ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ; ಕ್ಲಿಷ್ಟ ಪರಿಸ್ಥಿತಿಯಲ್ಲೂ ಚಾಣಾಕ್ಷತೆ ಮೆರೆದಿದ್ದಾರೆ ನಮ್ಮ ಪೊಲೀಸರು – ಬಸವರಾಜ್ ಬೊಮ್ಮಾಯಿ

ಹಬ್ಬ ಹರಿದಿನ ಬಿಟ್ಟು ಕೆಲಸ ಮಾಡುತ್ತಿರುವ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ‌. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಕಾನೂನು ಸುವ್ಯವಸ್ಥೆಯನ್ನು ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಪಾಲನೆ ಮಾಡುತ್ತಿದ್ದಾರೆ.

ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ; ಕ್ಲಿಷ್ಟ ಪರಿಸ್ಥಿತಿಯಲ್ಲೂ ಚಾಣಾಕ್ಷತೆ ಮೆರೆದಿದ್ದಾರೆ ನಮ್ಮ ಪೊಲೀಸರು - ಬಸವರಾಜ್ ಬೊಮ್ಮಾಯಿ
ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ
Follow us
shruti hegde
|

Updated on:Apr 02, 2021 | 1:00 PM

ಬೆಂಗಳೂರು: ಸೈಬರ್ ಕ್ರೈಂ ಭೇದಿಸುವಲ್ಲಿ ಪೊಲೀಸರು ದಕ್ಷತೆ ಮೆರೆದಿದ್ದಾರೆ. ನಮ್ಮ ಪೊಲೀಸರು ಡ್ರಗ್ಸ್​ ಜಾಲವನ್ನು ಸದೆ ಬಡೆದಿದ್ದಾರೆ. ಕ್ಲಿಷ್ಟ ಪರಿಸ್ಥಿತಿಯಲ್ಲೂ ಚಾಣಾಕ್ಷತೆ ಮೆರೆದಿದ್ದಾರೆ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಮಾತನಾಡಿದರು. ಇಂದು (ಏಪ್ರಿಲ್​ 2) ನಗರದ ಕೋರಮಂಗಲದ ಕೆ.ಎಸ್​.ಆರ್​.ಪಿ ಮೈದಾನದಲ್ಲಿ ನಡೆದ ಪೊಲೀಸ್​ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಕುರಿತಂತೆ ಮಾತನಾಡುತ್ತಿದ್ದ ಅವರು ಜಿಲ್ಲೆಗೊಂದು ಎಫ್ಎಸ್ಎಲ್ ತೆರೆಯಲು ಚಿಂತನೆ ನಡೆಸಲಾಗಿದೆ. ಕಾಲೇಜು ಹೆಣ್ಣು ಮಕ್ಕಳಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ಕೊಡಲಿದ್ದೇವೆ. ನಮ್ಮ ಪೊಲೀಸರು ಎಂಥ ಸವಾಲನ್ನೂ ಮೆಟ್ಟಿ ನಿಲ್ಲುತ್ತಾರೆ. ಯಾವುದೇ ಪರಿಸ್ಥಿತಿಯಲ್ಲಿಯೂ ನಮ್ಮ ಪೊಲೀಸರು ತಾಳ್ಮೆಯಿಂದ ಟೀಕೆ ಟಿಪ್ಪಣಿಗಳನ್ನು ಸಹಿಸಿ ಉತ್ತರ ಕೊಡುವ ವಿಶ್ವಾಸ ಹೊಂದಿದ್ದಾರೆ ಎಂದು ಮಾತನಾಡಿದರು.

ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಮಾತನಾಡಿ, ದೇಶದಲ್ಲಿಯೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ರಾಜ್ಯದ ಪೊಲೀಸರು ಕಾನೂನು ಸುವ್ಯವಸ್ಥೆ ಪಾಲಿಸುತ್ತಿದ್ದಾರೆ. ಜೊತೆಗೆ, ಆಧುನಿಕ ತಂತ್ರಜ್ಞಾನ ಬಳಕೆಯಲ್ಲೂ ಮುಂಚೂಣಿಯಲ್ಲಿದ್ದಾರೆ. ಭಯೋತ್ಪಾದಕ ಚಟುವಟಿಕೆ, ನಕ್ಸಲ್ ಚಟುವಟಿಕೆ ನಿಯಂತ್ರಣ ಮಾಡುತ್ತಿದ್ದಾರೆ. ನಿಮ್ಮ ಸೇವೆ ಇತರರಿಗೂ ಮಾದರಿಯಾಗಲಿ ಎಂದರು.

police flag day

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಪೊಲೀಸ್​ ಅಧಿಕಾರಿಗಳಿಗೆ ಪದಕ ನೀಡಿ ಗೌರವಿಸಿದರು

ಹಬ್ಬ ಹರಿದಿನ ಬಿಟ್ಟು ಕೆಲಸ ಮಾಡುತ್ತಿರುವ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ‌. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಕಾನೂನು ಸುವ್ಯವಸ್ಥೆಯನ್ನು ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಪಾಲನೆ ಮಾಡುತ್ತಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸರು ಕವಾಯತು ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೊಲೀಸ್​ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಪದಕ ನೀಡಿ ಗೌರವಿಸಿದರು. ಒಟ್ಟು 125 ಪೊಲೀಸ್​ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪದಕ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಪೊಲೀಸ್​ ಮಹಾನಿರ್ದೇಶಕ ಪ್ರವೀಣ್​ ಸೂದ್​ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾದರು.

police flag day

ಕ್ಲಿಷ್ಟ ಪರಿಸ್ಥಿತಿಯಲ್ಲೂ ಚಾಣಾಕ್ಷತೆ ಮೆರೆದ ಪೊಲೀಸರಿಗೆ ಸೆಲ್ಯೂಟ್​ ಹೊಡೆದ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ

ನೆಲಮಂಗಲ ಪೋಲಿಸರಿಂದ ಪೋಲಿಸ್ ಧ್ವಜ ದಿನಾಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಲಿಸರಿಂದ ಪೋಲಿಸ್ ಧ್ವಜ ದಿನಾಚರಣೆ ಆಚರಿಸಿದರು. ಎಸ್​ಪಿ ರವಿ ಡಿ. ಚನ್ನಣ್ಣನವರ್, ಹೆಚ್ಚುವರಿ ಎಸ್​ಪಿ ಲಕ್ಷ್ಮೀಗಣೇಶ್ ನೇತೃತ್ವದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಪೋಲಿಸ್ ಅಧಿಕಾರಿ ಶಿವಣ್ಣ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಪೋಲಿಸ್ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಸಿಡಿ ಸಂತ್ರಸ್ತೆಯ ಭದ್ರತೆಗೆ ಪೊಲೀಸ್​ ಕಬ್ಬಡಿ ಟೀಂ ರೆಡಿ!

(Home Minister Basavaraj Bommai says Karnataka Police department is best in country at police flag day event in Bangalore)

Published On - 12:58 pm, Fri, 2 April 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್