AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿಲ್ಲೂ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ನಾಳೆ (ಆಗಸ್ಟ್ 03) ಕೆಲ ತಾಲೂಕುಗಲ್ಲಿ ಶಾಲಾ-ಕಾಲೇಜುಗಳಿಗೆ ರಝೆ ಘೋಷಣೆ ಘೋಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನೊಂದೆಡೆ ಉತ್ತರ ಕನ್ನಡ ಜಿಲ್ಲೆಯ

ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Aug 02, 2026 | 10:26 PM

Share

ಶಿವಮೊಗ್ಗ, (ಆಗಸ್ಟ್ 02): ಕರ್ನಾಟಕದಲ್ಲಿ ಮುಂಗಾರು ಮಳೆ (monsson Rain) ಆರಂಭದಲ್ಲಿ ಕೈಕೊಟ್ಟಿದ್ದರೂ ಸಹ ಜುಲೈ ಅಂತ್ಯದಿಂದ ಚುರುಕುಗೊಂಡಿದೆ. ಅದರಲ್ಲೂ ಕರಾವಳಿ (Karavali) ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣ ಅಬ್ಬರದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಆದರೂ ಮಳೆ ಅಬ್ಬರ ಇಲ್ಲಿ ನಿಂತಿಲ್ಲ. ಮುಂದಿನ ದಿನಗಳಲ್ಲೂ ಸಹ ಮುಂದುವರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) , ಉತ್ತರ ಕನ್ನಡ  (Uttara Kannada)  ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ನಾಳೆ (ಆಗಸ್ಟ್ 03) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಕೆಲ ತಾಲೂಕುಗಳಲ್ಲಿ ರಜೆ

ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ. ನಾಳೆ (ಆಗಸ್ಟ್ 03) ದಾಂಡೇಲಿ, ಜೋಯಿಡಾ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ತೀರ್ಥಹಳ್ಳಿಯಲ್ಲಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಸಾಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.

ಕೊಪ್ಪ, ಶೃಂಗೇರಿಯಲ್ಲೂ  ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪ, ಶೃಂಗೇರಿ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ(ಸೋಮವಾರ) ರಜೆ ನೀಡಲಾಗಿದೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚನೆ ನೀಡಿದ್ದಾರೆ. ಜೊತೆಗೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡದಲ್ಲೂ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗದಲ್ಲಿ ನಾಳೆ (ಆಗಸ್ಟ್ 03) ಅಂಗನವಾಡಿಯಿಂದ ಹೈಸ್ಕೂಲ್ ವರೆಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಬಂಟ್ವಾಳ, ಮುಲ್ಕಿ ತಾಲೂಕಿನಲ್ಲಿ ಹೈಸ್ಕೂಲ್ ವರೆಗೆ ಮಾತ್ರ ರಜೆ ನೀಡಲಾಗಿದೆ. ಇನ್ನು ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ಅಂಗನವಾಡಿಯಿಂದ ಪಿಯುಸಿವರೆಗೂ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಗೆ ರೆಡ್​​ ಅಲರ್ಟ್​​​

ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿ ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇಷೆಲ್ಲಾ ಅವಾಂತರಗಳು ಸೃಷ್ಟಿಸಿದ ವರುಣನ ಅಬ್ಬರ ಮುಂದುವರೆಯಲಿದೆ. ಹೌದು…ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್​​​ ಸಹ ಘೋಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Sun, 2 August 26

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!