HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 25, 2024 | 9:37 PM

ಕರ್ನಾಟಕ ಅರಣ್ಯ ಇಲಾಖೆಯು ಹೆಚ್‌ಎಂಟಿಯಿಂದ 5 ಎಕರೆ ಅರಣ್ಯ ಭೂಮಿಯನ್ನು ಮರುಪಡೆದುಕೊಂಡಿದೆ. ಪೀಣ್ಯದಲ್ಲಿರುವ ಈ ಭೂಮಿಯನ್ನು ಸುಪ್ರೀಂ ಕೋರ್ಟ್‌ನ "ಒಮ್ಮೆ ಅರಣ್ಯವಾಗಿದ್ದರೆ ಯಾವಾಗಲೂ ಅರಣ್ಯವೇ" ಎಂಬ ತೀರ್ಪಿನ ಆಧಾರದ ಮೇಲೆ ಮರುಸ್ವಾಧೀನಪಡಿಸಿಕೊಳ್ಳಲಾಗಿದೆ.

HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ
HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ
Follow us on

ಬೆಂಗಳೂರು, ಅಕ್ಟೋಬರ್​ 25: ಹೆಚ್ಎಂಟಿ ವಶದಲ್ಲಿದ್ದ ಸುಮಾರು 150 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ. ಹೆಚ್ಎಂಟಿ ಬಳಿಯಿರುವ ಎಲ್ಲ ಅರಣ್ಯ ಭೂಮಿ ಮರುವಶಕ್ಕೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwara Khandre) ಸೂಚನೆ ನೀಡಿದ್ದ ಬೆನ್ನಲ್ಲೇ ಇದೀಗ ಮರುವಶಕ್ಕೆ ಪಡೆದುಕೊಳ್ಳಲಾಗಿದೆ.

ಹೆಚ್​ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಹೆಚ್​ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್​​ನ ಒಟ್ಟೂ 599 ಎಕರೆ ಅರಣ್ಯ ಇದರ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ.

ಅರಣ್ಯ ಇಲಾಖೆ ಫಲಕವನ್ನು ನೆಟ್ಟು ಅಧಿಕಾರಿಗಳು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. ಸದ್ಯ ಹೆಚ್​ಎಂಟಿ ಮತ್ತು ಅರಣ್ಯ ಇಲಾಖೆ ನಡುವೆ ಜಟಾಪಟಿ ನಡೆಯುತ್ತಿದೆ.

ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ

ಇನ್ನು ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸಲು, ಹೆಚ್.ಎಂ.ಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನಲ್ಲಿ 5 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಈಶ್ವರ ಖಂಡ್ರೆ ಟ್ವೀಟ್

ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಬೃಹತ್ ಉದ್ಯಾನವನ್ನು ನಿರ್ಮಿಸುವ ಗುರಿಯೊಂದಿಗೆ, ಈ ಕ್ರಮವು ಉತ್ತರ ಬೆಂಗಳೂರಿನಲ್ಲಿ ಶುದ್ಧ ವಾತಾವರಣ ಒದಗಿಸಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್

“once a forest is always a forest” ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ನೈಸರ್ಗಿಕ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.