‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’

Araga Jnanendra: ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ.

‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’
ಆರಗ ಜ್ಞಾನೇಂದ್ರ
Follow us
TV9 Web
| Updated By: ganapathi bhat

Updated on:Aug 10, 2021 | 3:16 PM

ಬೆಂಗಳೂರು: ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಹಾಕಲಾಗಿರುವ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕೋಟ ಶ್ರೀನಿವಾಸ್ ಪೂಜಾರಿ ಪತ್ರದ ವಿಚಾರವಾಗಿ ಇಂದು (ಆಗಸ್ಟ್ 10) ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಪತ್ರ ಕೊಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. ರೈತರು,ಕನ್ನಡ ಪರ ಸಂಘಗಳ ಮೇಲೆ ಕೂಡ ಬೇಕು ಅಂತಲೇ ಹಿಂದಿನ ಸರ್ಕಾರ ಕೇಸ್ ಹಾಕಿದ್ದಾರೆ. ಅದನ್ನು ಹಿಂಪಡೆಯುವಂತೆಯೂ ಆದೇಶ ನೀಡಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಅಪ್ಪಚ್ಚು ರಂಜನ್ ಸಚಿವ ಸ್ಥಾನ ಬೇಡಿಕೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಗೊಂದಲ ಏನಿಲ್ಲ. ಸ್ಥಾನ ಖಾಲಿ ಇದೆ. ಅದಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವ್ರು ಕೂಡ ಹಿರಿಯರಿದ್ದಾರೆ ಎಂದು ಜ್ಞಾನೇಂದ್ರ ತಿಳಿಸಿದ್ದಾರೆ. ಸಚಿವ ಹಾಗೂ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ. ಅದನ್ನು ಉದ್ದ ಮಾಡೋದು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಜೆಪಿ, ಸಂಘ ಪರಿವಾರ ಕಾರ್ಯಕರ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿನ್ನೆಯಷ್ಟೇ (ಆಗಸ್ಟ್ 9) ಪತ್ರದ ಮುಖೇನ ಮನವಿ ಮಾಡಿದ್ದರು. ಈ ಸಂಬಂಧ, ಇಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲೆ ಹಾಕಿರುವ ದುರುದ್ದೇಶಪೂರಿತ ದೂರುಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ಹಾಗೆಯೇ, ರೈತರು ಮತ್ತು ಕನ್ನಡಪರ ಸಂಘಗಳ ಮೇಲೆ, ಹಿಂದಿನ ಸರ್ಕಾರ ಬೇಕೆಂದೇ ಹಾಕಿರುವ ಪ್ರಕರಣಗಳನ್ನು ಕೂಡ ಹಿಂಪಡೆಯುವಂತೆ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೂ ಶುಭಾಶಯ ಕೋರಿ ಪೋಸ್ಟರ್, ಫುಲ್ ವೈರಲ್

(Home Minister Araga Jnanendra on False Cases against Kannada Organization People KS Eshwarappa Statement)

Published On - 2:52 pm, Tue, 10 August 21

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು