AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ SDRF ನ ಎರಡನೇ ಕಂತಿನ ಹಣವನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಈ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಈ ವರ್ಷ ಅತಿವೃಷ್ಠಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವು ನೀಡಲು ಈ ನಿಧಿಯನ್ನು ಬಳಸಲಾಗುವುದು ಎಂದು ತಿಳಿಸಿದ್ದಾರೆ. ಹಾಗಾದ್ರೆ, ಮಹಾರಾಷ್ಟ್ರಕ್ಕೆ, ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ
Amit Shah
ರಮೇಶ್ ಬಿ. ಜವಳಗೇರಾ
|

Updated on:Oct 30, 2025 | 5:04 PM

Share

ನವದೆಹಲಿ, (ಅಕ್ಟೋಬರ್ 19): ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ (Karnataka)  ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ (SDRF) 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಪತ್ತುಗಳ ಸಂದರ್ಭದಲ್ಲೂ, ಅದರ ನಂತರವೂ ಜನರ ಜೊತೆಯೇ ಮೋದಿ ಸರ್ಕಾರ ನಿಂತಿದೆ. ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ SDRF ನ ಕೇಂದ್ರ ಪಾಲಿನ ಎರಡನೇ ಕಂತಾಗಿ ರೂ. 1,950.80 ಕೋಟಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಈ ವರ್ಷ ಅತಿವೃಷ್ಠಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವು ನೀಡಲು ಈ ನಿಧಿಯನ್ನು ಬಳಸಲಾಗುವುದು. ಈ ವರ್ಷ ಕೇಂದ್ರ ಸರ್ಕಾರವು SDRF ಅಡಿಯಲ್ಲಿ 27 ರಾಜ್ಯಗಳಿಗೆ ರೂ. 13,603.20 ಕೋಟಿ ಮತ್ತು NDRF ಅಡಿಯಲ್ಲಿ 15 ರಾಜ್ಯಗಳಿಗೆ ರೂ. 2,189.28 ಕೋಟಿಯನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ನೈರುತ್ಯ ಮುಂಗಾರಿನಿಂದ ತೀವ್ರ ಹಾನಿಗೊಳಗಾದ ಜನರಿಗೆ ತ್ವರಿತವಾಗಿ ನೆರವು ಒದಗಿಸಲು ಒಟ್ಟು ಮೊತ್ತದಲ್ಲಿ ಕರ್ನಾಟಕಕ್ಕೆ 384.0 ಕೋಟಿ ರೂಪಾಯಿ ಹಾಗೂ ಮಹಾರಾಷ್ಟ್ರಕ್ಕೆ 1566.40 ಕೋಟಿ ರೂಪಾಯಿ ನೀಡಲಾಗಿದೆ. ಪ್ರವಾಹ ಭೂಕುಸಿತ ಮೇಘಸ್ಫೋಟಕ್ಕೆ ಒಳಗಾದ ರಾಜ್ಯಗಳಿಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಲಹೆಯಂತೆ ಕೇಂದ್ರ ಸರ್ಕಾರ ತನ್ನ ಬದ್ಧತೆಯನ್ನು ವ್ಯಕ್ತಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್​ ಡಿಆರ್ ಎಫ್​ ನ ಅಡಿಯಲ್ಲಿ ಕೇಂದ್ರದ ಪಾಲಾದ 13,603.20 ಕೋಟಿ ರೂ. 27 ರಾಜ್ಯಗಳಿಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್​ ಡಿಆರ್ ಎಫ್) ಅಡಿಯಲ್ಲಿ 15 ರಾಜ್ಯಗಳಿಗೆ 2,189.28 ಕೋಟಿ ರೂ. ಮೊತ್ತವನ್ನು ಕೇಂದ್ರ ಸರ್ಕಾರವು ಈ ವರ್ಷ ಬಿಡುಗಡೆ ಮಾಡಿದೆ. ಇದಲ್ಲದೇ ಹೆಚ್ಚುವರಿಯಾಗಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್​ ಡಿಆರ್ ಎಫ್) ಅಡಿಯಲ್ಲಿ 21 ರಾಜ್ಯಗಳಿಗೆ 4,571.30 ಕೋಟಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎಸ್​​ಡಿಆರ್​ ಎಫ್) ಅಡಿಯಲ್ಲಿ 9 ರಾಜ್ಯಗಳಿಗೆ 372.09 ಕೋಟಿ ರೂ. ನೆರವು ನೀಡಲಾಗಿದೆ.

Published On - 8:17 pm, Sun, 19 October 25

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?