Raj Bhavan Bomb Threat: ಬೆಂಗಳೂರು ಶಾಲೆ ಬೆನ್ನಲ್ಲೇ ಈಗ ರಾಜ ಭವನಕ್ಕೆ ಬಾಂಬ್ ​ಬೆದರಿಕೆ ಕರೆ

Hoax bomb threat call: ರಾಜ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ ಬಂದಿದೆ. ಸೋಮವಾರ (ಡಿ.11)ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ.

Raj Bhavan Bomb Threat: ಬೆಂಗಳೂರು ಶಾಲೆ ಬೆನ್ನಲ್ಲೇ ಈಗ ರಾಜ ಭವನಕ್ಕೆ ಬಾಂಬ್ ​ಬೆದರಿಕೆ ಕರೆ
ರಾಜ ಭವನ
Follow us
| Updated By: Digi Tech Desk

Updated on:Dec 12, 2023 | 12:24 PM

ಬೆಂಗಳೂರು, ಡಿಸೆಂಬರ್​ 11: ರಾಜಭವನಕ್ಕೆ (Raj Bhavan) ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ (Bomb threat call ) ಬಂದಿದೆ. ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ಸೋಮವಾರ (ಡಿ.11)ರ ರಾತ್ರಿ 11.30ರ ಸುಮಾರಿಗೆ ರಾಜ ಭವನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಅಪರಿಚಿತರು ಕರೆ ಮಾಡಿದ್ದಾರೆ. ರಾಜ ಭವನ ಭದ್ರತಾ ಅಧಿಕಾರಿಗಳು ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಪೊಲೀಸರು ಮತ್ತು ಬಾಂಬ್​ ಸ್ಕ್ವಾಡ್​ ಸ್ಥಳಕ್ಕೆ ಧಾವಿಸಿದ್ದಾರೆ. ಹಲವು ಗಂಟೆಗಳ ಕಾಲ ಪರಿಶೀಲಿಸಿದ ಬಳಿಕ, ಇದು ಹುಸಿ ಬಾಂಬ್​ ಕರೆ ಎಂದು ತಿಳಿದಬಂದಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ

ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್​ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಸರಿಯಾಗಿ 12 ದಿವಸದ ಹಿಂದೆ ಡಿಸೆಂಬರ್​​ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿತ್ತು. ಇದು ಶಾಲಾ ಆಡಳಿತ ಮಂಡಳಿಗೆ ಶಾಕ್​ ನೀಡಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ತಂಡ ಸ್ಥಳಕ್ಕೆ ದೌಡಾಯಿಸಿದ್ದರು. ಎಲ್ಲ ಶಾಲೆಗಳನ್ನು ಪರಿಶೀಲಿಸಿದ್ದರು. ಆಗ ಇದೊಂದು ಹುಸಿ ಬಾಂಬ್​ ಬೆದರಿಕೆ ಕರೆ ಎಂದು ತಿಳಿಯಿತು. ಇನ್ನು ವಿಷಯಗೊತ್ತಾಗುತ್ತಿದ್ದಂತೆ ಶಾಲೆಗಳಿಗೆ ತೆರಳಿದ ಪೋಷಕರು ಮಕ್ಕಳನ್ನು ಮನೆಗಳಿಗೆ ಕರೆದುಕೊಂಡು ಬಂದಿದ್ದರು. ಅಂದು ಒಂದು ಶಾಲೆಗಳಿಗೆ ರಜೆ ನೀಡಲಾಗಿತ್ತು.

ಇದನ್ನೂ ಓದಿ: ರಾಮನಗರ: ತೆಂಗಿನ ಕಾಯಿ ಅನ್ಕೊಂಡು ತಪಾಸಣೆ; ಅಷ್ಟರಲ್ಲೆ ಸಿಡಿದ ನಾಡ ಬಾಂಬ್!

ಯಾವ ಯಾವ ಪ್ರದೇಶದ ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದ್ದವು. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದಾಗ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿತ್ತು. ಬನ್ನೇರುಘಟ್ಟದ 7 ಶಾಲೆಗಳಿಗೆ, ಹೆಬ್ಬಗೋಡಿಯ 4, ಸರ್ಜಾಪುರದ 5, ಜಿಗಣಿಯ 2 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು.

ಬೆಂಗಳೂರಿನ ದಕ್ಷಿಣ ವಲಯ-1 ರಲ್ಲಿ 15 ಶಾಲೆಗಳಿಗೆ, ದಕ್ಷಿಣ ವಲಯ 2ರಲ್ಲಿ 3, ವಲಯ 3ರಲ್ಲಿ 10 ಹಾಗೂ ವಲಯ 4ರಲ್ಲಿ 4 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಉತ್ತರ ವಲಯಗಳಲ್ಲಿ ಒಟ್ಟು 7 ಶಾಲೆಗಳಿಗೆ ಹಾಗೂ ಅನೇಕಲ್ ತಾಲೂಕಿನ 5 ಶಾಲೆಗಳಿಗೂ ಬಾಂಬ್​ ಬೆದರಿಕೆ ಇಮೇಲ್ ಬಂದಿದ್ದವು.

48 ಎಫ್​ಐಆರ್​ ದಾಖಲು, ತನಿಖೆ ಆರಂಭ

ಶಾಲೆಗಳಿಗೆ ಬಾಂಬ್​ ಬೆದರಿಕೆ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಒಟ್ಟು 48 ಎಫ್​ಐಆರ್​ಗಳು ದಾಖಲಾಗಿವೆ. ಈ ಎಲ್ಲಾ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.  

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:14 am, Tue, 12 December 23

ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ