AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ

ಎಚ್​ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ, ಕರ್ನಾಟಕದಲ್ಲಿ ಈ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜ್ವರ, ಕೆಮ್ಮು ಇದ್ದು ಆಸ್ಪತ್ರೆಗೆ ಹೋದವರಿಗೆಲ್ಲ ಎಚ್​ಎಂಪಿವಿ ಟೆಸ್ಟ್ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: Ganapathi Sharma

Updated on: Jan 08, 2025 | 9:50 AM

ಬೆಂಗಳೂರು, ಜನವರಿ 8: ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ.

ಈ ವಿಚಾರವಾಗಿ ಇಂದು (ಬುಧವಾರ) ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರದಿಂದ 12 ಸಾವಿರ ರೂ!

ಖಾಸಗಿ ಆಸ್ಪತ್ರೆಗಳಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.

ಅಪಾಯಕಾರಿ ವೈರಸ್ ಅಲ್ಲ: ಆರೋಗ್ಯ ಇಲಾಖೆ

ಸಾಮಾನ್ಯವಾಗಿ ಚಳಿಗಾಲದಲ್ಲಿ ವೈರಸ್ ಕಾಣಿಸಿಕೊಳ್ಳುವುದು ಸಹಜ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಎಚ್​​ಎಂಪಿವಿ ಟೆಸ್ಟಿಂಗ್ ಮಾಡುವುದಿಲ್ಲ. ಈ ವೈರಸ್ ಅಪಾಯಕಾರಿ ಅಲ್ಲ ಎಂದು ಆರೋಗ್ಯ ‌ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಪತ್ತೆಯಾಗಿರುವುದು ಚೀನಾದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ವೈರಸ್ ಅಲ್ಲ ಎಂದು ಈಗಾಗಲೇ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಈಗಾಗಲೇ ವೈರಸ್ ಪತ್ತೆಯಾಗಿದೆ. ಅದಕ್ಕೂ ಮುನ್ನ ಶಿವಮೊಗ್ಗದಲ್ಲಿ ವೈರಸ್ ಪತ್ತೆಯಾಗಿರುವ ಬಗ್ಗೆ ನಂತರ ಬೆಳಕಿಗೆ ಬಂದಿತ್ತು. ಆದರೆ, ಈ ಎಲ್ಲ ವೈರಸ್ ಸೋಂಕು ಪ್ರಕರಣಗಳಲ್ಲಿ ಸೋಂಕಿಗೆ ಒಳಗಾದ ಮಕ್ಕಳು ಸದ್ಯ ಆರೋಗ್ಯವಾಗಿದ್ದಾರೆ.

ಇದನ್ನೂ ಓದಿ: ಎಚ್​ಎಂಪಿವಿ ವೈರಸ್: ಆರೋಗ್ಯ ಇಲಾಖೆ ಜತೆ ಸಿಎಂ ಸಿದ್ದರಾಮಯ್ಯ ಸಭೆ, ಜನರಿಗೆ ಅಭಯ

ದೇಶದಾದ್ಯಂತ ಈವರೆಗೆ ಒಟ್ಟು 7 ಹೆಚ್ಎಂಪಿವಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಕರ್ನಾಟಕದಲ್ಲಿ 2, ತಮಿಳುನಾಡಿನಲ್ಲಿ 2, ಮಹಾರಾಷ್ಟ್ರದಲ್ಲಿ 2, ಗುಜರಾತ್​ನಲ್ಲಿ 1 ಪ್ರಕರಣ ದೃಢಪಟ್ಟಿವೆ.

ಎಚ್‌ಎಂಪಿವಿ ವೈರಸ್ ಬಗ್ಗೆ ಭಯ ಅಗತ್ಯವಿಲ್ಲ. ಮುನ್ನೆಚ್ಚರಿಕೆ ವಹಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ