ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ
ಆರಗ ಜ್ಞಾನೇಂದ್ರ
Follow us
TV9 Web
| Updated By: ganapathi bhat

Updated on:Aug 21, 2021 | 3:47 PM

ಶಿವಮೊಗ್ಗ: ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಿಯಲ್ ಎಸ್ಟೇಟ್, ಡ್ರಗ್ಸ್​ಗೆ ಕಡಿವಾಣ ಹಾಕಲು ಸೂಚಿಸಿದ್ದೇನೆ. ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಕಮಿಷನರೇಟ್​ ಸ್ಥಾಪನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಇಂದು (ಆಗಸ್ಟ್ 21) ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮರಳು, ಕ್ವಾರಿಗಳ ಸಮಸ್ಯೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಕಂದಾಯ ಇಲಾಖೆ ವ್ಯಾಪ್ತಿಯ ಕಲ್ಲು ಕ್ವಾರಿಗಳ ಸಮಸ್ಯೆ, 94ಸಿ ಮೊದಲಾದ ಸಮಸ್ಯೆ ಬಗೆಹರಿಸಲು ಸಚಿವರ ಸಭೆ ನಡೆಸಲಾಗಿದೆ.

ಆಫ್ಘನ್​ನಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ ರಕ್ಷಣೆಗಾಗಿ ಅಧಿಕಾರಿ ನೇಮಕ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್​ ನೇಮಕ ಮಾಡಿದ್ದೇವೆ ಎಂದು ಈ ವೇಳೆ ಮಾತನಾಡಿದ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಜಿಲ್ಲೆಗೆ ಸಂಬಂಧಿಸಿದ ಮರಳು , ಜಲ್ಲಿ ಕ್ವಾರಿಗಳ ಸಮಸ್ಯೆ, 94 ಸಿ ಮೊದಲಾದ ಸಮಸ್ಯೆ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಇರುವ ಅಕ್ರಮ ವಲಸಿಗರ ಬಗ್ಗೆ ಈ ಮೊದಲು ಮಾತನಾಡಿದ್ದ ಆರಗ ಜ್ಞಾನೇಂದ್ರ, ಅವರದ್ದು ಭಾರೀ ಸಮಸ್ಯೆ ಇದೆ. ಅವರು ಬೇಕೆಂದೇ ಸಣ್ಣಪುಟ್ಟ ಕೇಸ್ ಹಾಕಿಸಿಕೊಳ್ಳುತ್ತಾರೆ. ಪ್ರಕರಣ ಮುಗಿಯೋವರೆಗೂ ಹೊರಗೆ ಹೋಗೋ ಹಾಗಿಲ್ಲ. ಇಲ್ಲೇ ನೆಲೆಸುವ ಪ್ರಯತ್ನವೂ ಆಗುತ್ತಿದೆ. ಈಗ ಅಂತವರನ್ನ ಹೊರ‌ ಕಳುಹಿಸುವ ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದವರನ್ನ ಅರೆಸ್ಟ್ ಮಾಡಬೇಕು, ಇಲ್ಲಾ ಹೊರ ದೂಡಬೇಕು. ಬೆಂಗಳೂರಲ್ಲಿ ಈ ಸಮಸ್ಯೆ ಇರುವುದನ್ನು ವಿಶೇಷವಾಗಿ ಹೇಳಿದ್ದೀನಿ ಎಂದು ಹೇಳಿದ್ದರು. ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾಗೂ ರೌಡಿಸಂ ನಿರ್ಮೂಲನೆಯನ್ನು ಉದ್ದೇಶಿಸಿ ಅವರು ಕೆಲವು ಬಾರಿ ಮಾತನಾಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಕಮಲ್ ಪಂತ್ ಹಾಗೂ ಉಮೇಶ್ ಕುಮಾರ್ ಹೇಳಿಕೆ ಅಫ್ಘಾನಿಸ್ತಾನದಲ್ಲಿ ಬೆಂಗಳೂರಿನವರು ಸಿಲುಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಕಮಲ್ ಪಂತ್, ಇದುವರೆಗೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ. ಯಾರಾದ್ರೂ ಸಂಪರ್ಕಿಸಿದ್ರೆ ನೋಡಲ್​ ಅಧಿಕಾರಿಗೆ ಮಾಹಿತಿ ನೀಡುವೆ ಎಂದು ಹೇಳಿದ್ದಾರೆ. ಇತ್ತ, ಟಿವಿ9 ಜೊತೆಗೆ ಮಾತನಾಡಿದ ನೋಡಲ್ ಅಧಿಕಾರಿ ಉಮೇಶ್‌ ಕುಮಾರ್, ಆಫ್ಘನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕೆಲಸ ಮಾಡುತ್ತಿದ್ದೇವೆ. ನಮಗೆ ಇರುವ ಮಾಹಿತಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕೊಡ್ತಿದ್ದೇವೆ. ಆಫ್ಘನ್‌ನಲ್ಲಿ ಒಟ್ಟು ಎಷ್ಟು ಕನ್ನಡಿಗರಿದ್ದಾರೆ ಎಂಬ ನಿಖರ ಮಾಹಿತಿ ಇಲ್ಲ. ಈವರೆಗೆ ನಮ್ಮನ್ನು ಇಬ್ಬರು ಮಾತ್ರ ಸಂಪರ್ಕ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಲೆನಾಡು, ಕೊಡಗಿನಲ್ಲಿ ತುಂಬಾ ಖುಷಿ ಅಥವಾ ದುಃಖ ಆದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಾಲೇಜು ಕ್ಯಾಂಪಸ್​ಗಳಲ್ಲಿ ಇನ್ಫೋಸಿಸ್​, ವಿಪ್ರೋ ಮುಂತಾದ ಐಟಿ ಕಂಪನಿಗಳಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಉದ್ಯೋಗಾವಕಾಶ!

Published On - 3:40 pm, Sat, 21 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ