ಸ್ಥಳ: ರೋಸ್‌ವುಡ್ ಇಂಟರ್ನ್ಯಾಷನಲ್ ಹೋಟೆಲ್, ಸಂಖ್ಯೆ 19/1, ಮೈಸೂರು ರಸ್ತೆ, ಸ್ಯಾಟಲೈಟ್ ಬಸ್ ಸ್ಟಾಪ್ ಹತ್ತಿರ, ನ್ಯೂ ಟಿಂಬರ್‌ಯಾರ್ಡ್ ಲೇಔಟ್, ಟೆಲಿಕಾಂ ಕಾಲೋನಿ, ಬನಶಂಕರಿ, ಬೆಂಗಳೂರು, ಕರ್ನಾಟಕ – 560026.

ಲಭ್ಯವಿರುವ ಹುದ್ದೆಗಳು:

ಈ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ತಾಂತ್ರಿಕ, ವೈದ್ಯಕೀಯ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅದರಲ್ಲಿ ಜೂನಿಯರ್ ಲ್ಯಾಬ್ ಟೆಕ್ನಿಷಿಯನ್, ಲ್ಯಾಬ್ ಟೆಕ್ನಿಷಿಯನ್, ಸೀನಿಯರ್ ಲ್ಯಾಬ್ ಟೆಕ್ನಿಷಿಯನ್, ಅಕೌಂಟ್ಸ್ ಆಫೀಸರ್, ರೇಡಿಯೋಗ್ರಾಫರ್, ರೇಡಿಯೋಗ್ರಾಫರ್ ಮತ್ತು ಜೂನಿಯರ್ ರೇಡಿಯೋಗ್ರಾಫರ್ ಹುದ್ದೆಗಳು ಸೇರಿವೆ.

ಕನ್ಸಲ್ಟೆಂಟ್ ವೈದ್ಯರ ಹುದ್ದೆಗಳು:

HLL ಸಂಸ್ಥೆಯು ಕನ್ಸಲ್ಟೆಂಟ್ ಪ್ಯಾನಾಲಜಿಸ್ಟ್-MD (Consultant Pathologist-MD) ಹುದ್ದೆಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ನೇರ ಸಂದರ್ಶನವಿರುವುದಿಲ್ಲ. ಬದಲಿಗೆ, ಆಸಕ್ತ ವೈದ್ಯರು ತಮ್ಮ ನವೀಕರಿಸಿದ CV ಯನ್ನು ಸೆಪ್ಟೆಂಬರ್ 30 ರೊಳಗೆ hcsrecruitment@lifecarehll.com ಇಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಪೋಸ್ಟ್ ಆಫೀಸ್ ಜಿಡಿಎಸ್ ಕೆಲಸ ನಿಜಕ್ಕೂ ಖಾಯಂ ಸರ್ಕಾರಿ ಕೆಲಸವೇ? ವೇತನ, ಸೌಲಭ್ಯಗಳ ಸಂಪೂರ್ಣ ವಿವರ!

ಅಗತ್ಯ ದಾಖಲೆಗಳು:

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ನವೀಕರಿಸಿದ CV ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರವನ್ನು ತರಬೇಕು. ಇದರೊಂದಿಗೆ ಶೈಕ್ಷಣಿಕ ಅರ್ಹತೆ, ಅನುಭವದ ಪ್ರಮಾಣಪತ್ರಗಳು, ಅಂಕಪಟ್ಟಿಗಳ ಅಸಲಿ ಹಾಗೂ ಸ್ವಯಂ-ದೃಢೀಕರಿಸಿದ (Self-attested) ಪ್ರತಿಗಳು ಮತ್ತು ಮಾನ್ಯವಾದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು.

ಸಂಪರ್ಕ ಮಾಹಿತಿ:

ಅರ್ಹತಾ ಮಾನದಂಡಗಳನ್ನು ಪರಿಶೀಲಿಸಲು ಮತ್ತು ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.lifecarehll.com/careers ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಫೋನ್ ಸಂಖ್ಯೆ 9400060468 ಅಥವಾ ಇಮೇಲ್ hcsrecruitment@lifecarehll.com ಮೂಲಕ ಸಂಸ್ಥೆಯನ್ನು ಸಂಪರ್ಕಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು