ಹಳೆ ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸದಂತೆ ಎಚ್ಚರ ವಹಿಸಲು ಅಮಿತ್ ಶಾ ತಾಕೀತು

|

Updated on: Apr 03, 2024 | 12:34 PM

ನಿನ್ನೆ ಶಾ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು ಮತ್ತು ಅದರಲ್ಲಿ ಭಾಗಿಯಾಗಿದ್ದ ಜೆಇಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯರು, ಕ್ಷೇತ್ರದ ಪ್ರಾಕೃತಿಕ ಸಂಪನ್ಮೂಲಗಳನ್ನು ಕೊಳ್ಳೆಹೊಡೆದಿದ್ದು ಬಿಟ್ಟರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸಹೋದರರ ಕೊಡುಗೆ ಏನೂ ಇಲ್ಲ ಎಂದರು. ಡಾ ಸಿಎನ್ ಮಂಜುನಾಥ್ ಅವರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹೃದಯ ಒಂದಾಗಿರುವುದರಿಂದ ಗೆಲುವಿನತ್ತ ದಾಪುಗಾಲು ಇಡುತ್ತಿದ್ದೇವೆ ಎಂದರು.

ಬೆಂಗಳೂರು: ಬಿಜೆಪಿ ವರಿಷ್ಠ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಕರ್ನಾಟದ ಯಾವ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಬೇಕು ಅಂತ ಚೆನ್ನಾಗಿ ಗೊತ್ತಿದೆ. ಹಳೆ ಮೈಸೂರು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಮಟ್ಟಹಾಕಿದರೆ ರಾಜ್ಯ ಕಾಂಗ್ರೆಸ್ ನ ಜಂಘಾಬಲ ಉಡುಗಿ ಹೋಗುತ್ತದೆ ಅನ್ನೋದನ್ನು ಅರಿತಿರುವ ಅಮಿತ್ ಶಾ ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಆಶೋಕ ಮತ್ತು ಶಾಸಕ ಸಿಎನ್ ಅಶ್ವಥ್ ನಾರಾಯಣ ಅವರೊಂದಿಗೆ ಸುಧೀರ್ಘವಾದ ಚರ್ಚೆ ನಡೆಸಿ ಯಾವ ಕಾರಣಕ್ಕೂ ಹಳೆ ಮೈಸೂರು ಭಾಗ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸದಂತೆ ಎಚ್ಚರವಹಿಸಲು ತಾಕೀತು ಮಾಡಿದ್ದಾರೆ. ಅವಶ್ಯವಿರುವ ತಂತ್ರಗಾರಿಕೆಯನ್ನೂ ಅವರು ಚರ್ಚಿಸಿದ್ದಾರೆ.

ನಿನ್ನೆ ಶಾ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು ಮತ್ತು ಅದರಲ್ಲಿ ಭಾಗಿಯಾಗಿದ್ದ ಜೆಇಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯರು, ಕ್ಷೇತ್ರದ ಪ್ರಾಕೃತಿಕ ಸಂಪನ್ಮೂಲಗಳನ್ನು ಕೊಳ್ಳೆಹೊಡೆದಿದ್ದು ಬಿಟ್ಟರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸಹೋದರರ ಕೊಡುಗೆ ಏನೂ ಇಲ್ಲ ಎಂದರು. ಡಾ ಸಿಎನ್ ಮಂಜುನಾಥ್ ಅವರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹೃದಯ ಒಂದಾಗಿರುವುದರಿಂದ ಗೆಲುವಿನತ್ತ ದಾಪುಗಾಲು ಇಡುತ್ತಿದ್ದೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಮಿತ್ ಶಾ ಅವರನ್ನು ಗೂಂಡಾ ಎನ್ನುವ ಯತೀಂದ್ರ ಸಿದ್ದರಾಮಯ್ಯ ತಾನೇನಂತೆ? ಹೆಚ್ ಡಿ ಕುಮಾರಸ್ವಾಮಿ

Published on: Apr 03, 2024 12:29 PM