ಮತಾಂತರ ವಿಚಾರ: ಬೇರೆ ರಾಜ್ಯಗಳ ಕಾಯ್ದೆ ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ- ಆರಗ ಜ್ಞಾನೇಂದ್ರ

ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸ್ತೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಮತಾಂತರ ವಿಚಾರ: ಬೇರೆ ರಾಜ್ಯಗಳ ಕಾಯ್ದೆ ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ- ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ganapathi bhat

Updated on:Sep 21, 2021 | 5:23 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತಾಂತರ ಹೆಚ್ಚಾಗುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಕೆಲ ಸದಸ್ಯರು ಪ್ರಸ್ತಾಪಿಸಿದ್ದಾರೆ. ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ, ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸ್ತೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಸ್ಯಾಟಲೈಟ್ ಫೋನ್ ಬಳಕೆ ಕಾನೂನುಬಾಹಿರ ಆಗಿದೆ. 2011 ರಲ್ಲಿಯೇ ಕೇಂದ್ರ ಸರ್ಕಾರ ಇದನ್ನು ನಿಷೇಧಿಸಿದೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಸ್ಯಾಟಲೈಟ್ ಫೋನ್ ಬಳಕೆ‌ಯ ಬಗ್ಗೆ ಮಾಹಿತಿ‌ ಬಂದಿದೆ. ಕೇಂದ್ರದ ರಾ ಸಂಸ್ಥೆಯ ಜತೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪಾಕಿಸ್ತಾನ ಏಜೆಂಟ್ ಬಂಧಿಸಲಾಗಿದೆ. ಸೇನಾ ಅಧಿಕಾರಿಗಳ ಸೂಚನೆ ಮೇರೆಗೆ ಬಂಧಿಸಿದ್ದಾರೆ. ಪಾಕ್ ಏಜೆಂಟ್ ಏನು ಮಾಡುತ್ತಿದ್ದ ಎಂಬ ಮಾಹಿತಿ ಸಂಗ್ರಹ ಮಾಡಲಾಗಿದೆ. ಬೆಂಗಳೂರಿನಲ್ಲಿ ಘಟನೆಯಾಗಿರುವ ಹಿನ್ನೆಲೆ ಆತಂಕ ಇದೆ. ಆದ್ರೆ ನಮ್ಮ ಭದ್ರತಾ ಸಿಬ್ಬಂದಿ ಮೇಲೆ‌ ನಮಗೆ ನಂಬಿಕೆ ಇದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಐಎಸ್​ಐ ಜತೆ ಜಿತೇಂದ್ರ ಸಿಂಗ್ ನಂಟು; ಸ್ಫೋಟಕ ಮಾಹಿತಿ ಬಯಲು ಐಎಸ್​ಐ ಜತೆ ನಂಟು ಹೊಂದಿದ್ದ ಜಿತೇಂದ್ರ ಸಿಂಗ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಆತನ ವಿರುದ್ಧ ದಾಖಲಾದ ಸ್ಫೋಟಕ ಮಾಹಿತಿ ಬಯಲಾಗಿದೆ. ಆತ ಕರಾಚಿಯ ಇಂಟೆಲಿಜೆನ್ಸ್ ಆಪರೇಟಿವ್ ಜೊತೆ ನೇರ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. ಜಿತೇಂದ್ರ ಬಗ್ಗೆ ಪೊಲೀಸರಿಂದ ಸಂಪೂರ್ಣ ಮಾಹಿತಿ ಸಂಗ್ರಹ ಮಾಡಲಾಗಿದೆ. ಜಾಲಿ ಮೊಹಲ್ಲಾದಲ್ಲಿರುವ ಜಿತೇಂದ್ರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಿಲಿಟರಿ ಡ್ರೆಸ್ ಹಾಕಿಕೊಂಡು ಫೋಟೋಗಳ ರವಾನೆ ಮಾಡಿದ್ದ. ಆತ ಪಾಕಿಸ್ತಾನದ ಬೇಹುಗಾರಿಕೆಗೆ ಫೋಟೊಗಳ ರವಾನೆ ಮಾಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಬಂಧಿತ ಉಗ್ರನಿಗೆ ಉಪ್ಪಿನಂಗಡಿ ನಂಟು ಶಂಕೆ; ಸ್ಫೋಟಕ ಮಾಹಿತಿ ಬಯಲು

ಇದನ್ನೂ ಓದಿ: ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ

Published On - 3:48 pm, Tue, 21 September 21

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ